ರಾಯಚೂರು | ಫೇಸ್ಬುಕ್‌ನಲ್ಲಿ ಆರ್‌ಎಸ್‌ಎಸ್‌, ಪ್ರಧಾನಿ ಮೋದಿ, ಸಾವರ್ಕರ್‌ಗೆ ಅಪಮಾನ : ಪ್ರಕರಣ ದಾಖಲು

Date:

ಫೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ಆರ್‌ಎಸ್‌ಎಸ್‌, ಪ್ರಧಾನಿ ಮೋದಿ ಹಾಗೂ ವಿ.ಡಿ.ಸಾವರ್ಕರ್ ವಿರುದ್ಧ ಅವಮಾನಿಸುವ ರೀತಿಯಲ್ಲಿ ಪೋಸ್ಟ್‌ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಓರ್ವ ವ್ಯಕ್ತಿಯ ವಿರುದ್ಧ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೈಸಲ್ ಕೆಎಸ್‌ಟಿ ಎಂಬ ಹೆಸರಿನ ಫೇಸ್‌ಬುಕ್‌ ಖಾತೆ ಹೊಂದಿರುವ ಲಿಂಗಸಗೂರು ಪಟ್ಟಣದ ಅಮೀರ್ ಹುಸೇನ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

ಫೇಸ್ಬುಕ್‌ ನಲ್ಲಿ ‘RSS hindu agatawadi sangatana’, ‘RSS shreeram sena hindu agatawadi sangatana’ ಹಾಗೂ ಪ್ರಧಾನಿ ಮೋದಿ ಅವರಿಗೆ ʼgaddar gaddar hi baat kar hai’ ಸೇರಿದಂತೆ ಇತರೆ ಅವಾಚ್ಯ ಶಬ್ದ ಬಳಸಿ ನಿಂದನಾತ್ಮಕ ರೀತಿಯಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡಿರುವುದಾಗಿ ಪ್ರಕರಣದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ ಪದಗಳನ್ನು ಬಳಕೆ ಮಾಡಲಾಗಿದೆ. ಅದರ ಮುಂದಿನ ದಿನವಾದ ಅಕ್ಟೋಬರ್ 6 ರಂದು ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಕುರಿತು ಅಪಮಾನಕಾರಿ ಪೋಸ್ಟ್‌ ಹಾಕಲಾಗಿದೆ ಎಂದು ಎಂದು ದೂರಿದ್ದಾರೆ.

ಹೀಗೆ ಫೇಸ್‌ಬುಕ್‌ನಲ್ಲಿ ಇಬ್ಬರು ಆರ್‌ಎಸ್‌ಎಸ್ ಗಣವೇಶಧಾರಿಗಳು ಪರಸ್ಪರ ಚುಂಬಿಸುವ ರೀತಿಯಲ್ಲಿ ಫೋಟೊ ಎಡಿಟ್‌ ಮಾಡಿ ಶೇರ್‌ ಮಾಡಿ ಧಾರ್ಮಿಕ ಭಾವನೆಗೆ ಹಾನಿ ಉಂಟುಮಾಡುವ ರೀತಿಯಲ್ಲಿ ಹಂಚಿಕೊಂಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತು

ಸಮಾಜದಲ್ಲಿ ಕೋಮುವಾದ ಮತ್ತು ಶಾಂತಿ ಕದಡುವ ಉದ್ದೇಶದಿಂದ ಹಿಂದೂ ಆತಂಕವಾದಿ ಎಂಬ ವಾಕ್ಯ ಬಳಸಿ ಧರ್ಮದ ಅವಹೇಳನ ಮಾಡಿದ್ದಲ್ಲದೆ, ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಹಣಮಂತ ವಾಸುನಾಯಕ ಎಂಬುವವರು ದೂರು ನೀಡಿದ್ದಾರೆ. ದೂರಿನ್ವಯ ಲಿಂಗಸೂಗೂರು ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...