ಕರ್ನಾಟಕ ರಾಜ್ಯ ಸರ್ಕಾರ ಪಾಸು ಮಾಡಿದ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ–2025ನ್ನು ಮಾನ್ಯ ರಾಜ್ಯಪಾಲರು ಕೆಲವು ತಿದ್ದುಪಡಿಗಳಿಗಾಗಿ ಸರ್ಕಾರಕ್ಕೆ ವಾಪಸ್ಸು ಕಳುಹಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಗೆ ಆಗಮಿಸುವ ಸಚಿವರಿಗೆ ಘೇರಾವ್, ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಸಂಪೂರ್ಣ ಒಳಮೀಸಲಾತಿ ಜಾರಿಗೆ ಒತ್ತಾಯಿಸಲಾಗುವುದು ಎಂದು ಮಾದಿಗ ದಂಡೋರ ಜಿಲ್ಲಾಧ್ಯಕ್ಷ ನರಸಿಂಹಲು ಮರ್ಚೆಟಹಾಳ ಹೇಳಿದರು.
ಪತ್ರಿಕಾ ಪ್ರಕಟಣೆ ಹೊರಡಿಸಿ, ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸಂಪೂರ್ಣ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾನ್ಯ ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಯಾವುದೇ ಸಚಿವರು ಯಾವ ಜಿಲ್ಲೆಗೆ ಭೇಟಿ ನೀಡಿದರೂ ಪ್ರತಿಭಟನೆ, ಘೇರಾವ್ ಹಾಗೂ ಕಪ್ಪುಬಾವುಟ ಪ್ರದರ್ಶನ ಹೋರಾಟಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಸ್ಕಾಂ ಉಗ್ರಾಣಕ್ಕೆ ನುಗ್ಗಿ ಕಳುವು ಯತ್ನ; ಓರ್ವ ಮಹಿಳೆ ಬಂಧನ
ಬಡ್ತಿ ಎಸ್‌ಸಿಪಿ ಯೋಜನೆಯ ಹಣಹಂಚಿಕೆ, ಸ್ಥಳೀಯ ಸಂಸ್ಥೆಗಳಲ್ಲಿ ಶೇ. 6:6:5 ಅನುಪಾತದ ಒಳಮೀಸಲಾತಿ ಜಾರಿ, ಸಮಾಜಕಲ್ಯಾಣ ಇಲಾಖೆಯಲ್ಲಿ ಪ್ರವರ್ಗ–ಎಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ ಹಾಗೂ ಮೇಲ್ವಿಚಾರಣಾ ಸಮಿತಿ ರಚನೆ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತದೆ ಎಂದು ತಿಳಿಸಿದರು.





