ರಾಯಚೂರು | ಆಹಾರ ಇಲಾಖೆಯಲ್ಲಿ ಅವ್ಯವಹಾರ; ಸೂಕ್ತ ತನಿಖೆಗೆ ಕರವೇ ಆಗ್ರಹ

Date:

ಸಿಂಧನೂರು ಆಹಾರ ಇಲಾಖೆಯಲ್ಲಿ ಬಂದಿರುವ ಪಡಿತರ ಧಾನ್ಯಗಳನ್ನು ಕಾಳ ಸಂತೆಗೆ ಸರಬರಾಜು ಮಾಡುತ್ತಿದ್ದಾರೆ ಇಲಾಖೆಯ ವಿರುದ್ಧ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣ ವೇದಿಕೆ(ಶಿವರಾಮೇಗೌಡ ಬಣ)ಯಿಂದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ಪಡಿತರ ವಿತರಣೆಗಾಗಿ ಬಂದಿರುವ ಪಡಿತರ ಧಾನ್ಯಗಳನ್ನು ಕಾಳಸಂತೆಗೆ ಕಳುಸುತ್ತಿದ್ದು, ಪ್ರತಿ ತಿಂಗಳೂ 4-5 ಲಕ್ಷ ಅವ್ಯವಹಾರ ಮಾಡಿಕೊಂಡು ಬರಲಾಗಿದೆ. ಮೇಲಾಧಿಕಾರಿಗಳು ಸಮಗ್ರ ತನಿಖೆಗೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

“ಸಿಂಧನೂರು ಅಹಾರ ಇಲಾಖೆಯಲ್ಲಿ ಅಧಿಕಾರಿ ಶಿರಸ್ತೇದಾರ ಆನಂದ ಮತ್ತು ವ್ಯವಸ್ಥಾಪಕ ದಾವಲ್ ಸಾಬ ಒಗ್ಗೂಡಿ ಪಡಿತರ ಧಾನ್ಯಗಳನ್ನು ಲೂಟಿ ಹೊಡೆಯುತ್ತಿದ್ದು, ನಿತ್ಯವೂ ದಂಧೆ ಪ್ರಾರಂಭ ಮಾಡಿದ್ದಾರೆ. ಪ್ರಶ್ನೆ ಮಾಡಿದರೆ ಉಡಾಫೆ ಉತ್ತರ ನೀಡುತ್ತಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಂಧನೂರು ತಾಲೂಕಿನ 150 ನ್ಯಾಯಬೆಲೆ ಅಂಗಡಿಗಳು ಇದ್ದು, ಪ್ರತಿಯೊಂದು ಅಂಗಡಿಯಿಂದ ಪ್ರತಿ ತಿಂಗಳೂ 1 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಅಂದರೆ ಪ್ರತಿ ತಿಂಗಳೂ 150 ಕ್ವಿಂಟಲ್ ಅಕ್ಕಿಯನ್ನು ಮಾರಾಟ ಮಾಡಿಕೊಂಡು ಇಬ್ಬರೂ ಸೇರಿ ಸಮಪಾಲು ಭಾಗ ಮಾಡಿಕೊಳ್ಳುತ್ತಿದ್ದು, ಇದು ಅವ್ಯವಹಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಅದರಂತೆ ಗೋದಾಮು ವ್ಯವಸ್ಥಾಪಕ ದಾವಲ್ ಸಾಬ 2,250 ಪಡಿತರವನ್ನು ಪಡೆದುಕೊಂಡು ಇಬ್ಬರದೂ ಸೇರಿ ಬೇರೆ ಬೇರೆ ತಾಲೂಕಿನ ಕಾಳಸಂತೆಗೆ ಈ ಪಡಿತರ ಅಕ್ಕಿಯನ್ನು ಕಳುಹಿಸುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಂಪುಟದಿಂದ ಗೃಹ ಸಚಿವ ಅಮಿತ್‌ ಶಾ ವಜಾಕ್ಕೆ ಆಗ್ರಹ

“ಪ್ರತಿ ತಿಂಗಳು ಇಬ್ಬರೂ ಅಧಿಕಾರಿಗಳು ₹5,62,500 ಮೊತ್ತವನ್ನು ಅವ್ಯವಹಾರ ಮಾಡಿಕೊಂಡು ಬಂದಿದ್ದಾರೆ. ಅವ್ಯವಹಾರ ಮಾಡಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಕಾರ್ಯಾಲಯದ ಮುಂದೆ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ತಾಲೂಕು ಅಧ್ಯಕ್ಷ ಸುರೇಶ್ ಗೊಬ್ಬರಕಲ್, ದಾವಲ್ ಸಾಬ ದೊಡ್ಡನಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...