ರಾಯಚೂರು | ರಿಮ್ಸ್ ಆಸ್ಪತ್ರೆಗೆ ಸೌಲಭ್ಯ ನೀಡಿ; ಜೈ ಕನ್ನಡ ರಕ್ಷಣಾ ವೇದಿಕೆ ಮನವಿ

Date:

ನಗರದ ರಿಮ್ಸ್ ಬೋಧಕ ಆಸ್ಪತ್ರೆಯ ಕೆಲವು ವಿಭಾಗಗಳನ್ನು ಉನ್ನತೀಕರಿಸಿ ವಿಕೇಂದ್ರೀಕರಣ, ಲಿಫ್ಟ್ ದುರಸ್ತಿ, ವಾರ್ಡುಗಳ ಅಟೆಂಡರ್‌ಗಳ ನೇಮಕ ಹಾಗೂ ಸ್ವಚ್ಛತೆ ನಿರ್ವಹಣೆಗೆ ಆಧುನಿಕ ಉಪಕರಣ ಬಳಸಬೇಕು ಮತ್ತು ಅಗತ್ಯ ಸೌಲಭ್ಯ ಕಲ್ಪಿಸುವಂತೆ ಜೈ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ರಿಮ್ಸ್ ಆಸ್ಪತ್ರೆಗೆ ಪಕ್ಕದ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ರೋಗಿಗಳು ಬರುತ್ತಾರೆ. 520 ಹಾಸಿಗೆಗಳನ್ನು ಮೀರಿ ಒಳ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಶೇ.90ರಷ್ಟು ಬಡರೋಗಿಗಳು ಈ ಆಸ್ಪತ್ರೆಗೆ ಬರುತ್ತಾರೆ. ಆದರೆ, ಆಸ್ಪತ್ರೆಯಲ್ಲಿ ಸ್ವಚ್ಛತೆ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂದು ದೂರಿದ್ದಾರೆ.

ಆಸ್ಪತ್ರೆಯಲ್ಲಿರುವ ವಿಭಾಗಗಳನ್ನು ಬೇರ್ಪಡಿಸಿದರೆ, ಜನಸಂದಣಿ ನಿಯಂತ್ರಿಸಲು ಸಾಧ್ಯವಾಗಲಿದೆ. ಜೊತೆಗೆ ಉತ್ತಮ ಚಿಕಿತ್ಸೆ ಒದಗಿಸಲು ಅನುಕೂಲವಾಗಲಿದೆ. ಲಿಫ್ಟ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಲಿಫ್ಟ್‌ ಚಲಾವಣೆ ಮಾಡಲೆಂದು ಸಿಬ್ಬಂದಿ ನೇಮಕ ಮಾಡಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಸಿ ಕ್ಯಾಮರಾ ಅಳವಡಿಸಬೇಕು. ರೋಗಿಗಳ ಸಹಾಯಕರ ವಾಹನಗಳು ಕಳ್ಳತನವಾಗುತ್ತಿದ್ದು, ಭದ್ರತೆ ಒದಗಿಸಬೇಕು. ಹೆರಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ. ರೋಗಿಗಳನ್ನು ದೂರದ ಊರುಗಳಿಗೆ ಕಳುಹಿಸುವ ಪ್ರಕರಣಗಳು ನಡೆಯುತ್ತಿವೆ. ಇದನ್ನು ನಿಯಂತ್ರಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯುವಂತೆ ಸೌಲಭ್ಯ ಒದಗಿಸಬೇಕು. ಕೂಡಲೆ ಜಿಲ್ಲಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಎಲ್ಲಾ ವ್ಯವಸ್ಥೆ ಪರಿಶೀಲಿಸಬೇಕು. ಅವ್ಯವಸ್ಥೆ ಸರಿಪಡಿಸಿ ಬಡ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ಶರಣಪ್ಪ ಎನ್, ಜಿಲ್ಲಾಧ್ಯಕ್ಷ ಚಿನ್ನಯ್ಯಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಬಿ.ಹನುಮಂತು, ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಪಾಷಾ ಕುರ್ಡಿ, ಶರಣಕುಮಾರ ಸೇರಿದಂತೆ ಅನೇಕರಿದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...