ರಾಯಚೂರು | ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ”ಪ್ರಬಂಧ ಸ್ಪರ್ಧೆ

Date:

ಜಿಲ್ಲಾ ಕಾರಾಗೃಹದಲ್ಲಿರುವ ಬಂಧಿ ನಿವಾಸಿಗಳಿಗೆ ವಿಶೇಷ ಪ್ರಬಂಧ ಸ್ಪರ್ಧೆ ನಡೆಸಿ ವಿಶ್ವ ಪುಸ್ತಕ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಕಾರಾಗೃಹದ ಅಧೀಕ್ಷಕಿ ಅನಿತಾ ಹಿರೇಮನಿ ತಿಳಿಸಿದರು.

ಪುಸ್ತಕ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರಾಗೃಹ ಹಾಗೂ ಸುಧಾರಣಾ ಸೇವೆಗಳು ಮತ್ತು ಜಿಲ್ಲಾ ನಗರ ಕೇಂದ್ರ ಗ್ರಂಥಾಲಯ,ರಾಯಚೂರು ಅವರ ಸಂಯುಕ್ತ ಆಶ್ರಯದಲ್ಲಿ, ವಿಚಾರಣಾಧೀನ ಬಂಧಿ ನಿವಾಸಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.

ಕಾರಾಗೃಹದ ಬಂಧಿಗಳು ಸಹ ಓದು ಹಾಗೂ ಬರವಣಿಗೆಯ ಹವ್ಯಾಸ ಬೆಳೆಸಿ,ಅವರನ್ನು ಸಕಾರಾತ್ಮಕ ಜೀವನದತ್ತ ಪ್ರೇರೇಪಿಸುವ ಈ ರೀತಿಯ ಕಾರ್ಯಕ್ರಮಗಳು ಸಹಕಾರಿ ಆಗುತ್ತವೆ ಹಾಗೂ ಅವರ ಜೀವನದಲ್ಲಿ ಒಳ್ಳೆಯ ವಿಚಾರಣೆಗಳು ಆಲಿಸ ತೊಡಗುತ್ತವೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಕ್ಫ್ ಜಾರಿಗೆ ತಂದು ವಕ್ಫ್ ಆಸ್ತಿಯನ್ನು ಲೂಟಿ ಹೊಡೆಯುವ ಹುನ್ನಾರ ; ರಜಾಕ್ ಉಸ್ತಾದ

ಕಾರಾಗೃಹದಲ್ಲಿ ಇಂತಹ ಸ್ಪರ್ಧೆಗಳಿಂದ ಉದ್ದೇಶ ಬಂಧಿಗಳಿಗೆ ಸೃಜನಾತ್ಮಕ ಅಭಿವ್ಯಕ್ತಿ ಹಾಗೂ ಓದು-ಬರಹದ ಮೂಲಕ ವೈಚಾರಿಕ ಬೆಳವಣಿಗೆಗೆ ಉತ್ತೇಜನ ನೀಡುವುದು ಸಹಕಾರಿಯಾಗುತ್ತದೆ.
ಈ ಸ್ಪರ್ಧೆಯಲ್ಲಿ ಎಂಟು ಮಂದಿ ವಿಚಾರಣಾಧೀನ ಬಂಧಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

ಈ ಕಾರ್ಯಕ್ರಮದ ಸಂದರ್ಭದಲ್ಲಿ ಜಿಲ್ಲಾ ಕಾರಾಗೃಹ ಜೈಲರ್‌ಗಳಾದ ವೆಂಕಟೇಶ್ ಹಾಗೂ ಪುಂಡಲೀಕ ಟಿ.ಕೆ, ಹಾಗು ಸ್ಪರ್ಧೆಯ ಮೇಲ್ವಿಚಾರಕರಾಗಿ ಸಹ ಶಿಕ್ಷಕರಾದ ತಾಯಪ್ಪ ಮರ್ಚಟ್ಹಾಳ ಕಾರ್ಯ ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...