ರಾಯಚೂರು | ಒಂದೇ ಮನೆಗೆ ಮೂರು ಬಾರಿ ಜಿಪಿಎಸ್ : ರೈತ ಸಂಘಟನೆಯಿಂದ ಪ್ರತಿಭಟನೆ

Date:

ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಹಾಗೂ ಪ್ರಭಾವಿ ವ್ಯಕ್ತಿಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿದ್ದು, ಅರ್ಹ ಫಲಾನುಭವಿಗಳನ್ನು ಬಿಟ್ಟು ಅನರ್ಹರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯವರು ಪ್ರತಿಭಟನೆ ನಡೆಸಿದರು.

ಮೂರು ವರ್ಷಗಳಿಂದ ಒಂದೇ ಮನೆಗೆ ಮೂರು ಬಾರಿ ಜಿಪಿಎಸ್ ನಡೆಸಿ, ಮೂವರಿಗೆ ತಲಾ ₹30,000 ಮೊತ್ತ ಪಾವತಿಸಲಾಗಿದೆ. ಲಕ್ಷ್ಮೀ (ಗಂಡ ಬಸವರಾಜ), ಯಶೋದಾ (ಗಂಡ ಶಿವಪ್ಪ) ಹಾಗೂ ವಿಶಾಲಾಕ್ಷಿ (ಗಂಡ ಶರಣಬಸವ) ಎಂಬವರ ಖಾತೆಗಳಿಗೆ ಸರ್ಕಾರದ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ರೈತ ಸಂಘಟನೆಯವರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಪತ್ರ ಸಲ್ಲಿಸಿದರು.

1000191058

ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರದ ಹಣವನ್ನು ಲೂಟಿ ಮಾಡಲಾಗಿದೆ. ಪಿಡಿಓ ಹಾಗೂ ಪ್ರಭಾವಿ ವ್ಯಕ್ತಿಗಳಿಂದ ಈ ಅವ್ಯವಹಾರ ನಡೆದಿದೆ. ತಕ್ಷಣ ತನಿಖೆ ನಡೆಸಿ ಜವಾಬ್ದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸರ್ಕಾರಕ್ಕೆ ನಷ್ಟವಾದ ಹಣವನ್ನು ವಾಪಸ್ ಪಡೆಯಬೇಕು,” ಎಂದು ರೈತ ಸಂಘಟನೆಯ ನಾಯಕರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಳೆಯಿಂದ ಬೆಳೆ ಹಾನಿ : ಪರಿಹಾರಕ್ಕೆ ರೈತರ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ರೈತ ಸಂಘದ ಮುಖಂಡ ಶಿವಪುತ್ರಪ್ಪ ಮಾತನಾಡಿ, “ಮೂರು ವರ್ಷಗಳಿಂದ ಒಂದೇ ಮನೆಗೆ ಮೂರು ಬಾರಿ ಜಿಪಿಎಸ್ ಮಾಡಿ ಹಣ ಕಳವು ಮಾಡಿದ ವಿಚಾರವನ್ನು ತಾಲ್ಲೂಕು ಪಂಚಾಯತ್‌ಗೆ ತಿಳಿಸಿದ್ದರೂ ಯಾವುದೇ ಸ್ಪಂದನೆ ಲಭಿಸಲಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಚಿತ್ತಾಪುರಕ್ಕೆ ಭೇಟಿ ನೀಡಿದಾಗ ಲೋಪದೋಷಗಳ ಬಗ್ಗೆ ಮನವಿ ಸಲ್ಲಿಸಲಾಯಿತು ” ಎಂದು ತಿಳಿಸಿದರು.

1000191043
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...