ರಾಯಚೂರು | ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ; ಸೇತುವೆ ಮುಳುಗಡೆ

Date:

ಬಸವಸಾಗರ ಜಲಾಶಯದಿಂದ ಕೃಷ್ಣಾನದಿಗೆ ಶುಕ್ರವಾರ 1,78,760 ಕ್ಯೂಸೆಕ್ಸ್‌ ನೀರು ಹರಿಸಲಾಗಿದ್ದು, ನದಿ ತುಂಬಿ ಹರಿಯುತ್ತಿದೆ. ಪರಿಣಾಮ, ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಜಲಾವೃತವಾಗಿದ್ದು, ಸೇತುವೆ ಮೇಲೆ ಸಂಚಾರ ಸ್ಥಗಿತಗೊಂಡಿದೆ.

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಸವಸಾಗ ಜಲಾಶಯವು ಬಹುತೇಕ ತುಂಬಿದೆ. 490.020 ಮೀಟರ್‌ ನೀರು ಸಂಗ್ರಹವಾಗಿದೆ. ಇನ್ನೂ ಒಳಹರಿವು ಹೆಚ್ಚಾಗಿರುವ ಹಿನ್ನೆಲೆ 20 ಗೇಟ್‌ಗಳನ್ನು ತೆಗೆದು, 1.7 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಮುನ್ನೆಚ್ಚರಿಕೆಯ ಕ್ರಮವಾಗಿ ತಾಲೂಕಿನ ಶೀಲಹಳ್ಳಿ ಸೇತುವೆ ಬಳಿ ಪೊಲೀಸ್ ಕಾವಲು ಹಾಕಲಾಗಿದೆ. ಪ್ರತಿವರ್ಷವೂ ಮುಳುಗಡೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಎತ್ತರದ ಹೊಸ ಸೇತುವೆ ನಿರ್ಮಾಣ ಮಾಡಲು ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ. ಪ್ರತಿ ವರ್ಷವೂ ಮಳೆಗಾಲದಲ್ಲಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...