ರಾಯಚೂರು | ವಿಬಿಜಿ- ರಾಮಜಿ ಮಸೂದೆ ವಿರೋಧಿಸಿ ಸಂಸದರ ಕಚೇರಿ ಮುಂದೆ ಕೂಲಿಕಾರರ ಪ್ರತಿಭಟನೆ

Date:

ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB G RAM G) ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ಹಾಗೂ ರಾಜ್ಯ ಮಹಿಳಾ ಒಕ್ಕೂಟದಲ್ಲಿ ರಾಯಚೂರು ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಕೂಲಿಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಾಯಚೂರು – ಯಾದಗಿರಿ ಸಂಸದರು ಜಿ ಕುಮಾರ್ ನಾಯ್ಕ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕಾರ್ಮಿಕರು, ಕಾರ್ಮಿಕ ಸಂಘಟನೆಗಳು, ಚಿಂತಕರು ಹಾಗೂ ಹೋರಾಟಗಾರರೊಂದಿಗೆ ಯಾವುದೇ ಸಮಾಲೋಚನೆ ನಡೆಸದೇ ಈ ಮಸೂದೆಯನ್ನು ರಚಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು. ಈ ಮಸೂದೆ ಜಾರಿಯಾದಲ್ಲಿ ಗ್ರಾಮೀಣ ಪ್ರದೇಶದ ಕಾರ್ಮಿಕರ ಹಕ್ಕುಗಳಿಗೆ ಧಕ್ಕೆಯಾಗಲಿದೆ. ಈಗಿರುವ ಉದ್ಯೋಗ ಭದ್ರತೆ ಮತ್ತು ಜೀವನೋಪಾಯ ಯೋಜನೆಗಳನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆ ಉದ್ದೇಶಿಸಿ ವಿದ್ಯಾ ಪಾಟೀಲ್ ಮಾತನಾಡಿ, MGNREGA ಕಾಯ್ದೆಯಡಿ ಕೂಲಿ ಕಾರ್ಮಿಕರ ಬೇಡಿಕೆಗೆ ಅನುಗುಣವಾಗಿ ಕೆಲಸ ಒದಗಿಸುವುದು ಹಾಗೂ ಕೆಲಸ ನೀಡದಿದ್ದಲ್ಲಿ ಪರಿಹಾರ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದದ್ದಾಗಿತ್ತು. ಆದರೆ VB G RAM G–2025 ಮಸೂದೆ 4(5)ರ ಪ್ರಕಾರ, ಕೇಂದ್ರ ಸರ್ಕಾರ ನಿಗದಿಪಡಿಸುವ ರಾಜ್ಯವಾರು ಬಜೆಟ್ ಹಂಚಿಕೆಯ ಆಧಾರದಲ್ಲಿ ಮಾತ್ರ ಮಾನವ ದಿನಗಳನ್ನು ನಿರ್ಧರಿಸಲಾಗುತ್ತದೆ. ಮಸೂದೆ ಪರಿಚ್ಛೇದ 4(6)ರಂತೆ ಈ ಬಜೆಟ್ ಮಿತಿಯನ್ನು ಮೀರಿದಲ್ಲಿ ಹೆಚ್ಚುವರಿ ಹೊರೆ ರಾಜ್ಯ ಸರ್ಕಾರಗಳ ಮೇಲೆ ಬೀಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು
ಈ ಯೋಜನೆ ಮಹಾತ್ಮ ಗಾಂಧೀಜಿಯವರ ಹೆಸರು ಬದಲಾವಣೆ ಮಾಡುವ ಗಾಂಧೀಜಿಯವರ ಆಶಯಗಳ ವಿರೋಧವಾಗಿ ರೂಪುಗೊಂಡಿದೆ, ಅಷ್ಟೆ ಅಲ್ಲದೆ ಕೋಟ್ಯಾಂತರ ಭೂಹೀನ ಕಾರ್ಮಿಕರ, ಮಹಿಳೆಯರ, ಆದಿವಾಸಿಗಳ, ದಲಿತರ ಬದುಕನ್ನು ಸಂಕಷ್ಟಕೊಳಪಡಿಸುತ್ತದೆ. ಕೂಡಲೇ ವಿಕಸಿತ ಭಾರತ -ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ ಮಸೂದೆಯನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದರೆ ಇಡೀ ದೇಶಾದ್ಯಂತ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನರೇಗಾ ಹೆಸರು ಬದಲಾವಣೆಗೆ ವಿರೋಧಿಸಿ ಡಿ.22 ರಂದು ಸಂಸದರ ಕಚೇರಿ ಮುಂದೆ ಗ್ರಾಕೂಸ್ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ರಾಜ್ಯ ಮಹಿಳಾ ಒಕ್ಕೂಟ ವಿರುಪಮಾ, ಮಾರೆಮ್ಮ ರಾಯಚೂರು, ಬಸವರಾಜ ಗಬ್ಬೂರು, ಮೌಕ್ಷಮ್ಮ , ಹನುಮೇಶ, ಗುರುರಾಜ್, ರೂಪಾ ಗುಂಜಳ್ಳಿ, ರಾಧಾ, ಪ್ರಸಾದ,ಲಕ್ಷ್ಮೀ ಹಲ್ಕಾವಟಗಿ, ಪ್ರಸಾದ, ಬಸವರಾಜ ಇನ್ನಿತರರು ಹಾಜರಿದ್ದರು.





WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...