ರಾಯಚೂರು | ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಮರೀಚಿಕೆ; ಅಪೌಷ್ಟಿಕ ಮುಕ್ತ ಮಾಡುವಂತೆ ಒತ್ತಾಯ

Date:

ರಾಯಚೂರು ಜಿಲ್ಲೆಯ ನೂರಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದು, ರಕ್ತಹೀನತೆ ಹಾಗೂ ಅಪೌಷ್ಟಿಕತೆ ಮುಕ್ತಗೊಳಿಸಿ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು‌ ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

ʼರಾಜ್ಯ ಮಹಿಳಾ ಒಕ್ಕೂಟವು ರಾಯಚೂರು ಜಿಲ್ಲೆಯ ಸುಮಾರು 100ಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಸಮೀಕ್ಷೆ ಮಾಡಿದೆ. ಈ ಜಿಲ್ಲೆಯನ್ನು ರಕ್ತಹೀನತೆ ಮತ್ತು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಾವು ಕಳೆದ 3 ವರ್ಷಗಳಿಂದ ಅಭಿಯಾನ ನಡೆಸುತ್ತಿದ್ದೇವೆ. ಆದರೆ ಸರ್ಕಾರ ಮುಕ್ತಗೊಳಿಸಲು ಯಾರೂ ಸಹಕರಿಸುತ್ತಿಲ್ಲʼ ಎಂದು ಆರೋಪಿಸಿದರು.

ʼಅಂಗನವಾಡಿ ಕೇಂದ್ರಗಳಲ್ಲಿ ಸುಸಜ್ಜಿತ ಕಟ್ಟಡಗಳಿಲ್ಲ. ಹೆಚ್ಚು ಅಂಗನವಾಡಿ ಕೇಂದ್ರಗಳು ಖಾಸಗಿ ಕಟ್ಟಡದಲ್ಲಿ ನಡೆಯುತ್ತಿವೆ. ಶೌಚಾಲಯ ಹಾಗೂ ನೀರಿನ ವ್ಯವಸ್ಥೆಯಿಲ್ಲದೆ ಅಂಗನವಾಡಿ ಕೇಂದ್ರಗಳು ಅಶುಚಿತತೆಯಿಂದ ಕೂಡಿವೆ. ಮಕ್ಕಳಿಗೆ ಆಹಾರವಾಗಿ ಪೌಷ್ಟಿಕಪುಡಿ ನೀಡುವುದರಿಂದ ಮಕ್ಕಳು ಮತ್ತು ಪೋಷಕರು ತುಂಬಾ ಅತೃಪ್ತರಾಗಿದ್ದಾರೆ. ಮಕ್ಕಳಿಗೆ ಸರಿಯಾದ ಆಹಾರ ನೀಡಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಜ.12ರಂದು ಈ ದಿನ ನ್ಯೂಸ್ ಆ್ಯಪ್, ವಿಶೇಷ ಸಂಚಿಕೆ ಬಿಡುಗಡೆ

ʼಕೆಲವು ಸ್ಥಳಗಳಲ್ಲಿ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯರ ಸಿಬ್ಬಂದಿ ಕೊರತೆಯಿಂದ ಮುಚ್ಚಿಹೋಗುವ ದಃಸ್ಥಿತಿ ಎದುರಾಗಿದೆ. ಹಾಗಾಗಿ ಸರ್ಕಾರ‌ ಕೂಡಲೇ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು ಹಾಗೂ ಮೂಲ ಸೌಕರ್ಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಗುರುರಾಜ, ವಿದ್ಯಾ ಪಾಟೀಲ್, ಚಂದ್ರಕಲಾ, ಮಲ್ಲಮ್ಮ, ಹನುಮೇಶ್, ಸಾವಿತ್ರಮ್ಮ, ರೇಣುಕಾ, ರಾಧಾ, ಬಸಮ್ಮ ಉಡುಮ ಗಲ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...