ರಾಯಚೂರು | ಮೆಟ್ರಿಕ್ ಪೂರ್ವ ಬಾಲಕಿಯರ ವಸತಿನಿಲಯದಲ್ಲಿ ಮೂಲ ಸೌಕರ್ಯ ಕೊರತೆ; ವಿದ್ಯಾರ್ಥಿನಿಯರ ಅಳಲು

Date:

ಜಾಗಿರ ಜಾಡಲದಿನ್ನಿ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿನಿಲಯದ ವಾರ್ಡನ್ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ವಸತಿ ನಿಲಯದ ವಿದ್ಯಾರ್ಥಿನಿಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ವಸತಿನಿಲಯಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ದೇವದುರ್ಗ ತಾಲೂಕು ಘಟಕದ ಕಾರ್ಯಕರ್ತರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

“ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಈ ವಸತಿನಿಲಯ ಸಮಸ್ಯೆಗಳ ತಾಣವಾಗಿದೆ. ಶುದ್ಧವಾದ ನೀರಿಲ್ಲ. ಕುಡಿಯುವ ನೀರಿನ ಫೀಲ್ಟರ್ ಸರಿಯಾಗಿಲ್ಲ. ಈ ತಾಲೂಕಿನಲ್ಲಿ ಈಗಾಗಲೇ ಕಲುಷಿತ ನೀರು ಕುಡಿದು ಸಾಕಷ್ಟು ಸಾವುಗಳು ಸಂಭವಿಸಿವೆ. ನಮಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದರೆ ವಾರ್ಡನ್ ಅವರೇ ನೇರ ಕಾರಣ” ಎಂದು ಆರೋಪಿಸಿದರು.

“ವಿದ್ಯಾರ್ಥಿನಿಯರು ಚಿಕ್ಕವರಿದ್ದಾರೆ, ಅವರಿಗೆ ಏನೂ ಗೊತ್ತಾಗುವುದಿಲ್ಲವೆಂದು ತಿಳಿದು ಮೆನು ಪ್ರಕಾರ ಚಿಕನ್ ಇದ್ದರೂ ಅದನ್ನು ಯಾರೂ ಕೇಳಲ್ಲವೆಂದು ಹಾಸ್ಟೆಲ್ ವಾರ್ಡನ್‌ ಚಿಕನ್‌ ಮಾಡಿಸದೆ ದುಡ್ಡು ಉಳಿಸಿಕೊಳ್ಳುತ್ತಿದ್ದಾರೆ” ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದರಿ ವಸತಿ ನಿಲಯದಲ್ಲಿ ಇರುವ ಮಲಗುವ ಹಾಸಿಗೆಗಳು ಹರಿದು ಹೋಗಿವೆ. ಒಂದು ಹಾಸಿಗೆಯಲ್ಲಿ ಮೂರು ಮಕ್ಕಳನ್ನು ಮಲಗಿಸುತ್ತಾರೆ” ಎಂದು ವಿದ್ಯಾರ್ಥಿಗಳು ಅವಲತ್ತುಕೊಂಡರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಉಸ್ಮಾನಿಯಾ ತರಕಾರಿ ಮಾರುಕಟ್ಟೆ; ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಆಗ್ರಹ

“ವಸತಿ ನಿಲಯದ ವಾತಾವರಣ ತುಂಬಾ ಹಾಳಾಗಿದ್ದು, ವಾಸನೆ ಬರುತ್ತಿದೆ. ಮಕ್ಕಳು ಸದರಿ ಸಮಸ್ಯೆಗಳ ಬಗ್ಗೆ ಕೇಳಲು ಹೋದರೆ, ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುವುದು ಬಾಯಿಗೆ ಬಂದಂತೆ ಬೈಯ್ಯುವುದು ಮಾಡುತ್ತಾರೆ” ಎಂದು ದೂರಿದರು.

ಈ ಸಂದರ್ಭದಲ್ಲಿ ಮಲ್ಲಪ್ಪ ಗೌಡರ, ಬಾಳಪ್ಪ ಬಾವಿಮನಿ, ಭಿಮಶಪ್ಪ ಭಂಡಾರಿ, ಬಸವರಾಜ್ ಜಾಲಹಳ್ಳಿ ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...