ರಾಯಚೂರು| ಈಡೇರದ ಆಶ್ರಯ ಯೋಜನೆ ಫಲಾನುಭವಿಗಳ ಬೇಡಿಕೆ : ಉಪ ಲೋಕಾಯುಕ್ತರಿಂದ ಸುಮೋಟೊ ಪ್ರಕರಣ

Date:

1991ರಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದ ಫಲಾನುಭವಿಗಳ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಮೋಟೊ ಪ್ರಕರಣ ದಾಖಲಿಸಿದ್ದಾರೆ.

ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬಾಕಿ ಉಳಿದ ಪ್ರಕರಣಗಳ ವಿಲೇವಾರಿ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಾಜರಿದ್ದ ಫಲಾನುಭವಿಗಳು ತಮ್ಮ ಅಹವಾಲುಗಳನ್ನು ನೇರವಾಗಿ ಉಪ ಲೋಕಾಯುಕ್ತರಿಗೆ ಸಲ್ಲಿಸಿದರು. ತಕ್ಷಣ ಪ್ರತಿಕ್ರಿಯಿಸಿದ ಉಪ ಲೋಕಾಯುಕ್ತರು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುವ ಮೂಲಕ ಸಮಸ್ಯೆಗಳ ತ್ವರಿತ ಬಗೆಹರಿವಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮ ಸ್ಥಳವಾದ ಜಗಜ್ಯೋತಿ ಬಸವೇಶ್ವರ ಸಭಾಂಗಣ ಮುಖ್ಯ ದ್ವಾರದ ಮುಂದೆ ನಿವೇಶನ ಹಕ್ಕುಪತ್ರಗಳನ್ನು ಕೈಯಲ್ಲಿ ಹಿಡಿದು ಕಾಯುತ್ತಿದ್ದ 20ಕ್ಕೂ ಹೆಚ್ಚು ಮಹಿಳೆಯರನ್ನು ಗಮನಿಸಿದ ಉಪಲೋಕಾಯುಕ್ತರು ಸ್ಥಳಕ್ಕೆ ಬಂದು ಅಹವಾಲುಗಳನ್ನು ಆಲಿಸಿದರು.

1000177580

ದೇವದುರ್ಗ ತಾಲ್ಲೂಕು ಗಬ್ಬೂರು ಗ್ರಾಮದ ಸರ್ವೆ ನಂ.1007ರಲ್ಲಿ 1991ರ ನವೆಂಬರ್‌ನಲ್ಲಿ 30×40 ಅಳತೆಯ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ ಆ ಜಾಗವನ್ನು ಇಂದಿಗೂ ಬೇರೆಯವರು ಒತ್ತುವರಿ ಮಾಡಿಕೊಂಡಿದ್ದಾರೆಂದು ವಾಸ್ತವದ ಅಳಲನ್ನು ಅವರು ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪಹಣಿ ತಿದ್ದುಪಡಿ ವಿಳಂಬ : ರೈತರಿಂದ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಕ್ಷಣವೇ ಸ್ಥಳಕ್ಕೆ ತಹಸೀಲ್ದಾರ ಹಾಗೂ ಪಿಡಿಓ ಅವರನ್ನು ಕರೆಸಿ ವಿಚಾರಣೆ ನಡೆಸಿದರು. ಅಧಿಕಾರಿಗಳ ನಿರ್ಲಕ್ಷ್ಯ ಸ್ಪಷ್ಟವಾಗಿರುವುದರಿಂದ ಸ್ಥಳದಲ್ಲೇ ಸೂಮೋಟೊ ಪ್ರಕರಣ ದಾಖಲಿಸಿದ ಉಪ ಲೋಕಾಯುಕ್ತರು, ಸಮಸ್ಯೆ ಬಗೆಹರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಒಟ್ಟು 66 ಫಲಾನುಭವಿಗಳ ಅಹವಾಲುಗಳನ್ನು ಸ್ವೀಕರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...