ರಾಯಚೂರು | ವಕೀಲ ಹತ್ಯೆ; ವಕೀಲರ ಸಂಘ ಖಂಡನೆ

Date:

ತಮಿಳುನಾಡಿನ ವಕೀಲ ಹತ್ಯೆಯನ್ನು ಖಂಡಿಸಿ, ಮೃತನ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿ ರಾಯಚೂರು ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಜಿಲ್ಲಾಡಳಿತದ ಮೂಲಕ ತಮಿಳುನಾಡು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

“ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ನ್ಯಾಯಾಲಯದ ಆವರಣದಲ್ಲಿ ನವೆಂಬರ್‌ 20ರಂದು ಆರೋಪಿ ಆನಂದ್ ಎಂಬಾತ ವಕೀಲ ಕೃಷ್ಣನ್‌ ಎಂಬುವವರನ್ನು ಕೊಲೆ ಮಾಡಿದ್ದಾನೆ. ನಿತ್ಯ ವಕೀಲರ ಮೇಲೆ ಹತ್ಯೆ, ಕೊಲೆಯಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ವಿಕ್ರಂ ಗೌಡ ಎನ್’ಕೌಂಟರ್ ; ಸೂಕ್ತ ತನಿಖೆಗೆ ಆಗ್ರಹಿಸಿ ದಸಂಸ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳ ಆವಣದ ಬಳಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಹಾಗೂ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು” ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಕೀಲರು ಮನವಿ ಮಾಡಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಪ್ಪ ಭಂಡಾರಿ, ವಕೀಲರಾದ ಹನುಮಂತ ಮೇಟಿ, ಸೈಯದ್ ನವಾಜ್ ಪಾಶ, ಜಹೀರ್ ಪಾಶ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...