ರಾಯಚೂರು | ಕುಷ್ಠರೋಗ ಬರುವುದಕ್ಕೂ ಮುಂಚೆಯೇ ಪತ್ತೆ ಹಚ್ಚಿ ಗುಣಪಡಿಸಬೇಕು

Date:

ಕುಷ್ಠರೋಗವನ್ನು ಬರುವದಕ್ಕಿಂತ ಮುಂಚೆಯೇ ಪತ್ತೆ ಹಚ್ಚಿ ಅದನ್ನು ಗುಣಪಡಿಸ ಬೇಕು ಇದಕ್ಕೆ ಎಲ್ಲ ಇಲಾಖೆಯವರು ಆರೋಗ್ಯ ಇಲಾಖೆಯವರಿಗೆ ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಸುರೇಶ್‌ ವರ್ಮಾ ಹೇಳಿದರು.

ರಾಯಚೂರು ನಗರದ ತಹಸೀಲ್ದಾರ್ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಕುರಿತು ಸಭೆಯಲ್ಲಿ ಅವರು ಮಾತನಾಡಿದರು.

ಈ ಅಭಿಯಾನ ಶಾಲೆಗಳಲ್ಲಿ ಮತ್ತು ಗ್ರಾಮ ಪಂಚಾಯತ ಮಟ್ಟದಲ್ಲಿ ನಡೆಯುವದರಿಂದ ಪ್ರತಿಯೊಬ್ಬರೂ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅಲಕ್ಷತೆ ವಹಿಸಬಾರದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾ.ಪಂ ಇಒ ಚಂದ್ರಶೇಖರ ಮಾತನಾಡಿ, ಕುಷ್ಠರೋಗದ ಕುರಿತು ಶಾಲೆಯಲ್ಲಿ ಮಕ್ಕಳಿಗೆ ಪ್ರಬಂಧ ಅಥವಾ ಪ್ರಶೋತ್ತರ ಚಟುವಟಿಕೆಗಳನ್ನು ಏರ್ಪಡಿಸಿ ಅದರಲ್ಲಿ ಎಲ್ಲ ಮಕ್ಕಳು ಭಾಗವಹಿಸುವಂತೆ ತಿಳಿಸಿ ಜಾಗೃತಿ ಮೂಡಿಸಬೇಕು ಹಾಗೂ ಜಾಥಾ ಕಾರ್ಯಕ್ರಮ ಏರ್ಪಡಿಸಿ ಸಾರ್ವಜನಿಕರಿಗೆ ಅರಿವು ಮೂಡಿಸ ಬೇಕು ಎಂದು ಹೇಳಿದರು.

ತಾಲೂಕ ಆರೋಗ್ಯ ಅಧಿಕಾರಿ ಡಾ. ಪ್ರಜ್ವಲ್ ಕುಮಾರ್‌ ಮಾತನಾಡಿ, ಕುಷ್ಠರೋಗವು ಮೈಕ್ರೋ ಬ್ಯಾಕ್ಟೀರಿಯಾ ಎಂಬ ಸೂಕ್ಷ್ಮಾಣುವಿನಿಂದ ಬರುತ್ತದೆ. ಈ ರೋಗದ ಲಕ್ಷಣಗಳು ಮನುಷ್ಯನ ದೇಹದ ಯಾವುದೇ ಭಾಗದಲ್ಲಿ ಸ್ಪರ್ಶ ಜ್ಞಾನವಿಲ್ಲದೆ, ತಿಳಿ ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳು ಕೂದಲು ನವೆ ತುರಿಕೆ ಇಲ್ಲದಿರುವದು. ಕೈ ಕಾಲುಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶ ಜ್ಞಾನ ಇಲ್ಲದಿರುವದು, ಮುಖದಲ್ಲಿ ಮತ್ತು ಕಿವಿಗಳ ಮೇಲೆ ಎಣ್ಣೆ ಸವರಿದಂತೆ ಹೊಳೆಯು ವುದು ಮತ್ತು ಗಂಟಲುಗಳು ಕಾಣಿಸುವುದು. ಎಣ್ಣೆ ಹಚ್ಚಿದಂತೆ ಹೊಳೆಯುವ ಚರ್ಮ ಈ ರೋಗವು ಮುಖ್ಯವಾಗಿ ಚರ್ಮ ಹಾಗೂ ನರಗಳಿಗೆ ಸಂಬಂಧಿಸಿರುತ್ತದೆ.

ಈ ರೋಗ ಬೇಧ ಭಾವವಿಲ್ಲದೇ ಯಾರಿಗಾದರೂ ಬರಬಹುದು. ರೋಗವನ್ನು ಪ್ರಾರಂಭದ ಲಕ್ಷಣಗಳಿದ್ದಾಗ ಕಂಡು ಹಿಡಿದು ಚಿಕಿತ್ಸೆಗೊಳಪಡಿಸಿದರೆ ಅಂಗವಿಕಲತೆ ಆಗುವುದಿಲ್ಲ. ಗುಣಮುಖ ಹೊಂದಿದ ಅಂಗವಿಕಲ ಕುಷ್ಠರೋಗಿಗಳನ್ನು ಆರ್.ಸಿ.ಎಸ್. ಶಸ್ತ್ರ ಚಿಕಿತ್ಸೆಯಿಂದ ಸರಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಐಕ್ಯೂರ್ ಹಿರಿಯ ಆರೋಗ್ಯಾಧಿಕಾರಿ ರಂಗಾರಾವ್ ಕುಲಕರ್ಣಿ ಸಂವಿಧಾನ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ನಗರ ಸಭೆ. ಆರ್.ಬಿ.ಎಸ್.ಕೆ, ಸರೋಜ, ವೈದ್ಯರು ಜಿಲ್ಲಾ ಕುಷ್ಠರೋಗ ಅಧಿಕಾರಿಗಳು ಸಿಬ್ಬಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...