ರಾಯಚೂರು | ಹಟ್ಟಿ ಪಟ್ಟಣಕ್ಕೆ ಮೈನಿಂಗ್, ಪದವಿ ಕಾಲೇಜು ಮಂಜೂರಿಗೆ ಆಗ್ರಹ

Date:

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣ ಚಿನ್ನದ ಗಣಿನಾಡು ಎಂದೇ ಪ್ರಸಿದ್ಧವಾಗಿರುವ ನಾಡಿನಲ್ಲಿ ಪದವಿ ಕಾಲೇಜು ಹಾಗೂ ಮೈನಿಂಗ್ ಕಾಲೇಜು ಇಲ್ಲದಿರುವ ಕಾರಣ ಸಾವಿರಾರು ಬಡ ವಿದ್ಯಾರ್ಥಿಗಳು ಅರ್ಧಕ್ಕೆ ಶಿಕ್ಷಣದಿಂದ ದೂರು ಉಳಿಯುವ ಸಾಧ್ಯತೆ ಹೆಚ್ಚಾಗಿದೆ.

ಹಟ್ಟಿ ಚಿನ್ನದ ಗಣಿ ಇಡೀ ದೇಶಕ್ಕೆ ಚಿನ್ನ ತೆಗೆಯುವ ನಾಡೆಂದೇ ಪ್ರಸಿದ್ಧವಾಗಿದೆ. ಹಟ್ಟಿ ಚಿನ್ನದ ಗಣಿಯಲ್ಲಿ ಈಗಲೂ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಸರ್ಕಾರದ ಖಜಾನೆ ತುಂಬಿಸುವುದರಲ್ಲಿ ಹಟ್ಟಿ ಚಿನ್ನದ ಗಣಿ ತನ್ನದೇ ಆದ ಖ್ಯಾತಿ ಪಡೆದಿದೆ. ಆದರೆ ಚಿನ್ನದ ನಾಡಿನಲ್ಲಿ ಪದವಿ ಕಾಲೇಜು ಹಾಗೂ ಮೈನಿಂಗ್ ಕಾಲೇಜು ಇಲ್ಲವೆಂದು ಅದೆಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ವಲಸೆ ಹೋಗುತ್ತಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಕಲಾ ವಿಭಾಗ ಒಂದೇ ಇದ್ದುದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವಿದ್ಯಾರ್ಥಿಗಳು ಪದವಿ ಅಭ್ಯಾಸ ಮಾಡಬೇಕೆಂದರೆ 22 ಕಿಮೀ ದೂರದ ಲಿಂಗಸುಗೂರು ಅಥವಾ 90ಕಿಮೀ ದೂರದ ರಾಯಚೂರಿಗೆ ಹೋಗುವ ಅನಿರ್ವಾಯತೆ ಇದೆ. ಬಡ ವಿದ್ಯಾರ್ಥಿಗಳಿಗೆ ಇದು ನುಂಗಲಾರದ ತುತ್ತಾಗಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000065076

ಕೆಲ ವಿದ್ಯಾರ್ಥಿನಿಯರು ಪಟ್ಟಣದಲ್ಲಿಯೇ ಪಿಯುಸಿ ಮುಗಿಸುತ್ತಾರೆ. ಆದರೆ ಪದವಿ ಪಡೆಯಲು ಬೇರೆ ಬೇರೆ ಊರುಗಳಿಗೆ ತೆರಳಬೇಕಿದೆ. ಹೀಗಾಗಿ ಕೆಲ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ.

ಸ್ಥಳೀಯ ನಿವಾಸಿ ಹೋರಾಟಗಾರ ಲಾಲ್ ಪೀರ್ ಮಾತನಾಡಿ, “ಪಟ್ಟಣದಲ್ಲಿ 30 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯಿದೆ. ಇಡೀ ತಾಲೂಕಿನಲ್ಲಿ ಹೆಚ್ಚು ಭೂತವುಳ್ಳ ಪಟ್ಟಣವೆಂದರೆ ಹಟ್ಟಿ ಪಟ್ಟಣವಾಗಿದೆ. ಸ್ಥಳೀಯ ರಾಜಕೀಯ ವ್ಯಕ್ತಿಗಳು ಹಾಗೂ ಅಧಿಕಾರಿಗಳಿಗೆ ಇಲ್ಲಿ ಪದವಿ ಕಾಲೇಜುಗಳಿಲ್ಲವೆಂದು ಗೊತ್ತಿದ್ದರೂ ಕಾಲೇಜು ಬಗ್ಗೆ ಯಾರೂ ತುಟಿ ಬಿಚ್ಚುತ್ತಿಲ್ಲ” ಎಂದರು.

“ರಾಜಕೀಯ ವ್ಯಕ್ತಿಗಳು ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿ ಲೂಟಿ ಹೊಡೆಯುವುದಕ್ಕೆ ಮುಂದಾಗುತ್ತಾರೆ. ಆದರೆ ಮಕ್ಕಳ ಭವಿಷ್ಯಕ್ಕಾಗಿ ಕಾಲೇಜು ನಿರ್ಮಾಣಕ್ಕೆ ಮುಂದಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಸ್‌ಎಫ್‌ಐ ರಾಯಚೂರು ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ ಮಾತನಾಡಿ, “ಚಿನ್ನ ತೆಗೆಯುವ ನಾಡು ಇಡೀ ದೇಶಕ್ಕೆ ಹೆಸರಾಗಿರುವ ಪಟ್ಟಣದಲ್ಲಿ ಡಿಗ್ರಿ ಹಾಗೂ ಮೈನಿಂಗ್ ಕಾಲೇಜು ಇಲ್ಲವೆಂದು ಹೇಳೋಕೂ ತುಂಬಾ ಬೇಸರವಾಗುತ್ತದೆ” ಎಂದರು.

1000065075

“ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ರಾಯಚೂರು ಜಿಲ್ಲೆಯು ಹಿಂದುಳಿದ ಜಿಲ್ಲೆಗೆ ಹೆಸರಾಗಿದೆ. ಚಿನ್ನದ ಗಣಿ ಕಂಪನಿಯಲ್ಲಿ 5000 ಕ್ಕಿಂತ ಅಧಿಕ ಮಂದಿ ಕಾರ್ಮಿಕರು ಕೆಲಸ ಮಾಡುತ್ತಾರೆ. ಸ್ಥಳೀಯ ಶಾಸಕರಾಗಲಿ, ಅಧಿಕಾರಿಗಳಾಗಲಿ ಕಾಲೇಜಿನ ಬಗ್ಗೆ ಗಮನ ಹರಿಸುತ್ತಿಲ್ಲ” ಎಂದು ಆರೋಪಿಸಿದರು.

“ಶಾಸಕರಿಗೆ ಹಾಗೂ ಇತರ ಮುಖಂಡರನ್ನು ಕೇಳಿದರೆ, ʼಕಾಲೇಜು ಮಂಜೂರು ಮಾಡುವುದಕ್ಕೆ ಜಾಗ ಇಲ್ಲʼವೆಂದು ಉಡಾಫೆ ಉತ್ತರ ನೀಡುತ್ತಾರೆ. ಜಾಗವಿಲ್ಲವೆಂದು ಹೇಳುವುದಕ್ಕೆ ನೀವು ಈ ಕ್ಷೇತ್ರದ ಶಾಸಕರಾಗುವುದಕ್ಕೆ ಅರ್ಹತೆಯೇ ಇಲ್ಲ” ಎಂದು ಶಾಸಕರ ವಿರುದ್ಧ ಕಿಡಿಕಾರಿದರು.

ಕಾರ್ಮಿಕ ಮುಖಂಡ ನಿಂಗಪ್ಪ ನಿಲೋಗಲ್ ಮಾತನಾಡಿ, “ಗಣಿ ನಾಡಿನ ಮಕ್ಕಳು ಬೇರೆ ಬೇರೆ ಕಡೆ ಹೋಗಿ ಐಟಿಐ, ಡಿಪ್ಲೊಮಾ ಸೇರಿದಂತೆ ಇತರ ಕೋರ್ಸ್‌ಗಳನ್ನು ಕಲಿಯಬೇಕಾಗಿದೆ. ಆದರೆ ಇಲ್ಲಿ ಸ್ಥಳೀಯವಾಗಿ ಮೈನಿಂಗ್ ಕಾಲೇಜು ಮಂಜೂರಾದರೆ ಸ್ಥಳೀಯ ಮಕ್ಕಳು ಭವಿಷ್ಯವನ್ನು ರೂಪಿಸಕೊಳ್ಳುತ್ತಾರೆ. ಬಡ ಮಕ್ಕಳಿಗೆ ಅನುಕೂಲವಾಗುತ್ತದೆ” ಎಂದರು.

ಪದವಿ ವಿದ್ಯಾರ್ಥಿನಿ ಮಾತನಾಡಿ, “ಪಿಯುಸಿ ಮುಗಿದ ನಂತರ ಪಟ್ಟಣದಿಂದ ತಾಲ್ಲೂಕಿಗೆ ತೆರಳಬೇಕಾಗಿದೆ. ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದಕ್ಕೆ ತಾಲೂಕಿಗೆ ತೆರಳುತ್ತಾರೆ. ಚಿನ್ನದ ನಾಡಿನಲ್ಲಿ ಖಾಸಗಿ ಪದವಿ ಕಾಲೇಜುಗಳು ಇವೆ. ಸರ್ಕಾರಿ ಪದವಿ ಕಾಲೇಜು ನಿರ್ಮಾಣ ಮಾಡುವುದರಿಂದ ಇಲ್ಲಿನ ಸುತ್ತಮುತ್ತಲ ಬಡ ಮಕ್ಕಳಿಗೆ ಅನುಕೂಲವಾಗುತ್ತದೆ” ಎಂದು ಹೇಳಿದರು.

1000065077
mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...