ರಾಯಚೂರು | ಲಾರಿ-ಬೈಕ್ ಡಿಕ್ಕಿ; ಓರ್ವ ಸಾವು

Date:

ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಕೂಡಲಸಂಗಮ ಚಿತ್ರಮಂದಿರದ ಬಳಿ ನಡೆದಿದೆ.

ತಾಲೂಕಿನ ಅರಳಹಳ್ಳಿ ಗ್ರಾಮದ ಹುಸೇನಪ್ಪ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ನಗರದ ಎಪಿಎಂಸಿಯಲ್ಲಿ ಹಮಾಲಿ ಕೆಲಸ ಮುಗಿಸಿಕೊಂಡು ತನ್ನ ಗ್ರಾಮಕ್ಕೆ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದ್ದು, ಹಿಂಬದಿ ಗಾಲಿಗೆ ಸಿಲುಕಿ, ತಲೆಗೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ರಾಯಚೂರು | ಕಲಬೆರಕೆ ಸೇಂದಿ ಮಾರಾಟ; ಇಬ್ಬರು ವಶಕ್ಕೆ

ಘಟನೆ ಜರುಗುತ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಶಹರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...