ರಾಯಚೂರು | ವಾಟ್ಸಪ್‌ನಲ್ಲಿ ವಿಡಿಯೋವೊಂದಕ್ಕೆ ನಗುವ ಚಿಹ್ನೆ ಹಾಕಿದ್ದಕ್ಕೆ ಗುಂಪು ಹಲ್ಲೆ; ಜೀವ ಬೆದರಿಕೆ ಆರೋಪ

Date:

ವಾಟ್ಸಪ್ ಗ್ರೂಪ್‌ನಲ್ಲಿ ಬಂದ ವಿಡಿಯೋ‌ವೊಂದಕ್ಕೆ ನಗುವಿನ ಚಿಹ್ನೆ ಹಾಕಿರುವ ಕಾರಣಕ್ಕೆ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ನಗರಸಭೆಯ ಸದಸ್ಯೆಯ ಪತಿ, ಮಗ ಹಾಗೂ ಅವರ‌ ಬೆಂಬಲಿಗರು ಗುಂಪು ಹಲ್ಲೆ ಮಾಡಿ ಕಲ್ಲು ತೂರಾಟ ನಡೆಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಮಹೇಶ ರೆಡ್ಡಿ ಎಂದು ಹೇಳಲಾಗಿದೆ. ದೂರಿನ‌ ಪ್ರಕಾರ ಮಹೇಶ ʼಆಂಧ್ರಪ್ರದೇಶದ ಸಾಮಾಜಿಕ ಕಾರ್ಯಕರ್ತ ಬಾಯಿರೆಡ್ಡಿಯ ಎಂಬುವವರು 26 ಸೆಕೆಂಡಿನ ವೀಡಿಯೋ ತುಣುಕು ಮುನ್ನುರುವಾಡಿ ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಶೇರ್‌ ಆಗಿತ್ತು. ಆ ವಿಡಿಯೋಗೆ ನಗರಸಭೆ ಸದಸ್ಯೆಯ ಮಗ ಸಂತೋಷರೆಡ್ಡಿ ನಗುವಿನ ಇಮೋಜಿ ಹಾಕಿದ್ದನು. ಅದನ್ನು ಮಹೇಶ ರೆಡ್ಡು ಡಿಲೀಟ್ ಮಾಡುವಂತೆ ಹೇಳಿದಾಗ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ ಎನ್ನಲಾಗಿದೆ.

ಬಳಿಕ ನಗರಸಭೆ ಮಾಜಿ ಸದಸ್ಯ ಸಂತೋಷ ರೆಡ್ಡಿಯ ತಂದೆ ಹಾಗೂ ಹಾಲಿ ನಗರಸಭೆ ಸದಸ್ಯೆ ಪತಿ ಬಿ.ತಿಮ್ಮಾರೆಡ್ಡಿ ಪರಸ್ಪರ ಅವಾಚ್ಯ ಶಬ್ದಗಳಿಂದ‌ ನಿಂದಿಸಿಕೊಂಡಿದ್ದರು. ಸೋಮವಾರ ರಾತ್ರಿ 11.30 ಗಂಟೆಗೆ ಮಹೇಶ ರೆಡ್ಡಿ ಮನೆಗೆ ಬೆಂಬಲಿಗರೊಂದಿಗೆ ನುಗ್ಗಿ ಹಲ್ಲೆ ನಡೆಸಿದಲ್ಲದೇ ಮಹೇಶ ರೆಡ್ಡಿ ಪತ್ನಿಗೆ ಎಳೆದಾಡಿ ಕಪಾಳಮೋಕ್ಷ ಮಾಡಿ ಜೀವ‌ ಬೆದರಿಕೆ ಹಾಕಿದ್ದಾರೆ ಎಂದು ಮಂಗಳವಾರ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ ತಮಗೆ ಬಿ.ತಿಮ್ಮಾರೆಡ್ಡಿಯಿಂದ ಜೀವ‌ ಬೆದರಿಕೆ ಇದೆ ಎಂದು ದೂರಿನಲ್ಲಿ ತಿಳಿಸಿದ್ದಲ್ಲದೇ, ಪುಟ್ಟಮಾದಯ್ಯ ಅವರಿಗೆ ಮನವಿ ಸಲ್ಲಿಸಿ ರಕ್ಷಣೆ ಕೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್; ಪ್ರಯಾಣಿಕರು ಪಾರು

ತಿಮ್ಮಾರೆಡ್ಡಿ ಅವರ‌ ಬೆಂಬಲಿಗ ತರುಣ ಎಂಬುವವರು ತನ್ನ ಮೇಲೆ ಮಹೇಶ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿ 11 ಜನರ ಮೇಲೆ ಪ್ರತಿ ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...