ರಾಯಚೂರು | ಹೋಳಿ ಆಚರಿಸಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ನೀರುಪಾಲು

Date:


ಹೋಳಿಹಬ್ಬ ಆಚರಿಸಿ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋದ ಘಟನೆ ರಾಯಚೂರಿನ ಗಿಲ್ಲೆಸುಗೂರು ಕ್ಯಾಂಪ್ ಬಳಿಯ ಕಾಲುವೆಯಲ್ಲಿ ನಡೆದಿದೆ.

ಯರಗೇರಾ ಗ್ರಾಮದ ಕಿರಾಣಿ ಅಂಗಡಿ ವ್ಯಾಪಾರಿ ಮಹಾದೇವ(30)ನನ್ನು ನೀರಿನಲ್ಲಿ ಕೊಚ್ಚಿ ಹೋದ ದುರ್ದೈವಿ ಎಂದು ಗುರುತಿಸಲಾಗಿದೆ. ಸಂಭ್ರಮದಿಂದ ಹೋಳಿ ಆಚರಣೆ ಮಾಡಿದ ನಂತರ, ಮೂವರು ಸ್ನೇಹಿತರು ಕಾಲುವೆಗೆ ಈಜಾಡಲು ತೆರಳಿದ್ದರು. ಕಾಲುವೆಯಲ್ಲಿ ನೀರು ಹರಿಬಿಟ್ಟಿದ್ದರಿಂದ ಈಜಲು ಆಗದೆ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಾಯಚೂರು |ಅಡುಗೆ ಸಿಲಿಂಡರ್​ ಸ್ಫೋಟ; ಕುರಿಗಳ ಸಜೀವ ದಹನ, ಗುಡಿಸಲು ಭಸ್ಮ

ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಹುಡುಕಾಟ ನಡೆಸಲಾಗಿದೆ. ಸ್ವಲ್ಪ ಸಮಯದ ತರುವಾಯ ನೆರೆಯ ತೆಲಂಗಾಣ ರಾಜ್ಯದ ಗ್ರಾಮವೊಂದರಲ್ಲಿ ಮೃತದೇಹ ಪತ್ತೆಯಾಗಿದೆ. ಕಾಲುವೆಯಿಂದ ಹೊರ ತೆಗೆದು ಶವವನ್ನು ಅಲ್ಲಿನ ಸ್ಥಳೀಯ ಸಾರ್ವಜನಿಕ ಆಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಇಡಪನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...