ರಾಯಚೂರು | ಫೆ.13ರಂದು ಮಸಣ ಕಾರ್ಮಿಕರ ಪ್ರತಿಭಟನೆ

Date:

ರಾಜ್ಯ ಬಜೆಟ್‌ನಲ್ಲಿ ಮಸಣ ಕಾರ್ಮಿಕರನ್ನು ರಾಯಚೂರು ನಗರ ಸ್ಥಳೀಯ ನೌಕರರೆಂದು ಪರಿಗಣಿಸುವುದು ಹಾಗೂ ಇತರೆ ಯೋಜನೆಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಫೆಬ್ರವರಿ 13ರಂದು ಕುತ್ತಿಗೆ ಮಟ್ಟಕ್ಕೆ ಹೂತುಕೊಂಡು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಸಣ ಕಾರ್ಮಿಕರ ಸಂಘದ ಜಿಲ್ಲಾ ಸಂಚಾಲಕ ಕೆ ಜಿ ವೀರೇಶ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಕಳೆದ ಅನೇಕ ವರ್ಷಗಳಿಂದ ಮಸಣ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಗುರುತಿಸುವ ಕೆಲಸವಾಗಿಲ್ಲ. ಸಂಘಟನೆಯಿಂದ ಅನೇಕ ಹಂತದ ಪ್ರತಿಭಟನೆ ನಡೆಸಲಾಗಿದೆ. ಕಳೆದ ಡಿಸೆಂಬರ್‌ 21ರಿಂದ ಮೂರು ದಿನ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಅಂದು ಸ್ಥಳಕ್ಕೆ ಆಗಮಿಸಿದ್ದ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಅಧಿಕಾರಿಗಳ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಈ ಕುರಿತು ಫೆಬ್ರವರಿ 2ರಂದು ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸಿ ಸಿಪಿಐ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಸಣ ಕಾರ್ಮಿಕರಾಗಿ ಸೇವೆ ಸಲ್ಲಿಸುವವರಿಗೆ ಕನಿಷ್ಠ ವೇತನ, ಮಕ್ಕಳಿಗೆ ಉಚಿತ ವಿದ್ಯಾಬ್ಯಾಸ, ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ನೆರವು, ಪಿಂಚಣಿ, ನಿವೇಶನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಬಜೆಟ್‌ನಲ್ಲಿ ಅನುದಾನ ಕಾಯ್ದಿರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಫೆಬ್ರವರಿ 14ರಂದು ರಾಯಚೂರು ನಗರದ ಜಲಾಲನಗರ ಮಸಣ ಭೂಮಿಯಲ್ಲಿ ಕುತ್ತಿಗೆ ಮಟ್ಟಕ್ಕೆ ಗುಂಡಿ ತೋಡಿ ಪ್ರತಿಭಟನೆ ನಡೆಸಲಾಗುವುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಚಂದಪ್ಪ, ನರಸಿಂಹಲು, ಕರಿಯಪ್ಪ ಬುರ್ದಿಪಾಡ ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...