ರಾಯಚೂರು | ಅಮಿತ್ ಶಾ ವಜಾಕ್ಕೆ ಪ್ರಗತಿಪರ ಸಂಘಟನೆಗಳ ಬೃಹತ್ ಪ್ರತಿಭಟನೆ

Date:

ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳಿಂದ ರಾಯಚೂರು ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತರು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, “ಅಂಬೇಡ್ಕರ್ ಅವರ ಕುರಿತು ಸಂಸತ್ತಿನಲ್ಲಿ ಮಾತನಾಡುವಾಗ ಅವರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅಂಬೇಡ್ಕರ್ ಅವರ ಹೆಸರು ಹೇಳುವುದು ವ್ಯಸನವಾಗಿದೆಯೆಂದು ಹೇಳಿರುವುದು ಖಂಡನಾರ್ಹ” ಎಂದು ಆಗ್ರಹಿಸಿದರು.

ಸಾಮಾಜಿಕ ಹೋರಾಟಗಾರ ಎಸ್ ಮಾರೆಪ್ಪ ಮಾತನಾಡಿ, “ಕೇಂದ್ರ ಮಂತ್ರಿ ಅಮಿತ್‌ ಶಾ, ʼಅಂಬೇಡ್ಕರ್‌ ಅಂಬೇಡ್ಕರ್‌ ಎನ್ನುವುದು ಒಂದು ವ್ಯಸನವಾಗಿದೆ. ಅಷ್ಟು ಬಾರಿ ದೇವರ ಸ್ಮರಣೆ ಮಾಡಿದ್ದರೆ ಏಳು ಜನ್ಮಕ್ಕೆ ಸ್ವರ್ಗವಾದರೂ ಪ್ರಾಪ್ತಿಯಾಗುತ್ತದೆʼ ಎಂದಿರುವುದು ಅಕ್ಷಮ್ಯ. ಮುಕ್ಕೋಟಿ ದೇವತೆಗಳ ಮೇಲೆ ನಂಬಿಕೆಯಿದ್ದರೆ ಸಂವಿಧಾನದ ಅಡಿಯಲ್ಲಿರುವ ಪ್ರಜಾಪ್ರಭುತ್ವದ ಆಡಳಿತವನ್ನು ಅಮಿತ್‌ ಶಾ ತ್ಯಜಿಸಲಿ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಕ್ಕೋಟಿ ದೇವತೆಗಳು ವಿದ್ಯೆ, ಮಾನ ಮರ್ಯಾದೆ, ಉಡುಪು ತೊಡುಪು ಕೊಟ್ಟಿಲ್ಲ. ಎಂಎಲ್‌ಎ, ಎಂಪಿ, ಎಸಿ, ಡಿಸಿಯಾಗಿ ಮಾನ ಮರ್ಯಾದೆಯಿಂದ ಜೀವಿಸುವುದಕ್ಕೆ ಹಕ್ಕು ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರ್” ಎಂದು ಹೇಳಿದರು.

“ದೀನ ದಲಿತರು, ಮಹಿಳೆಯರು, ಶೋಷಿತ ವರ್ಗಗಳು ಹಾಗೂ ಹಿಂದುಳಿದ ವರ್ಗದವರಿಗೆ ದಾರಿದೀಪವಾಗಿರುವುದೇ ಅವರ ಹೆಸರು. ಅವರು ನಮಗೆ ಸ್ಪೂರ್ತಿ. ನಮ್ಮೆಲ್ಲರಿಗೆ ಅವರೇ ದೇವರು, ನಿತ್ಯ ಅವರ ಸ್ಮರಣೆ ಮಾಡುತ್ತೇವೆ. ಅಂಬೇಡ್ಕರ್ ಅವರ ಅವಹೇಳನ ದೇಶದಲ್ಲಿ ಕೋಮು ಪ್ರಚೋದನೆಗೆ ಕಾರಣವಾಗಬಹುದು. ಕೂಡಲೇ ಅಮಿತ್ ಶಾ ಅವರನ್ನು ಕೇಂದ್ರ ಗೃಹ ಸಚಿವ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಏಮ್ಸ್ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಮನವಿ

ಪ್ರತಿಭಟನೆಯಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರಾದ ರವೀಂದ್ರ ನಾಥ ಪಟ್ಟಿ, ಹೇಮರಾಜ ಅಸ್ಕಿಹಾಳ, ಎಂ ಈರಣ್ಣ, ಆಂಜನೇಯ ಊಟ್ಕೂರು, ನರಸಿಂಹಲು ಮರ್ಚಟಾಳ, ಶ್ರೀನಿವಾಸ ಕಲವಲದೊಡ್ಡಿ, ವಿಜಯರಾಣಿ, ಖಾಜಾ ಅಸ್ಲಂಪಾಷಾ, ಕುಮಾರ ಸಮತಳ, ಮಾರೆಪ್ಪ ಹರವಿ, ಆಂಜನೇಯ ಕುರುಬ ದೊಡ್ಡಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...