ರಾಯಚೂರು | ಹಟ್ಟಿಯಲ್ಲಿ ಮಟಕಾ,ಗಾಂಜಾ ದಂಧೆ; ರಾಜ್ಯ ಮಹಿಳಾ ಆಯೋಗಕ್ಕೆ ದೂರು

Date:

ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ರಾಜಾರೋಷವಾಗಿ ಹೆಚ್ಚುತ್ತಿರುವ ಮಟಕಾ, ಕ್ರಿಕೆಟ್‌ ಬೆಟ್ಟಿಂಗ್‌, ಇಸ್ಪೀಟ್‌, ಗಾಂಜಾ ಮಾರಾಟ ಹಾಗೂ ಲಿಕ್ಕರ್‌ ಮಾಫಿಯಾ ಚಟುವಟಿಕೆಗಳು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿರುವುದರಿಂದ ಕೂಡಲೇ ಕಡಿವಾಣ ಹಾಕಿ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಚೌದರಿ ಅವರಿಗೆ ಹಟ್ಟಿ ಘಟಕದ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಮನವಿ ಸಲ್ಲಿಸಿದರು.

ಪಟ್ಟಣದ ಹಲವು ಭಾಗಗಳಲ್ಲಿ ಇಂತಹ ಅಕ್ರಮ ದಂಧೆಗಳು ನಿರ್ಬಂಧವಿಲ್ಲದೆ ನಡೆಯುತ್ತಿರುವುದು ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದು, ಮಹಿಳೆಯರ ಸುರಕ್ಷತೆಗೂ ಗಂಭೀರ ಬೆದರಿಕೆಯಾಗಿದೆ. ಮಹಿಳೆಯರು ರಾತ್ರಿ ವೇಳೆಯಲ್ಲಿ ಸಂಚರಿಸುವುದಕ್ಕೂ ಹೆದರಿಕೆ ಅನುಭವಿಸುತ್ತಿದ್ದಾರೆ ಎಂದು ಸಂಘಟನಾಕಾರರು ಆತಂಕ ವ್ಯಕ್ತಪಡಿಸಿದರು.

ಈ ಅಕ್ರಮ ದಂಧೆಗಳ ನೇರ ಪರಿಣಾಮವಾಗಿ ಹಟ್ಟಿ ಪಟ್ಟಣದಲ್ಲಿ ಕಳ್ಳತನ, ಕೊಲೆ, ಅತ್ಯಾಚಾರ ಸೇರಿದಂತೆ ಗಂಭೀರ ಅಪರಾಧ ಪ್ರಕರಣಗಳ ಪ್ರಮಾಣ ಹೆಚ್ಚಾಗಿದೆ. ಮಟಕಾ, ಬೆಟ್ಟಿಂಗ್‌, ಗಾಂಜಾ ಹಾಗೂ ಲಿಕ್ಕರ್ ಮಾಫಿಯಾಗಳ ಬಲೆಗೆ ಸಿಲುಕಿರುವ ಯುವಕರು ದಿನನಿತ್ಯದ ಖರ್ಚಿಗೆ ಹಣದ ಅವಶ್ಯಕತೆ ಬಿದ್ದಾಗ ಕಳ್ಳತನ, ರಾಬರಿ, ಕೊಲೆ-ಸುಲಿಗೆಗಳ ಕಡೆ ತಿರುಗುವುದು ಸಾಮಾನ್ಯ ಘಟನೆವಾಗುತ್ತಿದೆ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣದ ಪೋಲಿಸ್ ಠಾಣೆಯ ಕೂಗಳತೆ ದೂರದಲ್ಲೇ ಮುಖ್ಯ ರಸ್ತೆಯಲ್ಲಿ ಕೂತು ಮಟಕಾ ಬರೆದರೂ ಯಾವುದೇ ಕ್ರಮಗೊಂಡಿಲ್ಲ ಹಾಗೂ ತೊಂದರೆ ಹೇಳಿಕೊಂಡು ಠಾಣೆಗೆ ಬಂದ ಕುಟುಂಬಸ್ಥರ ಮೇಲೆಯೇ ಕೆಲವೊಮ್ಮೆ ಠಾಣೆಯ ಸಿಬ್ಬಂದಿ ದೌರ್ಜನ್ಯವೆಸಗಿರುವ ಘಟನೆಗಳು ಠಾಣೆಯಲ್ಲಿ ನಡೆದಿವೆ. ಕೂಡಲೇ ಪಟ್ಟಣದ ಶಾಂತಿ, ಮಹಿಳೆಯರ ಭದ್ರತೆ ಮತ್ತು ಯುವಕರ ಭವಿಷ್ಯಕ್ಕಾಗಿ ತಕ್ಷಣವೇ ಇಂತಹ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಬೇಕೆಂದು ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶವ ಸಂಸ್ಕಾರ ವಾಹನ ಹಾಗೂ ರೆಫ್ರಿಜರೇಟರ್‌ ಗಳ ಹಸ್ತಾಂತರ

ಈ ವೇಳೆ ಸಾಹೇರಾ ಬೇಗಂ, ರಮೇಶ ವೀರಾಪುರ, ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...