ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ; ಆರು ತಿಂಗಳ ಕಾಲಾವಕಾಶ ನೀಡುವಂತೆ ಪ್ರತಿಭಟನೆ

Date:

ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್‌ ಮರುಪಾವತಿಸಲು ಬಡ್ಡಿ ರಹಿತ ಮರುಪಾವತಿ ಹಾಗೂ ಆರು ತಿಂಗಳ ಕಾಲಾವಕಾಶ ಕಲ್ಪಿಸಲು ಒತ್ತಾಯಿಸಿ ಸಾರ್ವಜನಿಕ ಹೋರಾಟಗಾರರು ಮತ್ತು ಸಮಾಜ ಸೇವಕರ ವೇದಿಕೆಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ತೆರಳಿ ಸಾಲ ಮರುಪಾವತಿಗೆ ಆರು ತಿಂಗಳ ಸಮಯಾವಕಾಶ ಕೊಡಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.

“ಪ್ರಸ್ತುತ ಮನೆಗಳಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು, ದುರ್ಘಟನೆಗಳು ನಡೆದಿರುತ್ತವೆ. ಇಂತಹ ಸಂದರ್ಭದಲ್ಲಿಯೂ ಪೈನಾನ್ಸ್‌ಗಳಿಂದ ನಿತ್ಯವೂ ಕಿರುಕುಳ ಹೆಚ್ಚಾಗುತ್ತಿದೆ. ಸಾಲ ವಾಪಸ್ ನೀಡುವುದಿಲ್ಲವೆಂದು ಹೇಳುವುದಿಲ್ಲ. ಸ್ವಲ್ಪ ಕಾಲಾವಕಾಶ ಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈಕ್ರೋ ಫೈನಾನ್ಸ್, ಎನ್‌ಜಿಒಗಳು ಹಾಗೂ ಸಂಘ ಸಂಸ್ಥೆಗಳಿಂದ 15 ದಿನಗಳಿಗೊಮ್ಮೆ, ತಿಂಗಳಿಗೊಮ್ಮೆ ವಾರ, ಮಾಸಿಕ ಕಂತು ಪ್ರಕಾರ ಮರುಪಾವತಿ ನೀಡಲು ಸಾಲ ಪಡೆದುಕೊಂಡಿದ್ದೆವು. ಆದರೆ ಈಗಿನ ಪರಿಸ್ಥಿತಿಯಲ್ಲಿ ಕಟ್ಟಲು ಅಡೆತಡೆಗಳು ಸಂಭವಿಸುತ್ತಿವೆ. ನಮ್ಮ ವ್ಯಾಪಾರಗಳು ನಡೆಯದೆ ವಾಪಸ್‌ ನೀಡುವ ಪರಿಸ್ಥಿತಿಯಿಲ್ಲದೆ ಪರದಾಡುತ್ತಿದ್ದೇವೆ. ಹೀಗಿರುವಾಗ ಫೈನಾನ್ಸ್ ಕಂಪನಿಗಳ ಸಿಬ್ಬಂದಿಗಳು ಬೆಳಿಗ್ಗೆಯಾದರೆ ಸಾಕು, ಮನೆಯ ಮುಂದೆ ಗಂಟೆ ಗಟ್ಟಲೆ ಕೂಗಾಡುವುದು, ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಅಥವಾ ಮನೆಯಂಗಳದಲ್ಲಿ, ಓಣಿಯಲ್ಲಿ ನಿಂತು ನಮ್ಮ ಮರ್ಯಾದೆಗೆ ಧಕ್ಕೆಯುಂಟು ಮಾಡುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು.

“ಮನೆಯ ಮುಂದೆ ಏಜೆಂಟರು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ದುಡ್ಡು ಇಲ್ಲವೆಂದರೆ, ನಿಮ್ಮ ಕಿಡ್ನಿ ಮಾರಾಟ ಮಾಡಿ, ಇಲ್ಲವಾದರೆ ಮನೆಯಲ್ಲಿರುವ ವಸ್ತುಗಳನ್ನು ಮಾರಾಟ ಮಾಡಿ ಹಣ ನಮಗೆ ನೀಡಿ. ಇಲ್ಲವಾದರೆ ರೈಲು ಹಳಿಗೆ ಬಿದ್ದು ಸಾಯಿರಿ. ಇಲ್ಲವಾದಲ್ಲಿ ನಾವುಗಳು ಮನೆಯಿಂದ ಹೋಗುವುದಿಲ್ಲ ಮತ್ತು ನಮ್ಮ ಕಂಪನಿಗಳಿಂದ ದಿನಕ್ಕೆ 100 ಸಲ ಕರೆ ಮಾಡಿ ಹಿಂಸೆ ನೀಡುತ್ತೇವೆಂದು ಬೆದರಿಸುತ್ತಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಹಾಸನದಲ್ಲಿ ದೇವೇಗೌಡರ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ; ಸಭಿಕರಿಂದ ಚಪ್ಪಾಳೆಯ ಸುರಿಮಳೆ

“ಫೈನಾನ್ಸ್ ಕಂಪನಿಗಳಿಂದ ಜೀವನಕ್ಕೆ ಅನಾಹುತವಾಗುವ ಸಂಭವ ಉದ್ಭವಿಸಿದೆ. ಸಾಲ ವಾಪಸ್ ನೀಡುವುದಿಲ್ಲವೆಂದು ಹೇಳುವುದಿಲ್ಲ.

ಪ್ರತಿಭಟನೆಯಲ್ಲಿ ಅಂಬಾಜಿರಾವ್ ಮೈದರಕರ್, ಅಹ್ಮದ್ ಬೇಗ್, ಮಸೂದ್ ಅಲಿ ಸೇರಿದಂತೆ ಸಾಲ ಪಡೆದ ನೂರಾರು ಮಹಿಳೆಯರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...