ರಾಯಚೂರು | ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ ಸಚಿವ ದಿನೇಶ್, ಶರಣಪ್ರಕಾಶ್ ವಿಫಲ; ರಾಜೀನಾಮೆಗೆ ಕೆಆರ್‌ಎಸ್‌ ಆಗ್ರಹ

Date:

ರಾಜ್ಯದಲ್ಲಾಗಿರುವ ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ನೀಡಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ‌(ಕೆಆರ್‌ಎಸ್) ಪಕ್ಷದ ಮುಖಂಡ ನಿರುಪಾದಿ ಗೋಮರ್ಸಿ ಆಗ್ರಹಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ಜಿಲ್ಲೆಯಲ್ಲಿ 12 ಮಂದಿ ಬಾಣಂತಿಯರ ಸಾವು ಸಂಭವಿಸಿದೆ. ಆದರೂ ರಾಜ್ಯ ಸರ್ಕಾರ ಈವರೆಗೆ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡುವುದಾಗಲಿ, ಸಾಂತ್ವನ ಹೇಳುವುದನ್ನಾಗಲಿ ಮಾಡಿಲ್ಲ. ಬಳ್ಳಾರಿ, ಕೊಪ್ಪಳ, ರಾಯಚೂರು, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ನಡೆದಿರುವ ಬಾಣಂತಿಯರ ಸಾವಿನ ಘಟನೆಗಳಿಗೆ ಕಳಪೆ ಔಷಧಿ ಕಾರಣವೆಂದು ಐಎಎಸ್ ಅಧಿಕಾರಿ ಕನಗವಲ್ಲಿ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದರೂ ಕೂಡ ಯಾವುದೇ ಕ್ರಮವಾಗಿಲ್ಲ” ಎಂದು ಆರೋಪಿಸಿದರು.

“ಮುಖ್ಯಮಂತ್ರಿಗಳು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಪ್ರಾದೇಶಿಕವಾರು ಬಾಣಂತಿಯರ ಸಾವಿಗೆ ಕಾರಣ ತಿಳಿದು ವರದಿ ನೀಡುವಂತೆ ಸೂಚಿಸಿರುವುದಾಗಿ ಹೇಳಿದ್ದರೂ ಕೂಡಾ ಈವರೆಗೆ ವರದಿ ಏನಾಗಿದೆ ಎಂಬುದು ಜನರಿಗೆ ಗೊತ್ತಾಗಿಯೇ ಇಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಬಾಣಂತಿಯರು ಸಾವಿಗೀಡಾಗಿದ್ದು, ಬಡವರು, ಪರಿಶಿಷ್ಟರು, ಹಿಂದುಳಿದ ಸಮುದಾಯದವರೇ ಹೆಚ್ಚುಮಂದಿ ಬಾಣಂತಿಯರು ಬಲಿಯಾಗಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಲಿತ, ಹಿಂದುಳಿದವರ ಪರವೆಂದು ಹೇಳುವ ರಾಜ್ಯ ಸರ್ಕಾರ ಮೃತ ಕುಟುಂಬಗಳ ನೆರವಿಗೆ ಬರುವುದು ಯಾವಾಗ?. ಆರೋಗ್ಯ ಸಚಿವರು, ಬಾಣಂತಿಯರ ಸಾವಿಗೆ ಔಷಧಿಗಳೇ ಕಾರಣವೆಂದು ಹೇಳಿ ತಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರವೇ ತಡೆಯಬೇಕೆಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತಲಾ ಇಬ್ಬರು ಡಿವೈಎಸ್‌ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ ವರ್ಗಾವಣೆ; ಒಬ್ಬರಿಗೆ ಪಿಐ ಬಡ್ತಿ

“ಸರ್ಕಾರಿ ಆಸ್ಪತ್ರೆಗಳು, ವೈದ್ಯಕೀಯ ಶಿಕ್ಷಣ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆ, ವೈದ್ಯರ ನಿರ್ಲಕ್ಷ್ಯ ಔಷಧಿ ಖರೀದಿಯಲ್ಲಿ ಅಕ್ರಮಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ಇಬ್ಬರು ಸಚಿವರೂ ರಾಜೀನಾಮೆ ನೀಡಬೇಕು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ಬಾಣಂತಿಯರ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ಮೃತ ಬಾಣಂತಿಯರ ಕುಟುಂಬಗಳಿಗೆ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಸವಪ್ರಭು ಮೇಥಾ, ವಿಜಯಕುಮಾರ ಪೋಳ್, ಗಂಗಾನಾಯಕ, ಶಂಕರಗೌಡ, ಶಿವರಾಜ ಕಪಗಲ್, ಕುಮಾರ ನಾಯಕ, ಆಂಜಿನೇಯ್ಯ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...