ರಾಯಚೂರು | ಎಸ್‌ಸಿ ಎಸ್‌ಟಿ ಹಣ ದುರ್ಬಳಕೆ; ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

Date:

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಖಂಡಿಸಿ ಜೆಡಿಎಸ್ ರಾಯಚೂರು ತಾಲೂಕು ಘಟಕದ ವತಿಯಿಂದ ನಿನ್ನೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಬಸವ ವೃತ್ತದಲ್ಲಿ ಜಮಾಯಿಸಿದ ಪಕ್ಷದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ಧೋರಣೆಗಳನ್ನು ಖಂಡಿಸಿ ಧರಣಿ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, “ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಸುವ ಮೂಲಕ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ” ಎಂದು ದೂರಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಸ್ಥಳೀಯರಾದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿದ್ದಾರೆ. ಸಚಿವ ಬೋಸರಾಜು ಅಕ್ರಮವಾಗಿ ಮರಳು ಹಾಗೂ ಅಕ್ಕಿ ಸಾಗಣೆ ಮಾಡುವ ದಂಧೆಕೋರರು, ಗೂಂಡಾಗಿರಿ‌ ಮಾಡುವವರಿಗೆ ಬೆಂಬಲ ನೀಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ತುಂಗಭದ್ರಾ ಎಡದಂಡೆ ನಾಲೆಯ ಅಸಮರ್ಪಕ ನಿರ್ವಹಣೆಯಿಂದಾಗಿ ತಾಲೂಕಿನ ರೈತರು ಕಾಲುವೆ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ತುಂಗಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದರೂ ಕಾಲುವೆಯಲ್ಲಿ ನೀರು ಹರಿಯದೆ ಬೆಳೆ ಹಾನಿ ಅನುಭವಿಸುವಂತಾಗಿದೆ. ಏ.20ರ ವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು” ಎಂದು ಒತ್ತಾಯಿಸಿದರು.

ಬಸವ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೆರವಣಿಗೆಯುದ್ದಕ್ಕೂ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ: ರಾಯಚೂರು| ಅಕ್ರಮ ಮರಳು ಸಾಗಾಟ; ತಡೆಯಲು ಮುಂದಾದ ಪೊಲೀಸ್ ಮೇಲೆ ಹಲ್ಲೆ

ಜೆಡಿಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಮಲ್ಲಿಕಾರ್ಜುನ ಪಾಟೀಲ, ಜೆ.ಎಚ್.ದೇವರಾಜ, ಸಾಜಿದ್ ಖಾದ್ರಿ, ಪಿ.ರವಿಕುಮಾರ, ಸುಬಾನ್ ಬೇಗ್, ಶರಣಪ್ಪ ಮೇದಾ, ಬಾಷಾ ಸಾಬ್, ಬಸವರಾಜ ಭಜಂತ್ರಿ, ಬಿ.ಮಲ್ಲಪ್ಪ ಹೂಗಾರ, ಚೆನ್ನಬಸಯ್ಯ ಸ್ವಾಮಿ, ಮೌನೇಶ ಹರೇಟನೂರ, ಎಸ್.ವೆಂಕೋಬ, ವಿಜಯ್ ನಾಯಕ, ಲಕ್ಷ್ಮಣ ಯಾದವ್, ಶಿವರಾಜ ನಾಯಕ ಚಾಗಬಾವಿ, ಮೌಲಾಸಾಬ್, ಬಿ.ಸಂತೋಷ ಹೂಗಾರ, ವೀರೇಶ ಉಪ್ಪಾರ್, ಜಸ್ವಂತ್ ಸೇಠ್, ಮ್ಯಾಕಲ್ ಮೌನೇಶ ನಾಯಕ, ಬಸನಗೌಡ ಉಟಕನೂರು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...