ರಾಯಚೂರು | ಶಾಲೆಯ ಅನುದಾನ ದುರ್ಬಳಕೆ; ಶಿಕ್ಷಕರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

Date:

ಸಿರವಾರ ತಾಲೂಕಿನ ಹರವಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆರ್‌.ಎಂ‌.ಎಸ್‌.ಎ – ಪಿ.ಎಂ‌. ಯೋಜನೆಯಡಿಯಲ್ಲಿ ಬಂದ ಅನುದಾನವನ್ನು ದುರ್ಬಳಕೆ ಮಾಡಿರುವ ಆರೋಪದಡಿ ಶಾಲೆಯ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಒತ್ತಾಯಿಸಿ ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಆರ್‌.ಎಂ‌.ಎಸ್‌.ಎ (ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ) ಮತ್ತು ಪಿ.ಎಂ‌. (ಪ್ರಧಾನ ಮಂತ್ರಿ) ಯೋಜನೆಗಳಡಿ ಶಾಲೆಗಳ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ ಮತ್ತು ಶೈಕ್ಷಣಿಕ ಸಾಮಗ್ರಿಗಳ ಖರೀದಿಗಾಗಿ ಬಿಡುಗಡೆಯಾದ ಅನುದಾನವನ್ನು ಶಾಲಾ ಮುಖ್ಯಸ್ಥರು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಹಣವನ್ನು ಉದ್ದೇಶಿತ ಕಾಮಗಾರಿಗಳಿಗೆ ಬಳಸದೆ ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಕೂಡಲೇ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

2024–25ನೇ ಸಾಲಿನಲ್ಲಿ ಬಿಡುಗಡೆಗೊಂಡಿದ್ದ ಅನುದಾನವನ್ನು ಶಾಲೆಯ ಮುಖ್ಯೋಪಾಧ್ಯಾಯ ರಾಜಖಾನ ಹಾಗೂ ಪ್ರಭಾರಿ ಶಿಕ್ಷಕ ದತ್ತಾತ್ರೇಯ ಇವರು ದಾಖಲೆಗಳಲ್ಲಿ ಅಸಮರ್ಪಕತೆ ಮತ್ತು ಲೆಕ್ಕಪತ್ರಗಳಲ್ಲಿ ಅನುದಾನದ ಹಣವನ್ನು ಶಾಲಾ ಅಭಿವೃದ್ಧಿಗೆ ಬಳಸದೆ, ಖಾಸಗಿ ಖರ್ಚು ಮತ್ತು ಕೃತಕ ಬಿಲ್‌ಗಳ ಮೂಲಕ ತೋರಿಸಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸ್ಥಳೀಯ ಶಿಕ್ಷಣ ಇಲಾಖೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಮಾಹಿತಿಯ ಪ್ರಕಾರ, ಉಭಯ ಶಾಲೆಗಳಿಗೂ ಒಟ್ಟಾರೆ ಸುಮಾರು ₹6,27,459/- ಅನುದಾನ ಬಿಡುಗಡೆಯಾಗಿದ್ದು, ಈ ಮೊತ್ತವನ್ನು ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಅಥವಾ ಶಿಕ್ಷಣ ಸಂಬಂಧಿತ ಸಾಮಗ್ರಿ ಖರೀದಿಗೆ ಬಳಸದೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣದ ದುರ್ಬಳಕೆ ನಡೆಸಲಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಎಸ್,ಡಿಎಂಸಿ ಉಪಾಧ್ಯಕ್ಷ ಈರೇಶ ಪೆದ್ದರೆಡ್ಡಿ, ಯಲ್ಲಪ್ಪ ಗೋನಕ್ಕಿ, ಹನುಮಂತ ಹಳ್ಳಿ, ಬಸವರಾಜ ಇನ್ನಿತರರು ಹಾಜರಿದ್ದರು.




WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...