ದೇವದುರ್ಗ | ನ್ಯಾಯಾಲಯ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನವಿಲ್ಲ; ಸಭಾಧ್ಯಕ್ಷರಿಗೆ ಶಾಸಕಿ ದೂರು

Date:

ದೇವದುರ್ಗ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿರುವ ಕೋರ್ಟ್ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರ ಹೆಸರನ್ನು ಉಲ್ಲೇಖಿಸದೇ ಬಿಡಲಾಗಿದ್ದು, ಸಭಾಧ್ಯಕ್ಷರಿಗೆ ಶಾಸಕಿ ಅಧಿಕೃತ ದೂರು ಸಲ್ಲಿಸಿದ್ದಾರೆ ಹಾಗೂ ಕಾರ್ಯಕರ್ತರು ಮತ್ತು ಅಭಿಮಾನಿಗಳಲ್ಲಿ ನೋವು ಉಂಟುಮಾಡಿದೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಶಾಸಕಿ ಕರೆಮ್ಮ ಜಿ ನಾಯಕ ಹೇಳಿದ್ದಾರೆ.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತಂತೆ ಸ್ಥಳೀಯ ಶಾಸಕರ ಸಂವಿಧಾನಬದ್ದ ಸ್ಥಾನಕ್ಕೆ ಹಕ್ಕುಚ್ಯುತಿ ಆಗಿರುವಂತೆ ಕಂಡುಬರುವ ಬಗ್ಗೆ ಸಭಾಧ್ಯಕ್ಷರಿಗೆ ಅಧಿಕೃತ ದೂರು ಸಲ್ಲಿಸಲಾಗಿದೆ. ನ್ಯಾಯಾಂಗ ಇಲಾಖೆಯಂತು ಅತ್ಯಂತ ಸೂಕ್ಷ್ಮವಾದ ವಿಭಾಗ. ಅದರ ಕಾರ್ಯಕ್ರಮಕ್ಕೆ ಯಾವುದೇ ಅಡ್ಡಿ ಅಥವಾ ಆತಂಕ ಉಂಟುಮಾಡುವ ಉದ್ದೇಶ ನಮ್ಮದಾಗಿಲ್ಲ. ನಾವು ಅದನ್ನು ಮನಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಶಾಸಕಳಾಗಿ ಆಯ್ಕೆಯಾದ ಕ್ಷಣದಿಂದಲೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಷಡ್ಯಂತ್ರಗಳು ನನ್ನ ವಿರುದ್ಧ ನಡೆಯುತ್ತಿವೆ. ವಿನಾಕಾರಣ ನನ್ನ ಮೇಲೆ ಗೂಬೆ ಕೂರಿಸಿ, ನನ್ನ ರಾಜಕೀಯ ಶಕ್ತಿಯನ್ನು ಕುಗ್ಗಿಸಲು ಹಾಗೂ ಅಪಪ್ರಚಾರ ಹಬ್ಬಿಸಲು ನಿರಂತರ ಪ್ರಯತ್ನಗಳು ಸಾಗುತ್ತಿವೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರಿಯಾದ ಸಮಯಕ್ಕೆ ಬಸ್‌ ಸಂಚಾರ ಕಲ್ಪಿಸಲು; ವಿದ್ಯಾರ್ಥಿಗಳ ಒತ್ತಾಯ

ನ್ಯಾಯದ ಪರ ಹೋರಾಟದಲ್ಲಿ ಪಾಲ್ಗೊಂಡ ಸಂದರ್ಭಗಳಲ್ಲಿ ನನ್ನ ಮೇಲೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ ನನ್ನ ವಿರುದ್ಧ ಯಾವುದೇ ಗಂಭೀರ ಅಥವಾ ತೀವ್ರ ಸ್ವರೂಪದ ಪ್ರಕರಣಗಳಿಲ್ಲ. ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಕೈಬಿಟ್ಟಿರುವ ಕುರಿತು ಪ್ರಶ್ನೆ ಎತ್ತಿದ ಶಾಸಕಿ, “ಪ್ರಕರಣಗಳು ದಾಖಲಾಗಿರುವುದೇ ಮಾನದಂಡವಾಗಿದ್ದರೆ, ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಇರುವ ಸಚಿವರ ಮೇಲೂ ಪ್ರಕರಣಗಳಿಲ್ಲವೇ? ಎಂಬ ಪ್ರಶ್ನೆ ಕೇಳಬೇಕಾಗುತ್ತದೆ,” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...