ರಾಯಚೂರು | 86 ಮಂದಿ ಸಫಾಯಿ ಕರ್ಮಚಾರಿಗಳಿಗೆ ಎಂಎಸ್‌ಐಡಿ ಗುರುತಿನ ಚೀಟಿ ವಿತರಣೆ

Date:

ರಾಯಚೂರು ಜಿಲ್ಲೆಯ 86 ಮಂದಿ ಸಫಾಯಿ ಕರ್ಮಚಾರಿ ಫಲಾನುಭವಿಗಳಿಗೆ ಎಂಎಸ್‌ಐಡಿ ಗುರುತಿನ ಚೀಟಿ ನೀಡಲಾಗಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚನೆ ನೀಡಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಕಾಯ್ದೆಯಡಿ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ರಚನೆಯಾಗಿದೆ. ಆ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ರಾಯಚೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದು, ಸಭೆಯಲ್ಲಿ ಅವರು ಮಾತನಾಡಿದರು. “ರಾಜ್ಯ ಸಫಾಯಿ ಕರ್ಮಚಾರಿ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ 86 ಮಂದಿಗೆ ಎಂಎಸ್‌ಐಡಿ ಗುರುತಿನ ಚೀಟಿ ನೀಡಲು ಆದೇಶಿಸಿದೆ” ಎಂದರು.

“ಸಫಾಯಿ ಕರ್ಮಚಾರಿಗಳ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾಧಿಕಾರಿ, ನಗರಸಭೆ, ಶಾಸಕರ ನಿಧಿ, ವಿಧಾನ ಪರಿಷತ್ ನಿಧಿ ಸೇರಿದಂತೆ ಒಟ್ಟು 17.16 ಲಕ್ಷ ರೂ. ಬಿಡುಗಡೆಯಾಗಿದೆ. ಸಮುದಾಯ ಭವನ ನಿರ್ಮಾಣ ಕಾಮಗಾಗರಿ ಅರ್ಧಕ್ಕೆ ನಿಂತಿದೆ. ಉಳಿದ ಕಾಮಗಾರಿ ಪೂರ್ಣಣಕ್ಕೆ ನಗರಸಭೆಯಿಂದ 5 ಲಕ್ಷ ಮತ್ತು ಶಾಸಕರ ನಿಧಿಯಿಂದ 5 ಲಕ್ಷ ಒಟ್ಟು 10 ಲಕ್ಷ ರೂ.ನಲ್ಲಿ ಸಮುದಾಯ ಭವನ ಕಾಮಗಾರಿ ಪೂರ್ಣಕ್ಕೆ ಶಾಸಕರಿಗೆ ತಿಳಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಯಾತಲಾಬ್ ಬಡಾವಣೆಯಲ್ಲಿ 10 ತೆರೆದ ಗುಂಡಿಗಳಿದ್ದು, ಅವುಗಳನ್ನು ಮುಚ್ಚಲು ಈಗಾಗಲೇ ನಗರಸಭೆಗೆ ಸೂಚಿಸಲಾಗಿದೆ. ಒಂದು ವಾರದೊಳಗೆ ತೆರೆದ ಗುಂಡಿಗಳನ್ನು ಮುಚ್ಚಬೇಕು” ಎಂದು ಸೂಚಿಸಿದರು.

ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದು 86 ಕುಟುಂಬಗಳಿಗೆ ಯಾವುದೇ ಮನೆಗಳಿಲ್ಲ. ಸರ್ವೆ ನಂ. 209ರಲ್ಲಿ ಏಗನೂರು ಟೆಂಪಲ್ ಹತ್ತಿರ 6 ಎಕರೆ ಸರ್ಕಾರಿ ಭೂಮಿ ಇದ್ದು, 2 ಎಕರೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಮನೆ ನೀಡಲು ಅನುಮೋದನೆ ನೀಡಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಶೈಕ್ಷಣಿಕ ಸೌಲಭ್ಯಕ್ಕಾಗಿ ಶೇ.24.10, ಎಸ್‌ಸಿಪಿ, ಟಿಎಸ್‌ಪಿ ಅನುದಾನ ಶೇ.20ರಷ್ಟು ಮೀಸಲಿಟ್ಟು ವಿದ್ಯಾರ್ಥಿ ವೇತನ ಒದಗಿಸಬೇಕು. ಸಫಾಯಿ ಕರ್ಮಚಾರಿಗಳಿಗಾಗಿ ನಿಗದಿಪಡಿಸಿದ ಸ್ಮಶಾನ ಭೂಮಿ ಒತ್ತುವರಿಯಾಗಿದ್ದು, ತೆರವುಗೊಳಿಸಲಾಗಿದೆ. ಸ್ಮಶಾನ ಭೂಮಿ ಸರ್ವೆ ಮಾಡಿಸಿ ಹದ್ದುಬಸ್ತು ಮಾಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮನರೇಗಾ ಯೋಜನೆ ಅನುಷ್ಠಾನ; ಗದಗ ಜಿಲ್ಲಾ ಪಂಚಾಯತಿಗೆ ಎರಡನೇ ಸ್ಥಾನ

ಈ ವೇಳೆ ಸಫಾಯಿ ಕರ್ಮಚಾರಿಗಳಿಗೆ ಎಂಎಸ್‌ಐಡಿ ಕಾರ್ಡ್ ವಿತರಣೆ ಮಾಡಲಾಯಿತು.

ಜಿ.ಪಂ. ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಂದ್ರ ಜಲ್ದಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...