ರಾಯಚೂರು | ಮಳಿಗೆ ತೆರವು ಮಾಡಲು ಹೋಗಿದ್ದ ನಗರಸಭೆ ಸಿಬ್ಬಂದಿ; ಮಾರಕಾಸ್ತ್ರ ಹಿಡಿದು ಬೆದರಿಕೆ

Date:

ನಗರಸಭೆ ವ್ಯಾಪ್ತಿಗೆ ಬರುವ ಮಳಿಗೆಗಳನ್ನು ಖಾಲಿಮಾಡಿಸಲು ಹೋಗಿದ್ದ ನಗರಸಭೆ ಸಿಬ್ಬಂದಿಗಳಿಗೆ ಮಾರಕಾಸ್ತ್ರ ಹಿಡಿದು ಜೀವ ಬೆದರಿಕೆ ಹಾಕಿರುವ ಘಟನೆ ರಾಯಚೂರು ನಗರದ ಮಹಿಳಾ ಸಮಾಜದ ಬಳಿ ನಡೆದಿದೆ.

ಟೆಂಡರ್ ಅವಧಿ ಮುಗಿದಿದ್ದರಿಂದ ಬಾಕಿಯಿರುವ ಬಾಡಿಗೆ ಹಣ ಪಾವತಿಸಿ ಮಳಿಗೆಗಳನ್ನು ಖಾಲಿ ಮಾಡಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ನಗರಸಭೆ ಪೌರಾಯುಕ್ತರು 2023ರಲ್ಲಿ ಮಳಿಗೆಗಳ ಬಾಡಿಗೆದಾರರಿಗೆ ನೋಟಿಸ್ ನೀಡಿದ್ದರು. ಅಲ್ಲಿಂದ ಇಲ್ಲಿಯವರಗೆ ಬಾಡಿಗೆಯನ್ನೂ ಪಾವತಿಸದೇ, ಮಳಿಗೆಗಳನ್ನು ಖಾಲಿಯೂ ಮಾಡದೇ ವ್ಯಾಪಾರ ವಹಿವಾಟು ನಡೆಸುತ್ತಿದ್ದರಿಂದ ನಗರಸಭೆ ಸಿಬ್ಬಂದಿ ಇಂದು (ಫೆ.23) ಬೆಳಿಗ್ಗೆ ಮಳಿಗೆ ಖಾಲಿ ಮಾಡಿಸಲು ಮುಂದಾಗಿದ್ದಾರೆ.

ಆದರೆ, ಮಳಿಗೆಯಲ್ಲಿದ್ದ ಶಂಶುದ್ದೀನ್ ಎಂಬ ತೆಂಗಿನ ಕಾಯಿ ವ್ಯಾಪಾರಿ ಕಳೆದ 15ವರ್ಷಗಳಿಂದ ಬಾಡಿಗೆಯಲ್ಲಿದ್ದು, ಏಕಾಎಕಿ ಖಾಲಿಮಾಡುವದಿಲ್ಲ ಎಂದು ವಾಗ್ವಾದ ನಡೆಸಿ, ಸಿಬ್ಬಂದಿಗಳಿಗೆ ಮಚ್ಚು ತೋರಿಸಿ ಬೆದರಿಸಿದ್ದಾನೆ. ಘಟನೆಯಿಂದ ವಿಚಲಿತರಾದ ಸಿಬ್ಬಂದಿ ಮಳಿಗೆ ತೆರವುಗೊಳಿಸಬೇಕೆಂದು ಎಚ್ಚರಿಸಿದ್ದಾರೆ. ಸಾರ್ವಜನಿಕರು ಅನೇಕರು ಮಧ್ಯಪ್ರವೇಶಿಸಿ ಮಾರಕಾಸ್ತ್ರ ಬಿಡುವಂತೆಯೂ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇರೊಬ್ಬರ ಹೆಸರಿನಲ್ಲಿ ಬಾಡಿಗೆ ಪಡೆದು ವ್ಯವಹಾರ ನಡೆಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಸಿರುವ ನಗರಸಭೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ನಗರಸಭೆ ಕಚೇರಿ ಹೊಂದಿಕೊಂಡಿರುವ ಮಳಿಗೆಗಳಿಗೆ ಬೀಗ ಹಾಕಿದ್ದಾರೆ. ನಗರದ ವಿವಿಧ ಕಡೆಗಳಲ್ಲಿರುವ ಮಳಿಗೆ ಟೆಂಡರ್ ಆಹ್ವಾನಿಸಿದ್ದು ಟೆಂಡರ್ ಮೂಲಕ ಪಡೆಯುವಂತೆ ನಗರಸಭೆ ಸಿಬ್ಬಂದಿ ಮನವಿ ಮಾಡಿದ್ದಾರೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಮಳಿಗೆ ತೆರವು ಕಾರ್ಯ ನಡೆಸಲಾಗುತ್ತಿದೆ.

ಮಳಿಗೆದಾರರು ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ಏಕಾಎಕಿ ತೆರವುಗೊಳಿಸದೇ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...