ರಾಯಚೂರು | ಹಿಂದೂ ರಥೋತ್ಸವಕ್ಕೆ ಮುಸ್ಲಿಮರಿಂದ ₹2 ಲಕ್ಷ ದೇಣಿಗೆ

Date:

ಲಿಂಗಸುಗೂರು ತಾಲೂಕಿನ ಕಸಬಾಲಿಂಗಸುಗೂರು ಗ್ರಾಮದ ಕುಪ್ಪಿ ಭೀಮದೇವರ ರಥೋತ್ಸವಕ್ಕೆ ಗ್ರಾಮದ ಮುಸ್ಲಿಂಮರು 2 ಲಕ್ಷ ರೂ ಹಣ ದೇಣಿಗೆ ನೀಡಿ ಭಾವೈಕ್ಯತೆ ಮೆರೆದಿದ್ದಾರೆ.

ಗ್ರಾಮದ ಕುಪ್ಪಿಭೀಮ ದೇವರ ರಥೋತ್ಸವಕ್ಕೆ 100 ವರ್ಷ ತುಂಬಿದ್ದರಿಂದ ಡಿಸೆಂಬರ್‌ನಲ್ಲಿ ನಡೆಯುವ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲು ಗ್ರಾಮದ ಮುಖಂಡರು ತೀರ್ಮಾನಿಸಿದ್ದರು. ಗ್ರಾಮದ ಎಲ್ಲ ಸಮುದಾಯದಿಂದ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಮುಸ್ಲಿಂ ಸಮುದಾಯದ ಮುಖಂಡರು ಒಟ್ಟಿಗೆ ಸೇರಿ ಪರಸ್ಪರ ದೇಣಿಗೆ ಸಂಗ್ರಹಿಸಿ ಎರಡು ಲಕ್ಷ ರೂಪಾಯಿ ದೇಣಿಗೆ ಸಂಗ್ರಹಿಸಿ ದೇವಸ್ಥಾನದ ಸಮಿತಿ ಕಾರ್ಯದರ್ಶಿಗೆ ನೀಡಿದ್ದಾರೆ.

ಮುಸ್ಲಿಂ ಸಮಾಜದ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದಿನ ಕಲುಷಿತ ಸಮಾಜದಲ್ಲಿ ಹಲವೆಡೆ ಹಿಂದೂ ಮುಸ್ಲಿಂ ಕಲಹ, ರಾಜಕೀಯ ನಾಯಕರ ಮಾತಿಗೆ ಆಸ್ಪದ ನೀಡಿ ಪರಸ್ಪರ ಕಿತ್ತಾಡುವವರ ಮಧ್ಯೆ ರಥೋತ್ಸವಕ್ಕೆ ದೇಣಿಗೆ ನೀಡುವ ಮೂಲಕ ಸೌಹಾರ್ದ ಸಂದೇಶ ನೀಡಿ ತಕ್ಕ ಉತ್ತರ ಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೈಕ್ ತಡೆದು ನಾಲ್ಕು ಲಕ್ಷ ದೋಚಿ ಪರಾರಿ

ಈ ವೇಳೆ ಅಲ್ಲಾಸಾಬ ಬಾಗವಾನ್, ಯೂಸುಫ್ ಡ್ರೈವರ್, ಬಂದೇನವಾಜ್, ಖಾಜಾಸಾಬ್‌ ಬಾಗವಾನ್, ಖಾಜಾಸಾಬ್ ಸುಬಾನ್, ಬಾಗವಾನ್‌, ರಾಮಯ್ಯ ಗುತ್ತೇದಾರ, ಸೂಗಯ್ಯ ಸ್ವಾಮಿ ಅತ್ತನೂರು, ಅಮರೇಶ ಹೊರಪೇಟಿ, ರಮೇಶ್ ತಲೆವಡಕರ, ಕುಪ್ಪನಗೌಡ ಮೇಲ್ಮನೆ, ಸೇರಿದಂತೆ ಊರಿನ ಗಣ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...