ರಾಯಚೂರು | ಗೌತಮ್ ಅದಾನಿಯಂಥ ಭ್ರಷ್ಟ ಕಂಪೆನಿಗಳ ವಿರುದ್ಧ ರಾಷ್ಟ್ರೀಯ ಆಂದೋಲನ: ಎಸ್ ಆರ್ ಹಿರೇಮಠ

Date:

ಗೌತಮ್‌ ಅದಾನಿ ನಡೆಸುತ್ತಿರುವ ಕಂಪೆನಿಗಳ ಭ್ರಷ್ಟಾಚಾರ ಹಾಗೂ ಅಪರಾಧಿ ಚಟುವಟಿಕೆಗಳ ವಿರುದ್ಧ ಎಫ್‌ಡಿ, ಜೆಎಂಎಂ ಹಾಗೂ ಇತರ ಸಮಾನ ಮನಸ್ಕ ಸಂಘಗಳು ಜಂಟಿಯಾಗಿ ರಾಷ್ಟ್ರೀಯ ಆಂದೋಲನ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಟಿಜನ್ ಫಾರ್ ಡೆಮೊಕ್ರಸಿ ಅಧ್ಯಕ್ಷ ಎಸ್ ಆರ್ ಹಿರೇಮಠ ಹೇಳಿದರು.

ರಾಯಚೂರು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ಸಿಟಿಜನ್ ಫಾರ್ ಡೆಮೊಕ್ರಸಿ(ಸಿಎಫ್‌ಡಿ) ಸಂಸ್ಥೆಯ 50ನೇ ವರ್ಷದ ಸಂಭ್ರಮಾಚರಣೆ ಭಾಗವಾಗಿ ಈ ಆಂದೋಲನ ನಡೆಸಲಾಗುತ್ತಿದೆ. ಗೌತಮ್ ಅದಾನಿ ಮತ್ತು ಅವನಿಗೆ ಸಂಬಂಧಿಸಿದ ಕಂಪನಿಗಳೊಂದಿಗೆ ಅಮೇರಿಕಾದಲ್ಲಿ ನಡೆಸಿದ ಭ್ರಷ್ಟಾಚಾರ ಮತ್ತು ಶೇರುಗಳ ಅವ್ಯಹಾರದ ಬಗ್ಗೆ ಅಮೆರಿಕ ಆರೋಪ ಮಾಡಿದೆ” ಎಂದರು.

“ದೇಶಲ್ಲಿಯೂ ಅಧಿಕಾರಿಗಳಿಗೆ ಲಂಚ ನೀಡಿದ ಬಗ್ಗೆ ಹಾಗೂ ಬಂಡವಾಳ ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಲಾಗಿದೆಯೆಂದು ಆರೋಪ ಮಾಡಲಾಗಿದೆ. ಹಾಗಾಗಿ ಈ ಎಲ್ಲ ಹಗರಣಗಳನ್ನು ಜನರ ಬಳಿ ಇಡಲು ನಿರ್ಧರಿಸಲಾಗಿದೆ. ದುಷ್ಟ ಬಂಡವಾಳಶಾಹಿ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಮಂತ್ರಿ ಮೋದಿ ಮತ್ತು ಗೌತಮ್ ಅದಾನಿ ನಡುವಿನ ಅಪವಿತ್ರ ಮೈತ್ರಿಯನ್ನು ಸಾರ್ವಜನಿಕರ ಮುಂದಿಡಲು ಆಂದೋಲನ ನಡೆಸಲಾಗುವುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು. ಗೌತಮ್ ಅದಾನಿ ಮತ್ತು ಪ್ರಧಾನಿ ಮೋದಿಯವರ ನಡುವಿನ ಅಪವಿತ್ರ ಮೈತ್ರಿಯು ಸಾಮಾನ್ಯ ನಾಗರಿಕರ ಮೇಲೆ ಮತ್ತು ದೇಶದ ಆರ್ಥಿಕತೆ ಮೇಲೆ ಹಾನಿಕಾರಕ ಪರಣಾಮ ಬೀರುತ್ತದೆ. ಸಾಮಾನ್ಯ ಜನರ ಬದುಕನ್ನು ಇದು ಬಿಕ್ಕಟ್ಟಿಗೆ ಒಡ್ಡುತ್ತದೆ. ಆರ್ಥಿಕತೆಯಲ್ಲಿ ಹಣದುಬ್ಬರವನ್ನು ಹೆಚ್ಚಿಸಿ ಜನರ ಬದುಕನ್ನು ಕಡು ಕಷ್ಟಕ್ಕೆ ಈಡು ಮಾಡುತ್ತಿದೆ. ರೈತರ ಆಂದೋಲನವನ್ನು ಸರ್ಕಾರಗಳು ಗೌರವದಿಂದ ಕಾಣಬೇಕು” ಎಂದು ಹೇಳಿದರು.

“ದೆಹಲಿ ಗಡಿಗಳಿಂದ ದೆಹಲಿಯನ್ನು ಪ್ರವೇಶಿಸುವುದಕ್ಕೆ ಅನುಮತಿ ನೀಡಬೇಕು ಹಾಗೂ ಹರಿಯಾಣ ಮತ್ತು ಪಂಜಾಬ್ ಗಡಿಗಳಲ್ಲಿ ಅವರ ಮೇಲೆ ಅಶ್ರುವಾಯು ಮತ್ತು ಇತರೆ ಅಸ್ತ್ರಗಳನ್ನು ಪ್ರಯೋಗಿಸಿ ಹಿಂಸೆ ನೀಡಬಾರದು. ಸಂಸತ್ತಿನಲ್ಲಿ ರೈತ-ವಿರೋಧಿ ಮತ್ತು ಕಾರ್ಪೊರೇಟ್ ಪರವಾದ ಮೂರು ಕರಾಳ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಸಂದರ್ಭದಲ್ಲಿ ರೈತರಿಗೆ ನೀಡಿದ ಆ‌ಶ್ವಾಸನೆಗಳನ್ನು ಪೂರೈಸಬೇಕು” ಎಂದು ಒತ್ತಾಯಿಸಿದರು.

“2025ರ ಜನವರಿ 18ರಂದು ದೆಹಲಿಯ ಜೆಇಪಿಎಫ್‌ನಲ್ಲಿ ನಡೆಯುವ ಸಿಎಫ್‌ಡಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಆಂದೋಲನದ ಬಗ್ಗೆ ವಿವರವಾಗಿ ಚರ್ಚಿಸಿ ಕಾರ್ಯಯೋಜನೆಯನ್ನು ಸಿದ್ದಪಡಲಾಗುವುದು. ಈ ಆಂದೋಲನಲ್ಲಿ ಆಖಿಲ ಭಾರತ ಮಟ್ಟದ ಸಂಘಟನೆಗಳು ಹಾಗೂ ರಾಜ್ಯ ಮಟ್ಟದ ಸಂಘಟನೆಗಳ ಸಹಕಾರದ ಬಗ್ಗೆಯೂ ಚರ್ಚಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಲಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಮನರೇಗಾದಲ್ಲಿ ಕೃಷಿ ಕಾರ್ಮಿಕರಿಗೆ 200 ದಿನಗಳ ಉದ್ಯೋಗ ನೀಡಬೇಕು, ದಿನಗೂಲಿಯನ್ನು ₹600ಕ್ಕೆ ಹೆಚ್ಚಿಸಬೇಕು. ಒಂದು ವೇಳೆ ಪ್ರಸ್ತುತ್ತ ಸರ್ಕಾರವು ತನ್ನೆಲ್ಲ ಕ್ರಮಗಳನ್ನು ಸರಿಪಡಿಸಿಕೊಳ್ಳದಿದ್ದರೆ ಮತ್ತು ರೈತರ ವಿವೇಕಾವಣಿಯನ್ನು ಆಲಿಸದಿದ್ದರೆ ಮೋದಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರಕ್ಕೆ 2029ರ ಚುನಾವಣೆಯಲ್ಲಿ ಜನರು ಆರ್‌ಎಸ್‌ಎಸ್ ಬೆಂಬಲದೊಂದಿಗೆ ಅನುಸರಿಸುತ್ತಿರುವ ಪ್ರತಿಗಾಮಿ ಜನವಿರೋಧಿ ಹಾಗೂ ಅಪಾಯಕಾರಿ ವಿಚಾರಗಳನ್ನು ಕೊನೆಗಾಣಿಸುತ್ತಾರೆ. ಏಕೆಂದರೆ ಅಷ್ಟೊತ್ತಿಗೆ ಜನರಿಗೆ ಬಿಜೆಪಿಯ ನಿಜ ಹೂರಣ ಬಹಿರಂಗವಾಗುತ್ತದೆ. ಆದರ ದುಷ್ಟ ಹುನ್ನಾರಗನ್ನು ಜನರು ಅರ್ಥ ಮಾಡಿಕೊಂಡಿರುತ್ತಾರೆ” ಎಂದು ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ರವಿಕೃಷ್ಣ ರೆಡ್ಡಿ, ಜಾನ್‌ವೆಸ್ಲಿ, ಖಾಜಾ ಅಹ್ಮದ್ ಅಸ್ಲಂ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...