ರಾಯಚೂರು | ಮಾ.3ರಿಂದ 5ರವರೆಗೆ ತೆಲಂಗಾಣದಲ್ಲಿ ರಾಷ್ಟ್ರೀಯ ಐಕ್ಯತಾ ಸಮ್ಮೇಳನ

Date:

ಸಿಪಿಐ(ಎಂಎಲ್) ಮಾಸ್ ಲೈನ್ ಸಮಿತಿಯಿಂದ ಮಾ.3ರಿಂದ 5ರವರೆಗೆ ತೆಲಂಗಾಣ ಖಮ್ಮಂನಲ್ಲಿ ರಾಷ್ಟ್ರೀಯ ಐಕ್ಯತಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಡಿ.ಎಚ್ ಪೂಜಾರ ಹೇಳಿದರು.

ಅವರಿಂದು ರಾಯಚೂರಿನಲ್ಲಿ ಮಾದ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಸಿಪಿಐ(ಎಂಎಲ್) ಪ್ರಜಾಪಂಥ, ಪಿಸಿಸಿ-ಸಿಪಿಐ(ಎಂಎಲ್), ಸಿಪಿಐ(ಎಂಎಲ್) ಆರ್‌ಯ ಕಮುನಿಷ್ಯ ಸಂಘಟನೆಗಳು ಐಕ್ಯಗೊಳ್ಳಲಿದ್ದು ಕೋಮುವಾದಿ, ಕಾರ್ಪೋರೇಟ್ ಶಕ್ತಿಗಳ ವಿರುದ್ದ ಐಕ್ಯ ಹೋರಾಟಕ್ಕೆ ವೇದಿಕೆ ಸಿದ್ದಗೊಳ್ಳಲಿದೆ ಎಂದರು.

ದೇಶ ಗಂಡಾಂತರಕ್ಕೆ ಸಿಲುಕಿದೆ. ಬಿಜೆಪಿ ನೇತೃತ್ವದ ಸರ್ಕಾರ ದೇಶದಲ್ಲಿ ಅಧಿಕಾರಕ್ಕೆ ಬಂದನಂತರ ಕೋಮುಭಾವನೆಗಳನ್ನು ಕೆರಳಿಸಿ ಜನರನ್ನು ಒಡೆಯುವ ಕೆಲಸ ಮಾಡಲಾಗುತ್ತಿದೆ. ಬಡತನ, ನಿರುದ್ಯೋಗ, ಬೆಲೆ ಏರಿಕೆ ಕುರಿತು ಜನರು ಗಮನ ನೀಡದಂತೆ ಧರ್ಮ ಧರ್ಮಗಳ, ಜಾತಿಗಳ ಮಧ್ಯೆ ಸಂಘರ್ಷ ನಡೆಯುವಂತೆ ಮಾಡಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲು ಪುಲ್ವಾಮ ದುರ್ಘಟನೆಗಳ ಹೆಸರಿನಲ್ಲಿ ಬಿಜೆಪಿ ಅಧಿಕಾರ ಹಿಡಿದರೆ, ಈಬಾರಿ ರಾಮ ಹೆಸರಿನಲ್ಲಿ ಅಧಿಕಾರ ಹಿಡಿಯುವ ಹುನ್ನಾರ ಪ್ರಾರಂಭಿಸಿದೆ. ಅಯೋಧ್ಯಯ ಶ್ರೀರಾಮ ಮಂದಿರ ನಿರ್ಮಾಣದಿಂದ ದೇಶದ ಜನರ ಸಮಸ್ಯೆಗಳು ಪರಿಹಾರವಾಗುತ್ತಿವೆ ಎಂದು ಬಿಂಬಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2014ರಲ್ಲಿ 53ಲಕ್ಷ ಕೋಟಿ ದೇಶದ ಸಾಲವಿತ್ತು. ಈಗ ಒಂದು ಲಕ್ಷ 95 ಸಾವಿರ ಲಕ್ಷ ಕೋಟಿ ಸಾಲ ಮಾಡಲಾಗಿದೆ. ರೈತರ ಸಾಲ ಮನ್ನಾ ಮಾಡಲು ಆರ್ಥಿಕ ಹೊರೆ ಎಂದು ಹೇಳುವವರು ಆದಾನಿಯವರ 15 ಲಕ್ಷ ಕೋಟಿ ಆದಾಯ ಪಡೆದಿದ್ದಾರೆ. ಕಾರ್ಪೋರೇಟ್ ಕಂಪನಿಗಳ 10ಲಕ್ಷ ಕೋಟಿ ಸಾಲಮನ್ನಾ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೆ 11 ಲಕ್ಷ ಕೋಟಿ ಬಡ್ಡಿ ಪಾವತಿಸಿದೆ. ಸರ್ಕಾರ ಸಾಲದಿದ್ದರೂ ಆದಾನಿ, ಅಂಬಾನಿಗಳ ಆದಾಯ ಕುಸಿದಿಲ್ಲ. ಜಿಎಸ್‌ಟಿ ಸೇರಿದಂತೆ ಅನೇಕ ರೀತಿ ಕರಗಳನ್ನು ಜನರ ಮೇಲೆ ಹಾಕಿ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರವೂ ಸಹ ಅಬಕಾರಿ ಆದಾಯ ಮೇಲೆ ಅವಲಂಬಿತವಾಗಿ ಜನರಿಗೆ ಕುಡಿಯುಲು ಹೇಳುತ್ತಿದೆ ಎಂದು ಕಿಡಿಯಾದರು.

ಹನುಮ ಧ್ವಜ, ಕುವೆಂಪು ಘೋಷ ವಾಕ್ಯ ಬದಲಾವಣೆ, ನಾಡಗೀತೆ ಕುರಿತು ಚರ್ಚಿಸುವ ಶಾಸಕರು ಜನರಿಗೆ ಕೆಲಸ, ಕುಡಿಯುವ ನೀರು, ಆರೋಗ್ಯ ಕುರಿತು ಚರ್ಚೆ ಮಾಡುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ, ರೈತ, ಕಾರ್ಮಿಕ ನೀತಿ ವಿರೋಧಿಸಿ ಕಮುನಿಷ್ಯ ಪಕ್ಷಗಳು ಒಂದೇ ವೇದಿಕೆ ಮೂಲಕ ಬಲಿಷ್ಠ ಹೋರಾಟಕ್ಕೆ ಸಿದ್ದವಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ರಮೇಶ ಪಾಟೀಲ್, ಬಸವರಾಜ ಯರದಿಹಾಳ, ಅಶೋಕ ನಿಲೋಗಲ್, ಸುರೇಶ, ಸ್ವಾಮಿದಾಸ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...