ರಾಯಚೂರು | ಮುಡಾ ಪ್ರಕರಣದಲ್ಲಿ ತಪ್ಪು ಮಾಡಿಲ್ಲ,ರಾಜೀನಾಮೆ ನೀಡಲ್ಲ: ಸಂಸದ ಕುಮಾರ್ ನಾಯ್ಕ

Date:

ಮುಡಾ ಹಗರಣ ಮುಂದಿಟ್ಟುಕೊಂಡು ನನಗೆ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸುತ್ತಿರುವುದು ಅಕ್ಷಮ್ಯ ಹಾಗೂ ನಾನು ತಪ್ಪು ಮಾಡಿಲ್ಲ ನಾನು ರಾಜೀನಾಮೆ ನೀಡಲ್ಲ ಎಂದು ರಾಯಚೂರು ಸಂಸದ ಜಿ ಕುಮಾರ್ ನಾಯ್ಕ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ.ಕುಮಾರಸ್ವಾಮಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ತಪ್ಪು ಮಾಡಿರದ ಪ್ರಕರಣವನ್ನಿಟ್ಟುಕೊಂಡು ಚುನಾಯಿತ ಪ್ರತಿನಿಧಿಯಾದ ನನ್ನ ರಾಜಿನಾಮೆ ಕೇಳುವುದು ತಪ್ಪು, ನಾನು ತಪ್ಪೇ ಮಾಡಿಲ್ಲ. ನಾನು ನನ್ನನ್ನು ಆಯ್ಕೆ ಮಾಡಿದ ಜನರಿಗೆ ದ್ರೋಹ ಮಾಡಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಪುನರುಚ್ಚರಿಸಿದರು.

“ಮುಡಾ ಸೈಟ್ ಪ್ರಕರಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ನನ್ನ ಹೆಸರು ಪ್ರಸ್ತಾಪಿಸಿದ್ದು ಈ ಸಂಬಂಧ ಅಧಿಕಾರಿಗಳು ನನಗೆ ಮಾಹಿತಿ ತಿಳಿಸಿಲ್ಲ. ಪ್ರಕರಣದ ಬಗ್ಗೆ ಈ‌ ಹಿಂದೆ ಮಾಹಿತಿ ಕೇಳಿದಾಗ ಉತ್ತರಿಸಿದ್ದೆ. ಲೋಕಾಯುಕ್ತ ಅಧಿಕಾರಿಗಳ ತಿಳವಳಿಕೆಯ ಮೇಲೆ ಅವರು ವರದಿ ತಯಾರಿಸಿದ್ದು, ವಾಸ್ತವವಾಗಿ ನಾನು ತಪ್ಪು ಮಾಡಿಲ್ಲ. ಪ್ರಕರಣದ ಬಗ್ಗೆ ವಕೀಲರ ಜೊತೆ ಚರ್ಚಿಸಿ ಕಾನೂನು ರೀತಿಯಲ್ಲಿ ಎದುರಿಸುತ್ತೇನೆ” ಎಂದರು.

ನಾನು ನನ್ನ ಕ್ಷೇತ್ರದ ಮತದಾರರಿಂದ ಆಯ್ಕೆಯಾಗಿದ್ದೇನೆ. ನನ್ನ ಜನಕ್ಕೆ ಮೋಸ ಮಾಡುವ ಯಾವುದೇ ಕೆಲಸ ಮಾಡಿಲ್ಲ, ಮಾಡುವುದು ಇಲ್ಲ. ನಾನು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಭೂಸ್ವಾಧೀನ ಕಾಯ್ದೆಯಂತೆ ನನ್ನ ಅಧಿಕಾರ ವ್ಯಾಪ್ತಿಯಲ್ಲಿ ಕೆಲಸ ಮಾಡಿದ್ದೇನೆ ಯಾವುದೇ ಲೋಪ, ತಪ್ಪು ಎಸಗಿಲ್ಲ. ಅಂತಹದ್ದೇನಾದರು ಆಗಿದ್ದಲ್ಲಿ ಇದರ ವಿರುದ್ದ ಪ್ರಶ್ನೆ ಮಾಡುವ, ದೂರು ನೀಡುವ ಅವಕಾಶವಿತ್ತು ಯಾರು ಮಾಡಲಿಲ್ಲ” ಎಂದು ಹೇಳಿದರು.

ಮುಡಾ ಪ್ರಕರಣದಲ್ಲಿ ಲೋಪವಾಗಿದ್ದಲ್ಲಿ 20ವರ್ಷದ ವರೆಗೆ ಯಾರು ಚಕಾರ ಎತ್ತದೇ ಈಗ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ.‌ ನಾನು ಮೈಸೂರು ಜಿಲ್ಲಾಧಿಕಾರಿಯಾಗುವ ಮುನ್ನವೇ ಭೂಸ್ವಾಧೀನವಾಗಿತ್ತು, ನಾನು ಅಧಿಕಾರಿಕ್ಕೆ ಬಂದಾಗ ನನ್ನ ವ್ಯಾಪ್ತಿಯಲ್ಲಿ ನಡೆದುಕೊಂಡಿದ್ದೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ರಾಯಚೂರು | ಮಾದಕ ವಸ್ತು ಮಾರಾಟ ಜಾಲ ಕಡಿವಾಣಕ್ಕೆ ಮನವಿ

ಈ ವೇಳೆ ಮಹ್ಮದ್ ಶಾಲಂ, ಶಾಂತಪ್ಪ, ನರಸಿಂಹ ಮಾಡಗಿರಿ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...