ರಾಯಚೂರು | ಒಳಮೀಸಲಾತಿ ಜಾರಿಗಾಗಿ ಹೋರಾಟಗಾರರಿಂದ ಡಿಸಿ ಕಚೇರಿ ಮುತ್ತಿಗೆ ಯತ್ನ; ಬಂಧನ, ಬಿಡುಗಡೆ

Date:

ಸುಪ್ರೀಂ ಕೋರ್ಟ್ ಆದೇಶದಂತೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಬುಧವಾರ ರಾಯಚೂರಿನ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನು ಬಂಧಿಸಲಾಯಿತು.

ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಹೋರಾಟಗಾರರು ಧರಣಿ ನಡೆಸಿದ ಬಳಿಕ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಂದೋಬಸ್ತ್‌ ನಲ್ಲಿದ್ದ ಪೊಲೀಸರು, ಅವರನ್ನು ತಡೆದು ಬಂಧಿಸಿ ವಾಹನದಲ್ಲಿ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ಉದ್ದೇಶಿಸಿ ಹೋರಾಟಗಾರ ಎಸ್ ಮಾರೆಪ್ಪ, ಅಂಬಣ್ಣ ಆರೋಲಿಕರ್ ಮಾತನಾಡಿ, 2023ರ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ 6ನೇ ಗ್ಯಾರಂಟಿಯಾಗಿ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಇದೀಗ ಬೇಡಿಕೆಯನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಒಳಮೀಸಲಾತಿ ಬ್ಯಾಕ್‌ಲಾಗ್‌ ಸೇರಿದಂತೆ ಯಾವುದೇ ಹುದ್ದೆ, ನೇಮಕಾತಿ ಪ್ರಕ್ರಿಯೆಯನ್ನು ನಡೆಸಬಾರದು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಆನ್‌ಲೈನ್‌ ಬೆಟ್ಟಿಂಗ್ ಗೇಮ್‌ನಿಂದ ಯುವಕರು ಬೀದಿಪಾಲು: ನಿಷೇಧಕ್ಕೆ ಆಗ್ರಹಿಸಿ ಮನವಿ

ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಎಂ.ವಿರೂಪಾಕ್ಷಿ, ಜೆ.ಬಿ.ರಾಜು, ಪಿ.ಯಲ್ಲಪ್ಪ, ನರಸಪ್ಪ ದಂಡೋರಾ, ಜನಾರ್ಧನ ಹಳ್ಳಿಬೆಂಚಿ, ಕೆ.ಪಿ.ಅನಿಲ್‌ ಕುಮಾರ್, ರಾಜು, ಗಣೇಶ ಪಾಲ್ಯಂ, ಶಂಶಾಲಂ, ಎಚ್‌.ದೊಡ್ಡಪ್ಪ, ಎಸ್‌.ರಾಜು, ನಾಗರಾಜ, ಶಾಂತಪ್ಪ ಉಪ್ರಾಳ, ರಾಘವೇಂದ್ರ ಬೋರೆಡ್ಡಿ, ನರಸಿಂಹಲು ಸೇರಿದಂತೆ ಸಮಾಜದ ಮುಖಂಢರು ಪಾಲ್ಗೊಂಡಿದ್ದರು.

WhatsApp Image 2024 10 16 at 9.16.50 PM 1 1
WhatsApp Image 2024 10 16 at 9.16.50 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...