ರಾಯಚೂರು | ಕುಡಿಯುವ ನೀರು ಒದಗಿಸುವಂತೆ ಸಂಘಟನೆಗಳ ಆಗ್ರಹ

Date:

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಆಡಳಿತ ನಡೆ ವಿರೋಧಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್ಐ) ಮತ್ತು ಕರ್ನಾಟಕ ಪ್ರಾಂತ ರೈತ ಸಂಘಟನೆ (ಕೆಪಿಆರ್‌ಎಸ್) ನೇತೃತ್ವದಲ್ಲಿ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಗುರುಸಿದ್ದಪ್ಪ ಅವರಿಗೆ ಮನವಿ ಸಲ್ಲಿಸಿದರು.

ರಾಯಚೂರು ಜಿಲ್ಲೆ ಹಟ್ಟಿ ಪಟ್ಟಣ ಸಮೀಪದ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲೋಗಲ್ ಗ್ರಾಮದ 2ನೇ ವಾರ್ಡಿನ ನಿವಾಸಿಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ನಿತ್ಯವೂ ಪರದಾಡುವಂತಾಗಿದೆ. ಈ ಬಗ್ಗೆ ಹಲವು ಬಾರಿ ಆಡಳಿತದ ಗಮಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದಾರೆಯೇ ಹೊರತು ಯಾವುದೇ ಪ್ರಯೋಜನವಾಗಿಲ್ಲ” ಎಂದು ಸಂಘಟನಾಕಾರರು ಆರೋಪಿಸಿದರು.

“ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರು ಪಂಚಾಯಿತಿಯಲ್ಲಿ ಕೇಳಿದರೆ ʼನಿಮ್ಮದು ಭಾರೀ ಕಿರಿಕಿರಿ ಆಗಿದೆಯೆಂದು ಪಂಚಾಯತ್ ಸಿಬ್ಬಂದಿ ವೆಂಕಟೇಶ ಚಿಕ್ಕನಗನೂರು ಉಡಾಫೆಯಾಗಿ ಮಾತನಾಡುತ್ತಾರೆ. ಆಡಳಿತದ ಬೇಜವಾಬ್ಧಾರಿಯನ್ನು ಎತ್ತಿ ತೋರಿಸುತ್ತದೆ. ಇಂತಹ ನಡೆ ಖಂಡನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾರ್ಡಿನ ನೀರಿನ ಮೋಟಾರ್ ಕೆಟ್ಟು ಹೋಗಿದ್ದು, ಕೂಡಲೇ ದುರಸ್ಥಿಗೊಳೀಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ವಾರ್ಡ್‌ಗಳ ಸಮಸ್ಯೆಗಳನ್ನು ಇತ್ಯರ್ಥ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಡಿವೈಎಫ್ಐ ಮತ್ತು ಕೆಪಿಆರ್‌ಎಸ್ ಜಂಟಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಆರು ವರ್ಷ ಕಳೆದರೂ ವಿದ್ಯುತ್ ಕಾಮಗಾರಿ ಅಪೂರ್ಣ: ರೈತರಿಗೆ ಅನ್ಯಾಯ; ಆರೋಪ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ವೀರಾಪೂರ, ಕೆಪಿಆರ್‌ಎಸ್ ಮುಖಂಡರುಗಳಾದ ನಿಂಗಪ್ಪ ಎಂ, ಹನುಮಂತ ಉಪ್ಪಾರ, ಶಂಕರ್ ಗೌಡ, ಡಿವೈಎಫ್ಐ ಮುಖಂಡರುಗಳಾದ ಸಿದ್ದು ಪೂಜಾರಿ, ನಾಗರಾಜ್ ಅಂಗಡಿ, ಅಭಿಷೇಕ್, ಹುಸೇನ್ ಪಾಷಾ, ಶಿವಲಿಂಗ, ರವಿಕುಮಾರ, ವಿಶಾದ, ಶ್ರೀನಿವಾಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...