ರಾಯಚೂರು | ನಮ್ಮ ಸರ್ಕಾರದಿಂದ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿ: ಸಚಿವ ಶರಣಬಸಪ್ಪ ದರ್ಶನಾಪುರ

Date:

ನಮ್ಮ ಸರಕಾರವು ಕಲ್ಯಾಣ ಕರ್ನಾಟಕ ಭಾಗಕ್ಕೆ ಸಮಗ್ರ ಅಭಿವೃದ್ದಿಗಾಗಿ ಹೊಸ ಹೊಸ ಯೊಜನೆಗಳು ಜಾರಿಗೆ ತರುವ ನಿಟ್ಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ. ನಮ್ಮ ಭಾಗದಲ್ಲಿ ಕೌಶಲ್ಯಾಧಾರಿತ ಭವಿಷ್ಯದ ತಂತ್ರಜ್ಞಾನಕ್ಕೆ ಪೂರಕವಾದ ಉದ್ಯೋಗ ಸೃಷ್ಟಿಗಾಗಿ ಈಗಾಗಲೇ ಹಲವು ಯೋಜನೆಗಳ ಮೂಲಕ ಸಾರ್ವಜನಿಕರಿಗೆ ತಲುಪುತ್ತಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ಯವಾಗಿ ದೀಕ್ಷಣಾ ಗ್ಲೋಬಲ್ ಡೆವೆಲಪ್ಟೆಂಟ್ ಫೌಂಡೇಶನ್ ಕರ್ನಾಟಕ ಡಿಜಿಟಲ್ ಎಕೊನೊಮಿ ಮಿಷನ್ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕದ ಕೌಶಲ್ಯಾಧಾರಿತ ಭವಿಷ್ಯದ ಉದ್ಯೋಗ ಸೃಷ್ಟಿಗಾಗಿ ಮ್ಯಾರಥಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯೂತ್ ಐಕಾನ್ ಬಿಜಾಸ್ಟರ್ ಗ್ರೂಪ್‌ನ ಸಿಇಓ ಶ್ರೀ ಪ್ರಶಾಂತ್ ಬಿಜಾಪೂರ ಮಾತನಾಡಿ, ನಮ್ಮ ಭಾಗದ ಯುವಕರು ಯಾವುದೇ ಕೆಲಸಗಳನ್ನು ಮಾಡುವಾಗ ಸತತ ಪ್ರಯತ್ನ ಮಾಡಬೇಕು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ ಮರಳಿ ಯತ್ನವನ್ನು ಮಾಡಬೇಕು. ಹೆಚ್ಚು ಯುವಕರು ನಮ್ಮ ಭಾಗದ ದೇಶದ ಮಟ್ಟದಲ್ಲಿ ಗುರುತಿಸುವ ಹಾಗೆ ಕೆಲಸ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದೇಶದ ಔದ್ಯೋಗಿಕ ಕ್ಷೇತ್ರದಲ್ಲಿ ತಮ್ಮ ಜ್ಞಾನ, ಕೌಶಲ್ಯಗಳನ್ನು ಸದಾ ಕಲಿಯುತ್ತಾ, ಇನ್ನೊಬ್ಬರಿಗೂ ಸ್ಪೂರ್ತಿಯಾಗುತ್ತಾ ಮುಂದೆ ಸಾಗಬೇಕು. ದೀಕ್ಷಣಾ ಗ್ಲೋಬಲ್ ಡೆವಲಪಮೆಂಟ್ ಫೌಂಡೇಷನ್ ವತಿಯಿಂದ ನಡೆಯುತ್ತಿರುವ ಈ ಮ್ಯಾರಥಾನ್ ಯುವಕರಲ್ಲಿ ಹೊಸ ಚೈತನ್ಯ ಎಲ್ಲ ತುಂಬಲಿ ಆಶಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಮಾನ್ವಿ ಸಿರವಾರದ ಕೊನೆಯ ಭಾಗಕ್ಕೆ ನೀರು ಹರಿಸಲು ಆಗ್ರಹಿಸಿ ಸೆ.20 ರಸ್ತೆ ತಡೆ: ರೈತರ ಎಚ್ಚರಿಕೆ

ಕಾರ್ಯಕ್ರಮದಲ್ಲಿ ಬಸವರಾಜ ಗಡಗೆ, ಮಂಜುನಾಥ, ಆಕಾಶ ತೊನಸನಳ್ಳಿ, ಬಸವರಡ್ಡಿ, ಮುರುಗೇಶ, ಬಸವೇಶ ಎಂ, ಶಿವಕುಮಾರ ಕೊಡ್ಲಿ, ನಮೃತಾ, ಅಂಕುಶ, ಮಧುತ್ರಿ , ಮಹೇಶ, ಶ್ರೀಶೈಲ್, ಸಂತೋಷ, ಮಂಜುನಾಥ, ಸದಾನಂದ, ನಿರ್ದೇಶಕ ಸುಂದರ, ಪುಂಡಲಿಕ, ಕಾಲೇಜಿನ ವಿದ್ಯಾರ್ಥಿಗಳು, ಯುವಕರು, ಸಾರ್ವಜನಕರು ಹಾಜರಿದ್ದರು. ದೀಕ್ಷಣಾ ಗ್ಲೋಬಲ್ ಡೆವೆಲೆಪಮೆಂಟ್ ಫೌಂಡೇಷನ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುನೀಲ್ ಇನ್ನಿತರತರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...