ರಾಯಚೂರು | ₹60 ಲಕ್ಷದ ಭತ್ತ ಖರೀದಿಸಿ ವಂಚನೆ; ರೈತರಿಂದ ದೂರು ದಾಖಲು

Date:

ರೈತರಿಂದ ಭತ್ತ ಖರೀದಿಸಿ ಸುಮಾರು ₹60 ಲಕ್ಷ ಮೊತ್ತವನ್ನು ಕೊಡದೆ ಮೋಸವೆಸಗಿ ಪರಾರಿಯಾದ ವ್ಯಾಪಾರಿ ವಿರುದ್ಧ ರೈತರು ರಾಯಚೂರು ಜಿಲ್ಲೆಯ ಸಿಂಧನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪರಾರಿಯಾಗಿರುವ ವ್ಯಾಪಾರಿ ಮಲ್ಲೇಶ ಎಂಬಾತನ ವಿರುದ್ಧ ರೈತರು ದೂರು ನೀಡಿದ್ದಾರೆ. ಸಿಂಧನೂರು ತಾಲೂಕಿನ ಉಪ್ಪಳ ಮತ್ತು ದಢೇಸುಗೂರು ಗ್ರಾಮದ ರೈತರಿಂದ 4,500 ಚೀಲ ಭತ್ತ ಖರೀದಿಸಿದ ವ್ಯಾಪಾರಿಯೊಬ್ಬ ರೈತರಿಗೆ ₹60 ಲಕ್ಷ ಪಾವತಿಸದೇ ಪರಾರಿಯಾಗಿದ್ದಾನೆ.

ಕಾರಟಗಿಯಲ್ಲಿ ‘ಮಹಾಮಲ್ಲೇಶ್ವರ ಟ್ರೇಡಿಂಗ್’ ಹೆಸರಿನಲ್ಲಿ ಕಮಿಷನ್ ಏಜೆಂಟ್‍ರಾಗಿ ವ್ಯವಹಾರ ಮಾಡುತ್ತಿದ್ದ ಮಲ್ಲೇಶಗೆ ಉಪ್ಪಳ ಗ್ರಾಮದ ಸೂರ್ಯಬಾಬು 460 ಚೀಲ, ಕೆ ಎಂ ಬಸವರಾಜ 170 ಚೀಲ, ಬಸವರಾಜ ಸಂಗಟಿಯಿಂದ 200, ರಾಮರಾವ್ 1800 ಚೀಲ, ಜಿ ಗೋವಿಂದ 250 ಚೀಲ ಸೇರಿದಂತೆ 30 ಮಂದಿ ರೈತರು ಡಿಸೆಂಬರ್‌ ಮೊದಲ ವಾರದಲ್ಲಿ ಆರ್‌ಎನ್‍ಆರ್ ತಳಿಯ ಭತ್ತವನ್ನು ಮಾರಾಟ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

75 ಕೆಜಿ ಭತ್ತಕ್ಕೆ ₹1800, ಪ್ರತಿ ಕ್ವಿಂಟಲ್‍ಗೆ ₹2400 ಬೆಲೆ ನಿಗದಿ ಪಡಿಸಿ 15 ದಿನಗಳಲ್ಲಿ ಹಣ ಪಾವತಿಸುವುದಾಗಿ ಮಲ್ಲೇಶ ಭರವಸೆ ನೀಡಿದ್ದ. ಅವಧಿ ಮುಗಿದ ನಂತರ ರೈತರು ಅಂಗಡಿಗೆ ಬಂದಾಗ ಬೀಗ ಹಾಕಲಾಗಿತ್ತು. ಎರಡ್ಮೂರು ದಿನಗಳಿಂದ ಅಲೆದಾಡಿದರೂ ಅಂಗಡಿ ಮಾಲೀಕರ ಪತ್ತೆಯಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಲೈನ್ ಮೆನ್‌ಗಳ ಕೊರತೆ | ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್‌ಗಳ ನೇಮಕ: ಸಚಿವ ಕೆ ಜೆ ಜಾರ್ಜ್‌

“ಉಪ್ಪಳದ ಭೀಮಯ್ಯ ಅವರ ಜೊತೆಯಲ್ಲಿ ಪಾಲುದಾರನಾಗಿ ಮೂರು ವರ್ಷಗಳಿಂದ ಕಾರಟಗಿಯ ಮಲ್ಲೇಶ ವ್ಯಾಪಾರ ಮಾಡುತ್ತಿದ್ದರಿಂದ ರೈತರಿಗೆ ಪರಿಯಚವಾಗಿದ್ದ. ಮಲ್ಲೇಶ ಕಳೆದ ವರ್ಷ ಇದೇ ರೀತಿ ಉದ್ರಿ ಪಡೆದು ಹೇಳಿದ ಮಾತಿನಂತೆ ಹಣ ಕೊಟ್ಟಿದ್ದನು. ಆದರೆ ಈಗ ಓಡಿ ಹೋಗಿದ್ದಾನೆ” ಎಂದು ಉಪ್ಪಳದ ರೈತರಾದ ರಾಮರಾವ್, ಸೂರ್ಯಬಾಬು ಅಳಲು ತೋಡಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...