ರಾಯಚೂರು | ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ

Date:

ರಾಜ್ಯದ ಎಲ್ಲಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ದರ್ಜೆಗೆ ಉನ್ನತೀಕರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಅನಿರ್ದಿಷ್ಟವಾಧಿ ಪ್ರತಿಭಟನೆ ನಡೆಸಲಾಯಿತು.

ಗ್ರಾಮ ಪಂಚಾಯ್ತಿಗಳು ಸ್ಥಳೀಯ ಸರ್ಕಾರಗಳಾಗಿ ಕಾರ್ಯನಿರ್ವಹಿಸಲು ಸರ್ಕಾರ ಅನೇಕ ನಿರ್ದೇಶನಗಳು ಜನರಿಗೆ ಸೌಲಭ್ಯ, ಸೌಕರ್ಯ ಒದಗಿಸಲು ಸಾಧ್ಯವಾಗದೇ ಹೋಗಿದೆ. ವಾರ್ಡ್ ವಾರು, ಗ್ರಾಮಸಭೆಗಳ ಮೂಲಕ ಜನರ ಬೇಡಿಕೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಸರ್ಕಾರ ವಿವಿಧ ಯೋಜನೆಗಳಡಿ ಗುರಿ ಸಾಧನೆಗೆ ಸೀಮಿತಗೊಳಿಸುತ್ತಿರುವುದು ಪಂಚಾಯ್ತಿಗಳ ಮೂಲ ಕೆಲಸ ಕಾರ್ಯಗಳು ನಿರ್ವಹಿಸಲಾಗದ ಸ್ಥಿತಿಯಿದೆ. ಕೇರಳ ಮಾದರಿಯಂತೆ 28 ಇಲಾಖೆಗಳನ್ನು ಪಂಚಾಯ್ತಿ ವ್ಯಾಪ್ತಿಗೆ ಒಳಪಡಿಸಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಗೆಜೆಡೆಟ್ ಗ್ರೂಪ್ ಬಿ ವೃಂದಕ್ಕೆ ಮೇಲ್ದರ್ಜೆಗೇರಿಸುವುದು, ಏಳು ವರ್ಷ ಪೂರೈಸಿರುವ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಬೇರೆ ಜಿಲ್ಲೆಗೆ ವರ್ಗಾಯಿಸುವುದನ್ನು ಕೈ ಬಿಡಬೇಕು, ಗ್ರಾಮ ಪಂಚಾಯ್ತಿಗಳಿಗೆ ಲೆಕ್ಕಸಹಾಯಕ, ಸಿಬ್ಬಂದಿ ನೇಮಿಸಬೇಕು, ಜವಾನ, ಕರವಸೂಲಿಗಾರ, ಪಂಪ್ ಆಪರೇಟರ್‌ಗಳಿಗೆ ಕನಿಷ್ಟ ವೇತನ ನೀಡುವುದು, ಪಂಚಾಯ್ತಿ ಗ್ರೇಡ್ ವೃಂದರಿಂದ ಪಿಡಿಓ ವೃಂದಕ್ಕೆ ಮುಂಬಡ್ತಿ ನೀಡುವುದು. ಮುಂಬಡ್ತಿ ಅನುಪಾತವನ್ನು 35 ರಿಂದ 60 ಕ್ಕೆ ಹೆಚ್ಚಿಸಬೇಕು ಸೇರಿದಂತೆ ಪಂಚಾಯ್ತಿ ಚುನಾಯಿತ ಸದಸ್ಯರು, ಸಿಬ್ಬಂದಿಗಳು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಅಣ್ಣಾರಾವ್, ಸಂಘದ ಪದಾಧಿಕಾರಿಗಳಾದ ತಾಯಣ್ಣ ಕಲ್ಮಲಾ, ಶ್ರೀಧರಗೌಡ, ಭೀಮರೆಡ್ಡಿ ಗುಂಜಳ್ಳಿ, ಮಲ್ಲಿಕಾರ್ಜುನ, ಗುರುಪಾದ, ರೇಖಾ, ರವಿ, ಅನ್ನಪೂರ್ಣ, ಲಕ್ಷ್ಮೀರೆಡ್ಡಿ ಸೇರಿ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...