ರಾಯಚೂರು | ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡಲು ಒತ್ತಾಯ

Date:

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಸಮೀಪ ಗುರುವಾರ ನಡೆದ ಸಾರಿಗೆ ಬಸ್ ಹಾಗೂ ಲೊಯೊಲಾ ಶಾಲೆಯ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಚಾಲಕರ ಒಕ್ಕೂಟ ರಾಯಚೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಾರಿಗೆ ಬಸ್ ಹಾಗೂ ಶಾಲಾ ವಾಹನದ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡಿದ್ದಾರೆ. ಕನಿಷ್ಠ ₹10 ಲಕ್ಷ ಸರ್ಕಾರ ಹಾಗೂ ₹10 ಲಕ್ಷ ಕೆಎಸ್ಆರ್‌ಟಿಸಿ ಸೇರಿ ಒಟ್ಟು 20 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಶಾಲಾಡಳಿತ ಮಂಡಳಿಯಿಂದ ಗಾಯಗೊಂಡ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ತಲಾ ₹10 ಲಕ್ಷ ನೀಡಬೇಕು. ಶಾಶ್ವತ ಅಂಗವಿಕಲತೆ ಹೊಂದಿದ ಮಕ್ಕಳಿಗೆ ಸರ್ಕಾರದಿಂದ ₹5, ಲಕ್ಷ ಆಡಳಿತ ಮಂಡಳಿ ₹5 ಲಕ್ಷ ಪರಿಹಾರ ನೀಡಬೇಕು. ಶಾಲಾ ವಾಹನ ಚಾಲಕರಿಗೆ ಕನಿಷ್ಠ 5ರಿಂದ 10 ವರ್ಷ ಅನುಭವ ಹೊಂದಿದವರನ್ನು ಮಾತ್ರ ನೇಮಿಸಿಕೊಳ್ಳಬೇಕು. ಪ್ರಮುಖ ರಸ್ತೆಗಳಲ್ಲಿ, ಹೆದ್ದಾರಿಗಳಲ್ಲಿನ ಗುಂಡಿಗಳನ್ನು ಮುಚ್ಚಿ ತಕ್ಷಣವೇ ದುರಸ್ತಿಗೊಳಿಲು ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಯಚೂರು | ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ

ಜಿಲ್ಲಾ ಘಟಕದ ಅಧ್ಯಕ್ಷ ಜಿ.ವೆಂಕಟೇಶ, ಉಪಾಧ್ಯಕ್ಷ ಜಾಕೀರ್ ಹುಸೇನ್, ಪ್ರಧಾನ ಕಾರ್ಯದರ್ಶಿ ರಘು ಈಟೇಕರ್, ಲಕ್ಷ್ಮೀ ನಾರಾಯಣ ಶೆಟ್ಟಿ, ಅಂಬಾಜಿ ರಾವ್, ಶಾಂತಕುಮಾರ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...