ರಾಯಚೂರು ಜಿಲ್ಲೆಯ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಿಡಿಒ ಪ್ರವೀಣ ಕುಮಾರ ಕೆ ಇತ್ತೀಚೆಗೆ ನಡೆದ RSS ಪಥ ಸಂಚಲನದಲ್ಲಿ ಭಾಗವಹಿಸಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು, ಶಾಸಕ ಮಾನಪ್ಪ ವಜ್ಜಲ್ ಅವರೊಂದಿಗೆ ಸಂಘವೊಂದರ ಸಮವಸ್ತ್ರ ಧರಿಸಿ ಕೈಯಲ್ಲಿ ದೊಣ್ಣೆ ಹಿಡಿದು ಪ್ರವೀಣ ಅವರು ಪಥಸಂಚಲನದಲ್ಲಿ ಭಾಗವಹಿಸಿರುವುದು ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸುವ ಇಂತಹ ವಿಭಜಕ ಶಕ್ತಿಗಳ ಜೊತೆ ಕೈಜೋಡಿಸಿದ್ದಾರೆ. ಕೂಡಲೇ ಅವರನ್ನು ಅಮಾನತುಗೊಳಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ, ಪಂಚಾಯತ್ ರಾಜ್ ಸಚಿವರಿಗೆ ಕಾರ್ಮಿಕ ಸಂಘಟನೆಯ ಮುಖಂಡ ಹೆಚ್ ಎಂ ಬಾಬು ಮನವಿ ಮಾಡಿದ್ದಾರೆ.




