ರಾಯಚೂರು | ‘ಏಮ್ಸ್ʼ ಮಂಜೂರಿಗೆ ಸಂಸದರ ಸಕರಾತ್ಮಕ ಪ್ರತಿಕ್ರಿಯೆ: ಬಸವರಾಜ ಕಳಸ

Date:

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ದೆಹಲಿಯಲ್ಲಿ ಕರ್ನಾಟಕದ ಸಂಸದರನ್ನು ಭೇಟಿ ಮಾಡಲಾಗಿದ್ದು, ಕರ್ನಾಟಕದ ಯಾವ ಸಂಸದರಲ್ಲಿಯೂ ರಾಯಚೂರಿಗೆ ಏಮ್ಸ್ ಮಂಜೂರಾಗುವಲ್ಲಿ ಅಸಮಧಾನವಿಲ್ಲ. ಎಲ್ಲಾ ಸಂಸದರಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಏಮ್ಸ್ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಬಸವರಾಜ ಕಳಸ ಹೇಳಿದರು.

ಅವರಿಂದು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಯಾಗಬೇಕೆಂದು ನಡೆಯುತ್ತಿರುವ ಸುದೀರ್ಘ ಹೋರಾಟದ ಭಾಗವಾಗಿ ಇತ್ತೀಚೆಗೆ ಹೋರಾಟ ಸಮಿತಿಯ 11 ಜನರು ದೆಹಲಿಗೆ ನಿಯೋಗ ತೆರಳಿದ್ದು, ದೆಹಲಿಯಲ್ಲಿ 28 ಜನ ಕರ್ನಾಟಕದ ಲೋಕಸಭಾ ಸದಸ್ಯರು ಹಾಗೂ 14 ಜನ ರಾಜ್ಯಸಭಾ ಸದಸ್ಯರನ್ನು ಭೇಟಿಯಾಗಿ ಚರ್ಚಿಸಲಾಗಿದೆ. ಬಹುತೇಕ ಎಲ್ಲಾ ಸಂಸದರನ್ನು ಭೇಟಿ ಮಾಡಲಾಗಿದ್ದು, ಎಲ್ಲಾ ಸಂಸದರೂ ಕೂಡ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿರುವುದು ಆಶಾಭಾವನೆಯನ್ನು” ಮೂಡಿಸಿದೆ ಎಂದರು.

“ಈ ಕುರಿತು ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿಯವರು ರಾಯಚೂರಿಗೆ ಏಮ್ಸ್ ಮಂಜೂರು ಮಾಡಿಸಲು ಪ್ರಯತ್ನಿಸುವೆ ಎಂದ ಮರುದಿನವೇ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವುದು ಸಂತಸದ ವಿಚಾರವಾಗಿದೆ. ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರನ್ನೂ ಭೇಟಿ ಮಾಡಿ ರಾಯಚೂರಿಗೆ  ಏಮ್ಸ್ ಮಂಜೂರು ಮಾಡಲು ಮನವಿ ಮಾಡುತ್ತೇನೆ” ಎಂದು ಬೊಮ್ಮಾಯಿಯವರು ಹೇಳಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ರಾಯಚೂರು | ಮೊಲ ಬೇಟೆ ಪ್ರಕರಣ; ಶಾಸಕನ ಪುತ್ರ, ಸಹೋದರನ ವಿರುದ್ಧ ದೂರು ದಾಖಲು

ಈ ವೇಳೆ ಏಮ್ಸ್ ಹೋರಾಟ ಸಮಿತಿಯ ಪ್ರಮುಖ ಅಶೋಕ ಕುಮಾರ ಜೈನ್, ಬೆಂಜಮನ್ ಥಾಮಸ್, ವಿನಯಕುಮಾರ ಚಿತ್ರಗಾರ, ಎಂ.ಆರ್ ಭೇರಿ, ಸಂತೋಷ ಕುಮಾರ ಮಿರ್ಜಾಪೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...