ರಾಯಚೂರು | ಕೋರ್ಟ್‌ಗೆ ಕರೆತಂದಿದ್ದ ವೇಳೆ ಪರಾರಿಯಾದ ಕೈದಿ

Date:

ನ್ಯಾಯಾಲಯಕ್ಕೆ ಕರೆತಂದಿದ್ದ ವಿಚಾರಣಾಧೀನ ಕೈದಿಯೊಬ್ಬ ಪೊಲೀಸರನ್ನು ನೂಕಿ ಪರಾರಿಯಾಗಿರುವ ಘಟನೆ ಮಸ್ಕಿ ಪಟ್ಟಣದ ಸಿವಿಲ್‌ ಮತ್ತು ಜೆಎಂಎಫ್‌ಸಿ ಕೋರ್ಟ್‌ ಆವರಣದಲ್ಲಿ ನಿನ್ನೆ (ಮಾ.6) ನಡೆದಿದೆ.

ದೊಡ್ಡ ದುರುಗೇಶ ಪರಾರಿಯಾದ ಕೈದಿ. ಕಳ್ಳತನ ಪ್ರಕರಣವೊಂದರ ಕುರಿತು ವಿಚಾರಣೆಗೆ ಹೋಗಿದ್ದ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಆರೋಪದಡಿ ದೊಡ್ಡ ದುರುಗೇಶ ಹಾಗೂ ಸಣ್ಣ ದುರುಗೇಶರನ್ನು ಬಂಧಿಸಿ 20 ದಿನಗಳ ಹಿಂದೆ ಜೈಲಿಗೆ ಕಳಿಸಲಾಗಿತ್ತು. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಬಳಿಕ ಪುನಃ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದರು.

ನ್ಯಾಯಾಲಯದ ಸಭಾಂಗಣದಿಂದ ಹೊರಬರುತ್ತಿದ್ದಂತೆ ಪೊಲೀಸರನ್ನು ನೂಕಿ ದೊಡ್ಡ ದುರುಗೇಶ ಪರಾರಿಯಾಗಿದ್ದಾನೆ. ಬೆನ್ನಟ್ಟಿದರೂ ಸಿಗದೆ ಜಾಲಿ ಮುಳ್ಳುಗಳ ನಡುವೆ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ರಾಯಚೂರು | ಗ್ಯಾರಂಟಿ ವೈಫಲ್ಯ ಆರೋಪ; ಜೆಡಿಎಸ್ ಪ್ರತಿಭಟನೆ

ಇತ್ತ ಕೈದಿ ಪರಾರಿಯಾದ ಪ್ರಕರಣ ಸಂಬಂಧ ಕರ್ತವ್ಯನಿರತ ಪೊಲೀಸರ ಮೇಲೆ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಲಿದೆ. ತಪ್ಪಿಸಿಕೊಂಡಿರುವ ಕೈದಿ ದೊಡ್ಡ ದುರುಗೇಶನ ಪತ್ತೆಗೆ 2 ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...