ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಖಾಸಗಿ ಆಂಬುಲೆನ್ಸ್ ಗಳ ಹಾವಳಿ; ದಂಧೆಗೆ ಕಡಿವಾಣ ಹಾಕಲು ಭೀಮ್ ಆರ್ಮಿ ಆಗ್ರಹ

Date:

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್‌ಗಳ ದರ್ಬಾರ್ ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಈ ದಂಧೆಯಲ್ಲಿ ಶಾಮೀಲಾಗಿರುವ ರಿಮ್ಸ್ ಸಿಬ್ಬಂದಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕೆಂದು ಜಿಲ್ಲಾಡಳಿತಕ್ಕೆ ಹಾಗೂ ಜಿಲ್ಲಾ ವೈದ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ರಾಯಚೂರು ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ರಿಮ್ಸ್‌ಗೆ ಪ್ರತಿನಿತ್ಯ ರಾಯಚೂರು ಜಿಲ್ಲೆಯ ಐದಾರು ತಾಲೂಕುಗಳಿಂದ, ಗ್ರಾಮಾಂತರ ಪ್ರದೇಶಗಳಿಂದ ಮಾತ್ರವಲ್ಲದೆ ಯಾದಗಿರಿ ಜಿಲ್ಲೆ ಹಾಗೂ ಗಡಿ ಪ್ರದೇಶಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದಲೂ ನೂರಾರು ರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡ ಖಾಸಗಿ ಆಂಬುಲೆನ್ಸ್ ಮಾಲಿಕರು ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಾ ದಂಧೆಗೆ ಇಳಿದಿದ್ದಾರೆ ಎಂದು ಆರೋಪಿಸಿದರು.

1000256236

ನಿಯಮಾನುಸಾರ ಯಾವುದೇ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್‌ಗಳಿಗೆ ನಿಲುಗಡೆಗೆ ಅವಕಾಶವಿಲ್ಲ. ಅವುಗಳು ಆಸ್ಪತ್ರೆ ಹೊರಭಾಗದಲ್ಲಿ ನಿಗದಿತ ಸ್ಥಳದಲ್ಲಿ ಇರಬೇಕು ಮತ್ತು ಅಗತ್ಯವಿದ್ದಾಗ ಮಾತ್ರ ಕರೆ ಬಂದ ಮೇಲೆ ಸೇವೆ ಸಲ್ಲಿಸಬೇಕು. ಆದರೆ ಈ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ರಾಯಚೂರು ರಿಮ್ಸ್ ಆಸ್ಪತ್ರೆಯ ಆವರಣದಲ್ಲಿಯೇ ಖಾಸಗಿ ಆಂಬುಲೆನ್ಸ್‌ಗಳು ಸದಾ ಬೀಡು ಬಿಟ್ಟಿರುವುದು ಗಂಭೀರ ಅಕ್ರಮಕ್ಕೆ ಸಾಕ್ಷಿಯಾಗಿದೆ ಎಂದರು.

ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ 6 ಸರ್ಕಾರಿ ಆಂಬುಲೆನ್ಸ್‌ಗಳಿದ್ದರೂ, 9 ಖಾಸಗಿ ಆಂಬುಲೆನ್ಸ್‌ಗಳು ನಿರಂತರವಾಗಿ ಆಸ್ಪತ್ರೆಯ ಆವರಣದಲ್ಲೇ ಕಾಣಿಸಿಕೊಳ್ಳುತ್ತಿವೆ. ಇದಕ್ಕಿಂತಲೂ ಆತಂಕಕಾರಿ ವಿಷಯವೆಂದರೆ, ರಿಮ್ಸ್ ಆಸ್ಪತ್ರೆಯ ಕೆಲ ಸಿಬ್ಬಂದಿಗಳು ಈ ದಂಧೆಯಲ್ಲಿ ಭಾಗಿಯಾಗಿದ್ದು, ಸರ್ಕಾರಿ ಆಂಬುಲೆನ್ಸ್‌ಗಳಿಗೆ ವಿವಿಧ ಸಮಸ್ಯೆಗಳಿವೆ ಎಂದು ರೋಗಿಗಳ ಸಂಬಂಧಿಕರಿಗೆ ಹೇಳಿ ಖಾಸಗಿ ಆಂಬುಲೆನ್ಸ್‌ಗಳನ್ನು ಸಂಪರ್ಕಿಸುವಂತೆ ಸೂಚಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಆಡಳಿತಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಈ ಅಕ್ರಮ ದಂಧೆಯಲ್ಲಿ ಆಡಳಿತದವರಿಗೂ ಕಮಿಷನ್ ಹೋಗುತ್ತಿದೆಯೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿದೆ ಎಂದು ಆಗ್ರಹಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಖಾಸಗಿ ಆಂಬುಲೆನ್ಸ್ ದಂಧೆಗೆ ಕಡಿವಾಣ ಹಾಕಬೇಕು. ಜೊತೆಗೆ ಶಾಮಿಲಾದ ಸಿಬ್ಬಂದಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಮರಕ್ಕೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ಈ ವೇಳೆ ಜಿಲ್ಲಾಧ್ಯಕ್ಷ ಸಿ ದೀಪಕ್ ಭಂಡಾರಿ, ವಿಶ್ವನಾಥ ಬಲ್ಲಿದೇವ್, ಖಲೀಲ್ ಹೈಮದ, ಅಬ್ದುಲ್ ಖೈಯುಮ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...