ರಾಯಚೂರು | ಪ್ರಿಯಾಂಕ್ ಖರ್ಗೆ ಅವರಿಗೆ ಕೊಲೆ ಬೆದರಿಕೆ – ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

Date:

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರ್‌ಎಸ್‌ಎಸ್‌ ಕಾರ್ಯಕರ್ತರ ವಿರುದ್ಧ ಹಾಗೂ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸಂಯೋಜಕ ಬಣದ ಜಿಲ್ಲಾ ಮುಖಂಡ ಮಲ್ಲಪ್ಪ ಗೋನಾಳ ಹೇಳಿದರು.

ಇಂದು ಪತ್ರಿಕಾ ಹೇಳಿಕೆ ನೀಡಿ, ಸರ್ಕಾರಿ ಶಾಲಾ ಕಾಲೇಜು ಆವರಣದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರವಾದ ದೊಣ್ಣೆ ಹಿಡಿದು ಪಥಸಂಚಲನ ಸೇರಿದಂತೆ ಇನ್ನಿತರ ಜನವಿರೋಧಿ ಚಟುವಟಿಕೆಗಳನ್ನು ಸಂಘಟನೆಯನ್ನು ನಿಷೇಧಿಸುವ ಸಚಿವ ಪ್ರಿಯಾಂಕ್ ಖರ್ಗೆ ಪ್ರಸ್ತಾಪ ಸರಿಯಾಗಿದೆ. ಇದನ್ನು ಸಹಿಸದೇ ಅವರ ಕುಟುಂಬದ ಮೇಲೆ ವೈಯಕ್ತಿಕವಾಗಿ ಬೆದರಿಕೆ ಹಾಕುತ್ತಿರುವ ಖಂಡನೀಯ ಎಂದರು.

ವಾಸ್ತವವಾಗಿ ಪಥಸಂಚಲನ ಮಾಡುವ ಅಧಿಕಾರ ಸಾಂವಿಧಾನಿಕವಾಗಿ ಇರುವುದು ಪೊಲೀಸ್ ಮತ್ತು ಇನ್ನಿತರ ರಕ್ಷಣಾ ಪಡೆಗಳಿಗೆ ಮಾತ್ರ. ಆರ್‌ಎಸ್‌ಎಸ್ ಸೇರಿದಂತೆ ಇತರ ಯಾವುದೇ ಸಂಘ ಸಂಸ್ಥೆಗಳು ಮೆರವಣಿಗೆ-ಪ್ರತಿಭಟನೆ ಮಾಡಬಹುದೇ ಹೊರತು, ‘ಪಥಸಂಚಲನವನ್ನಲ್ಲ. ಆದ್ದರಿಂದ ಸರ್ಕಾರ ದೃಢ ನಿಲುವು ತಾಳುವುದರ ಮೂಲಕ ಆರ್‌ಎಸ್ ಎಸ್ ದೊಣ್ಣೆ ಹಿಡಿದು ಪಥ ಸಂಚಲನ ನಡೆಸುವುದಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಗನವಾಡಿ ಕೇಂದ್ರದಲ್ಲಿ 20 ದಿನಗಳಿಂದ ಉಪಹಾರವಿಲ್ಲ — ಸಾರ್ವಜನಿಕರ ಆಕ್ರೋಶ

ಆರ್‌ಎಸ್‌ಎಸ್ ಹಿಂದುತ್ವದ ಹೆಸರಿನಲ್ಲಿ ಬ್ರಾಹ್ಮಣ್ಯದ ಪಾರಮ್ಯವನ್ನು ಜನ ಸಾಮಾನ್ಯರ ಮೇಲೆ ಹೇರುತ್ತಿದ್ದು, ಜನರ ಮನಸ್ಸಿನಲ್ಲಿ ಜಾತೀಯತೆ-ಮತೀಯತೆ, ಮೌಡ್ಯತೆ, ಮೂಢನಂಬಿಕೆಗಳ ವಿಷ ಬೀಜ ಬಿತ್ತುತ್ತಿದೆ. ಇಂತಹ ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...