ರಾಯಚೂರು | ಮದ್ಯಪಾನ ನಿಷೇಧಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Date:

ಮದ್ಯಪಾನ ನಿಷೇಧಿಸುವಂತೆ ಒತ್ತಾಯಿಸಿ ಮಧ್ಯಪಾನ ನಿಷೇಧ ಆಂದೋಲನ ಕರ್ನಾಟಕ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕಪ್ಪು ಪಟ್ಟಿ ಧರಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು.

ಮಧ್ಯ ನಿಷೇಧ ಆಂದೋಲನವು ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸತತ ಸರ್ಕಾರಗಳನ್ನು ಒತ್ತಾಯಿಸುತ್ತಲೇ ಬರುತ್ತಿದ್ದು, ಆದರೇ ಆಳುವ ಸರ್ಕಾರಗಳು ಮದ್ಯ ನಿಷೇಧಕ್ಕೆ ಮುಂದಾಗುತ್ತಿಲ್ಲ. ನವೆಂಬರ್ 25 ರಂದು ಹೋರಾಟಕ್ಕೆ ಮಣಿದ ಮುಖ್ಯಮಂತ್ರಿಗಳು ಕಾಲಾವಕಾಶ ಕೊಡಿ ಎಂದು ಕೇಳಿದ್ದರೂ ಭರವಸೆ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮದ್ಯ ಮಾರಾಟಕ್ಕೆ ಪರವಾನಿಗೆ (ಲೈಸನ್ಸ್ ) ಹೊಂದಲು ಹರಿಯಾಣ, ಮಹಾರಾಷ್ಟ್ರ, ರಾಜಸ್ಥಾನದಂತ ರಾಜ್ಯಗಳಲ್ಲಿ ಗ್ರಾಮ ಸಭೆಗಳಿಗೆ ಪರಮಾಧಿಕಾರ ನೀಡಲಾಗಿದೆ. ವಿವಿಧ ರಾಜ್ಯಗಳ ಪಂಚಾಯತ್ ರಾಜ್ ಕಾನೂನಿನಂತೆ ರಾಜ್ಯ ಸರ್ಕಾರಗಳು ಯಾವುದೇ ಒಂದು ಮದ್ಯದ ಅಂಗಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರವಾನಿಗೆ ನೀಡಲು (ತೆರೆಯಲು) ಗ್ರಾಮ ಸಭೆಯಲ್ಲಿ ಕನಿಷ್ಠ ಶೇಕಡಾ 20 ರಷ್ಟು ಮಹಿಳೆಯರ ಒಪ್ಪಿಗೆ ಪಡೆಯಬೇಕು. ಗ್ರಾಮಸಭೆಯ ಈ ಠರಾವಿಗೆ ಮಾನ್ಯತೆ ನೀಡಲೇಬೇಕು. ಹಾಗೆ ನಮ್ಮಲ್ಲೂ ಈ ಅಂಶವನ್ನು ಪಂಚಾಯತ ರಾಜ್ ಕಾನೂನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಕಡೆ ಪರವಾನಗಿ ಪಡೆದ ಅಂಗಡಿಗಳ ಸಮಸ್ಯೆಯಾದರೆ ಅದಕ್ಕಿಂತ ಹೆಚ್ಚು, ಮನೆ ಮನೆಗಳಲ್ಲಿ, ಪಾನಷಾಪ್, ಕಿರಾಣ ಅಂಗಡಿ, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ವಾಗುತ್ತಿದೆ. ಪ್ರತಿ ಹಳ್ಳಿಯಲ್ಲಿ ಮಹಿಳೆಯರ ಜಾಗೃತ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಅರೆ ನ್ಯಾಯಿಕ ಅಧಿಕಾರ ಕೊಡಬೇಕು. ಕರ್ನಾಟಕ ಪಂಚಾಯತ ರಾಜ್ ಕಾನೂನಿನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಈಗಾಗಲೆ ಹೆಚ್ಚುವರಿ ಸಮಿತಿಗಳು ಮಾಡುವ ಅವಕಾಶ ಇದೆ. ಕೂಡಲೇ ಬೇಡಿಕೆ ಈಡೇರಿಕೆಗೆ ಮುಂದಾಗಬೇಕೆಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮಸ್ಕಿ | ಹುಚ್ಚು ನಾಯಿ ದಾಳಿ; 10 ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ಪ್ರತಿಭಟನೆಯಲ್ಲಿ ಮಧ್ಯಪಾನ ನಿಷೇಧ ಆಂದೋಲನದ ಮುಖಂಡರಾದ ವಿರೂಪಮಾ, ಲಕ್ಷ್ಮಿ, ಚಂದ್ರಕಲಾ, ಕವಿತಾ, ಕಾಮಾಕ್ಷಿ ಸೇರಿದಂತೆ ನೂರಾರು ಮಹಿಳೆಯರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...