ರಾಯಚೂರು | ನೀರಿಗಾಗಿ ಹೆದ್ದಾರಿ ತಡೆದು ಪ್ರತಿಭಟನೆ

Date:

ರಾಯಚೂರಿನ ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 20ರವರಗೆ ನೀರು ಹರಿಸಲು ಆಗ್ರಹಿಸಿ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ವ್ಯಾಪ್ತಿಯ ಅಮರಾಪುರ ಕ್ರಾಸ್ ಬಳಿ ಕರ್ನಾಟಕ ಪ್ರಾಂತ ರೈತ ಸಂಘ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿತು.

“ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಸುಮಾರು 1 ಲಕ್ಷ 20 ಸಾವಿರ ಎಕರೆ ಪ್ರದೇಶದಲ್ಲಿ ರೈತರು ಬೆಳೆದಿರುವ ಭತ್ತ, ಮೆಣಸಿನಕಾಯಿ, ಶೇಂಗಾ, ಸಜ್ಜೆ ಸೇರಿ ಇನ್ನಿತರ ಬೆಳೆಗಳು ಕಟಾವಿಗೆ ಬರಲು ಒಂದುವರೆ ತಿಂಗಳು ಸಮಯ ಬೇಕಾಗಿದೆ. ಇನ್ನೂ ಕೆಲ ದಿನಗಳವರೆಗೆ ನೀರು ಹರಿಸದಿದ್ದರೆ ಬೆಳೆ ನಾಶವಾಗಿ ಕೈಗೆ ಬಂದೆ ತುತ್ತು ಬಾಯಿಗೆ ಬರದಂತಾಗುತ್ತದೆ. ಹಾಗಾಗಿ ಏಪ್ರಿಲ್‌ 20ರವರೆಗೆ ಕಾಲುವೆಗೆ ನೀರು ಹರಿಸಬೇಕು” ಎಂದು ಮನವಿ ಮಾಡಿದರು.

ನೀರಾವರಿ ಸಲಹಾ ಸಮಿತಿಯ ತೀರ್ಮಾನದಂತೆ ಮಾ. 23ಕ್ಕೆ ನೀರು ಸ್ಥಗಿತ ಮಾಡಿದಲ್ಲಿ ಪ್ರಸ್ತುತ ರೈತರು ಬೆಳೆದ ಬೆಳೆ ನಾಶವಾಗಿ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿ ರೈತರು ಸಾಲದ ಸುಳಿಗೆ ಗುರಿಯಾಗುವ ಸಾಧ್ಯತೆ ಹೆಚ್ಚಿದೆ. ನೀರಾವರಿ ವ್ಯಾಪ್ತಿಯಲ್ಲಿರುವ ಬೆಳೆಗಳನ್ನು ರಕ್ಷಣೆ ಮಾಡುವುದು ಸರ್ಕಾರ ಹಾಗೂ ನೀರಾವರಿ ಇಲಾಖೆಯ ಜವಾಬ್ದಾರಿಯಾಗಿದೆ. ಈಗಾಗಲೇ ರೈತರು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಎರಡನೇ ಬೆಳೆಯೂ ನೀರಿನ ಸಮಸ್ಯೆಯಿಂದ ಕೈ ಕೊಟ್ಟರೆ ರೈತರಿಗೆ ಉಳಿಗಾಲವಿಲ್ಲ” ಎಂದು ರೈತರು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಿಗ್ಗೆಯೇ ರಾಜ್ಯ ಹೆದ್ದಾರಿ ತಡೆದು ರೈತರು ಪ್ರತಿಭಟನೆಗೆ ಮುಂದಾಗಿದ್ದರಿಂದ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಪ್ರತಿಭಟನಾಕಾರರನ್ನು ಕೆಲ ಕಾಲ ಬಂಧಿಸಿದ್ದರಿಂದ ವಾತಾವರಣ ಬಿಗಡಾಯಿಸಿತ್ತು.

ಇದನ್ನೂ ಓದಿ: ರಾಯಚೂರು | ಲಾರಿ-ಬೈಕ್ ಡಿಕ್ಕಿ; ಓರ್ವ ಸಾವು

ಈ ವೇಳೆ ಕೆ ಜಿ ವೀರೇಶ್, ಬಸವರಾಜ ನರೇಗಲ್, ಸಿದ್ದಪ್ಪ ಗುಮೇದಾರ, ಮೌನೇಶ್, ಶಬ್ಬೀರ್, ಸಂಜೀವ ರೆಡ್ಡಿ, ಚಂದಪ್ಪ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...