ರಾಯಚೂರು | ರಾಜ್ಯಪಾಲರ ಹುದ್ದೆ ರದ್ದುಗೊಳಿಸಲು ಒತ್ತಾಯಿಸಿ ಕಮ್ಯೂನಿಸ್ಟ್ ಪಕ್ಷದಿಂದ ಪ್ರತಿಭಟನೆ

Date:

ದೇಶದ ವಿವಿಧೆಡೆ ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದು, ಪ್ರಜಾತಂತ್ರ ವ್ಯವಸ್ಥೆಗೆ ರಾಜ್ಯಪಾಲರ ಹುದ್ದೆ ಮಾರಕವಾಗಿ ಪರಿಣಮಿಸಿದೆ. ರಾಜ್ಯಪಾಲರ ಹುದ್ದೆಯನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಆನಂತರ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಭಾರತದ ಒಕ್ಕೂಟ ವ್ಯವಸ್ಥೆ ಅಸ್ಥಿರಗೊಳಿಸಲು ರಾಜಕೀಯವಾಗಿ ದುರ್ಬಳಕೆಯಾಗುತ್ತಿರುವ ಹಾಗೂ ಪ್ರಜಾತಂತ್ರಕ್ಕೆ ರಾಜ್ಯಪಾಲರ ಹುದ್ದೆ ಮಾರಕವಾಗಿದೆ. ಸಂವಿಧಾನಾತ್ಮಕವಾಗಿ ಅಗತ್ಯ ಕ್ರಮಕೈಗೊಳ್ಳಬೇಕು. ಆದರೆ, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರ ಕಚೇರಿ ರಾಜಕೀಯ ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಪಾಲರ ಕಚೇರಿಗೆ ಲೋಕಾಯುಕ್ತ ಸಂಸ್ಥೆ ಇತರೇ ಪ್ರಕರಣಗಳಲ್ಲಿ ತನಿಖೆಗೆ ಅನುಮತಿ ಕೇಳಿ ವರ್ಷಗಳೇ ಕಳೆದರೂ ಅವುಗಳ ಬಗ್ಗೆ ಯಾವುದೇ ತೀರ್ಮಾನ ಮಾಡದ ರಾಜ್ಯಪಾಲರು, ಮುಡಾ ಪ್ರಕರಣದಲ್ಲಿ ತೆಗೆದುಕೊಂಡ ತೀರ್ಮಾನ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಲಿಂಗಸುಗೂರು | ಕೃಷಿ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಒಂದು ಪಕ್ಷದ ಸರ್ಕಾರವು ತನಗಾಗದೆ ಇರುವ ರಾಜ್ಯದಲ್ಲಿ ಆಡಳಿತ ನಡೆಸುವ ಮತ್ತೊಂದು ಪಕ್ಷದ ಸರ್ಕಾರವನ್ನು ವಜಾಗೊಳಿಸಿರುವ ಉದಾಹರಣೆಗಳು ಸಾಕಷ್ಟು ಇವೆ. ರಾಜ್ಯಪಾಲರ ಹುದ್ದೆ ಅನಾವಶ್ಯಕವಾಗಿದ್ದು ಈ ಹುದ್ದೆಗಾಗಿ ಜನರಿಂದ ಸಂಗ್ರಹಿಸಿದ ಅಪಾರ ಪ್ರಮಾಣದ ತೆರಿಗೆ ಹಣವು ಅನಾವಶ್ಯಕವಾಗಿ ವ್ಯಯವಾಗಲಿದೆ. ಕೂಡಲೇ ರಾಜ್ಯಪಾಲರ ಹುದ್ದೆ ರದ್ದು ಮಾಡಬೇಕು ಎಂದು ರಾಷ್ಟ್ರಪತಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ ಕ್ಯಾತನಟ್ಟಿ, ಆನಂದ, ಭಾಷುಮಿಯಾ, ಮಾರೆಪ್ಪ ಹರವಿ, ಆಂಜನೇಯ ಕುರುಬದೊಡ್ಡಿ, ರಂಗಾರೆಡ್ಡಿ, ಹುಸೇನ ಬಾಷಾ, ಯಮನಪ್ಪ, ಸುಲೋಚನಾ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...