ರಾಯಚೂರು | ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

Date:

ಕೆಲಸದ ಅವಧಿ ಹೆಚ್ಚಳ ಮಾಡುವುದಕ್ಕೆ ಸರ್ಕಾರ ಮುಂದಾಗಿರುವುದು ಸೇರಿದಂತೆ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೈಬಿಡಲು ಒತ್ತಾಯಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.

ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕಾರ್ಮಿಕ ವಿರೋಧಿಯಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಲು ಮುಂದಾಗಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ವಹಿಸಿದಾಗಿನಿಂದ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಾ ಬಂದಿದೆ. ಈ ನೀತಿಗಳನ್ನು ವಿರೋಧಿಸಿ ಕಾರ್ಮಿಕರು ದೇಶಾದ್ಯಂತ ಹಲವಾರು ಮುಷ್ಕರಗಳನ್ನು ನಡೆಸುತ್ತಾ ಬಂದರೂ ಕೂಡ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಆಕ್ರಮಣವನ್ನು ಕಾರ್ಮಿಕರ ಮೇಲೆ ಮುಂದುವರಿಸಿದ್ದಾರೆ ಎಂದು ದೂರಿದರು.

ಮಹಿಳೆಯರಿಗೆ ಸುರಕ್ಷಿತ ಕ್ರಮಗಳಿಲ್ಲ, ಮಹಿಳೆಯರ ರಕ್ಷಣೆಗೆ ಭದ್ರತೆ ಒದಗಿಸಬೇಕು. ರಾತ್ರಿ ಪಾಳಿಯಲ್ಲಿ ನಿಯಮ ಕೈಬಿಡಲು ಒತ್ತಾಯಿಸಿದ ಪ್ರತಿಭಟನಾಕಾರರು, ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಲು ನಿರಂತರವಾಗಿ ಒತ್ತಾಯಿಸಲಾಗಿದೆ. ಆದರೂ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಿಲ್ಲ. ಕಾರ್ಮಿಕರ ಕೆಲಸಕ್ಕೆ ಅನುಗುಣವಾಗಿ ಕನಿಷ್ಠ ವೇತನ ನಿಗದಿಪಡಿಸಬೇಕು. ಕಾರ್ಮಿಕರ ಕಾಯ್ದೆ ತಿದ್ದುಪಡಿ ಮಾಡುವುದನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯೂ ಅಧಿಕಾರದ ಚುಕ್ಕಾಣೆ ಹಿಡಿದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ದೇಶದ ಜನತೆ ಮತ್ತು ಕಾರ್ಮಿಕ ವರ್ಗದ ಹಿತಾಸಕ್ತಿಯನ್ನು ಕಡೆಗಣಿಸುತ್ತಿದೆ. ಕಾರ್ಮಿಕರಿಗೆ 8 ಗಂಟೆ ಬದಲಾಗಿ 12 ಗಂಟೆವರೆಗೆ ಕೆಲಸದ ಅವಧಿಯನ್ನು ಹೆಚ್ಚಿಸಿಲು ಮುಂದಾಗಿದೆ. ಇದು ಖಂಡನೀಯ. ಇದನ್ನು ಕೇಂದ್ರ ಸರಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಬಳ್ಳಾರಿ | ಎರಡು ವರ್ಷದ ಮಗುವಿಗೆ ಲಿವರ್ ಸಮಸ್ಯೆ: ದಾನಿಗಳ ನೆರವಿಗಾಗಿ ಕಾಯುತ್ತಿರುವ ಪೋಷಕರು

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಹೆಚ್ ಪದ್ಮಾ, ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಎನ್ ಎಸ್ ವೀರೇಶ, ಎಐಟಿಯುಸಿ ಆನಂದ, ಐಎನ್‌ಟಿಯುಸಿ ಜಿಲ್ಲಾದ್ಯಕ್ಷ ತಿಮ್ಮಪ್ಪ ಸ್ವಾಮಿ, ಸಿಐಟಿಯು ಜಿ.ಕಾರ್ಯದರ್ಶಿ ಡಿಎಸ್ ಶರಣಬಸವ, ಎಐಯುಟಿಯುಸಿ ಕಾರ್ಯದರ್ಶಿ ಮಹೇಶ ಚೀಕಲಪರ್ವಿ, ಎಸ್ ಎಂ ಪೀರಾ, ಎಂ.ಶರಣಗೌಡ, ಎಂ.ರವಿ, ಸಲಾವುದ್ದಿನ್, ಶ್ರೀನಿವಾಸ ಕೊಮಾರಿ, ವಿಎಂ ಉಕ್ಕಲಿ ಸೇರಿಸಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...