ರಾಯಚೂರು | ಕಪ್ಪು ಪಟ್ಟಿ ಧರಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Date:

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

ಗ್ರಾಮ ಆಡಳಿತ ಕಚೇರಿಗಳಿಗೆ ಮೂಲ ಸೌಲಭ್ಯ ಒದಗಿಸಬೇಕು, ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು, ಸೇವಾ ನಿಯಮಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ನೀಡಬೇಕು ಹಾಗೂ ಅಂತರ್ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ 16ಎ ಉಪಖಂಡ(2)ನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಆಧಾರ ಸೀಡಿಂಗ್‌ನಲ್ಲಿ ಪತ್ತೆಯಾಗಿರುವ ಇ-ಪೌತಿ ಖಾತಾ ಆಂದೋಲನ ಚಾಲನೆ ಕೈಬಿಡಬೇಕು, ಚಿಕ್ಕಮಗಳೂರು ಜಿಲ್ಲೆಯ 30 ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿ ತಡೆದು, ನೈಸರ್ಗಿಕ ನ್ಯಾಯ ತತ್ವಗಳನ್ನು ಹಾಗೂ ಎಲ್ಲಾ ನಿಗಮಗಳನ್ನು ಉಲ್ಲಂಘಿಸಿ ಹೊರಡಿಸಿದ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ನೌಕರರ ಅನುಕಂಪದ ನೇಮಕಾತಿ ಹುದ್ದೆಯ ವೃಂದಮತ್ಯಯ ನೇಮಕಾತಿ ತಿದ್ದುಪಡಿ, ಜೀವ ಹಾನಿಯಾಗುವ ಅಧಿಕಾರಿಗೆ 50 ಲಕ್ಷ ಪರಿಹಾರ, ಆಪತ್ತಿನ ಭತ್ಯೆ, ಪೋಲಿಸ್ ಇಲಾಖೆಯಲ್ಲಿರುವಂತೆ ಒಂದು ತಿಂಗಳ ಹೆಚ್ಚುವರಿ ವೇತನ ಹಾಗೂ ಪ್ರಯಾಣ ಭತ್ಯೆ 500 ದಿಂದ 5000 ಸಾವಿರಕ್ಕೆ ಹೆಚ್ಚಳ, ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು, ಮನೆಹಾನಿ ವರದಿ ಪ್ರಾಥಮಿಕ ವರದಿ ನೀಡುವ ಅಧಿಕಾರ, ಬೆಳೆ ಸಮೀಕ್ಷೆ, ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ನೀಡಬೇಕು, ಮ್ಯುಟೇಷನ್ ಅವಧಿ ವಿಸ್ತರಿಸಬೇಕು ಹಾಗೂ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಫೆ.13 ರಂದು ಜಿಲ್ಲಾ ರೈತ ಸಮಾವೇಶ

ಈ ವೇಳೆ ಶ್ರೀನಿವಾಸ, ಬಸವರಾಜ, ಹಸನ್, ಸುರೇಂದ್ರ ಪಾಟೀಲ್, ಮಂಜುನಾಥ, ಹನುಮೇಶ, ಅಮರೇಶ, ಸುಭಾಷ್, ರಮೇಶ್, ಗಂಗಪ್ಪ, ದೇಶಪಾಂಡೆ, ವಾಜೇಂದ್ರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...