ರಾಯಚೂರು | ವಿದ್ಯುತ್ ಪರಿವರ್ತಕ ಬದಲಾವಣೆಗೆ ಒತ್ತಾಯಿಸಿ ಪ್ರತಿಭಟನೆ

Date:

ರಾಯಚೂರು ತಾಲೂಕಿನ ಮಮದಾಪುರ ಗ್ರಾಮದಲ್ಲಿ ಸುಟ್ಟುಹೋಗಿರುವ ವಿದ್ಯುತ್ ಪರಿವರ್ತಕ(ಟಿ.ಸಿ)ವನ್ನು ಬದಲಿಸಿ ಕೂಡಲೇ ಹೊಸ ಪರಿವರ್ತಕವನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಶನ್ (ಎಐಡಿವೈಒ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಎಐಡಿವೈಒ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಮಮದಾಪುರ ಗ್ರಾಮದಲ್ಲಿ ಸುಟ್ಟು ಹೋಗಿರುವ ವಿದ್ಯುತ್ ಪರಿವರ್ತಕವನ್ನು ಬದಲಿಸಿ ಕೂಡಲೇ 100 ಕೆ.ವಿ ಸಾಮರ್ಥ್ಯದ ಹೊಸ ವಿದ್ಯುತ್ ಪರಿವರ್ತಕವನ್ನು ಅಳವಡಿಸಬೇಕು ಎಂದು ಆಗ್ರಹಿಸಿದರು.

ಕಳೆದ ಮಾರ್ಚ್‌ನಲ್ಲಿ ವಿದ್ಯುತ್ ಸಮಸ್ಯೆಯ ಬಗ್ಗೆ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಇರುವ ವಿದ್ಯುತ್ ಪರಿವರ್ತಕ ಸಾಮರ್ಥ್ಯ ಊರಿನ ವಿದ್ಯುತ್ ಬಳಕೆ ಅವಶ್ಯಕತೆಗೆ ಸಾಕಾಗುತ್ತಿಲ್ಲ. ಗ್ರಾಮದಲ್ಲಿ ಬಲ್ಬ್‌ಗಳು ಉರಿಯುತ್ತಿಲ್ಲ. ಸರಿಯಾಗಿ ವೋಲ್ಟೇಜ್ ಇರದೇ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮದಲ್ಲಿ ವಿದ್ಯುತ್ ಕಂಬಗಳು ಹಾಳಾಗಿದ್ದು, ವಿದ್ಯುತ್ ವೈರುಗಳು ಜೋತು ಬಿದ್ದಿವೆ. ಇದರಿಂದ ವಿದ್ಯುತ್ ಅವಘಡ ಸಂಭವಿಸುವ ಅಪಾಯವಿದೆ ಎಂದು ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ ಜಾನೇಕಲ್ ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ವಿದ್ಯುತ್ ಅವಘಡ ಸಂಭವಿಸಿ ಒಂದು ಜಾನುವಾರು ಸತ್ತು ಹೋಗಿವೆ. ಈ ನಡುವೆ ವಿದ್ಯುತ್ ಪರಿವರ್ತಕವೇ ಸುಟ್ಟು ಹೋಗಿ ನಾಲ್ಕೈದು ದಿನಗಳು ಕಳೆದು ಊರು ಕತ್ತಲಲ್ಲಿ ಮುಳುಗಿದೆ ಎಂದು ಆರೋಪಿಸಿದ ಅವರು, ಕೂಡಲೇ ತುರ್ತಾಗಿ ಹೆಚ್ಚು ಸಾಮರ್ಥ್ಯವಿರುವ ಅಂದರೆ 100ಕೆ.ವಿ.ಎ ಸಾಮರ್ಥ್ಯದ ಹೊಸ ವಿದ್ಯುತ್ ಪರಿವರ್ತಕವನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಮುಧೋಳ | ಪ್ರವಾದಿ ಮುಹಮ್ಮದರ ಬಗ್ಗೆ ರಾಮಗಿರಿ ಮಹಾರಾಜರಿಂದ ಅವಹೇಳನಕಾರಿ ಹೇಳಿಕೆ: ಆಕ್ರೋಶ

ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಡಿ ಶಫಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕಿರಿಯ ಎಂಜಿನಿಯರ್ ಪ್ರಕಾಶ ಅವರು ಇದ್ದರು. 24 ಗಂಟೆಯೊಳಗೆ ಸಮಸ್ಯೆ ಇತ್ಯರ್ಥ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸುಗ್ರೀವ, ಮಾರೆಪ್ಪ, ಯಂಕೋಬ, ನಾಗಪ್ಪ, ಗುರುಮಾರಾಜ, ರಾಮು, ಮುನಿಸ್ವಾಮಿ, ಲಕ್ಷ್ಮಣ್ಣ, ಶುಭಕುಮಾರ್, ವೀರೇಶ್, ಜಮಲಮ್ಮ, ಶಾರದಮ್ಮ,ರೋಜಮ್ಮ,ವಿಮಲಮ್ಮ, ಯಮುನಪ್ಪ, ಆಂಜನೇಯ, ವಿನೋದ ಕುಮಾರ ಗ್ರಾಮಸ್ಥರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...