ರಾಯಚೂರು | ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ ಪಟ್ಟಾ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Date:

ಭೂಮಿಗಳಲ್ಲಿ ಬಗ‌ರ್ ಹುಕುಂ ಸಾಗುವಳಿದಾರರು ಸುಮಾರು 40 ರಿಂದ 50 ವರ್ಷಗಳಿಂದ ಫಾರಂ ನಂ: 50, 53, 57 ರಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ. ಕೂಡಲೇ ಜಮೀನುಗಳನ್ನು ತನಿಖೆ ಪರಿಶೀಲನೆ ನಡೆಸಿ ಪಟ್ಟಾ ನೀಡಬೇಕು ಎಂದು ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ವತಿಯಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ದೇವದುರ್ಗ ತಾಲೂಕಿನ ಜಾಲಹಳ್ಳಿ, ಪರಾಪುರ, ಕಕ್ಕಲದೊಡ್ಡಿ, ಬುದ್ದಿನ್ನಿ ಹೀಗೆ ಹಲವಾರು ಗ್ರಾಮಗಳಲ್ಲಿ ಸರಕಾರಿ ಹೆಸರಿನಲ್ಲಿರುವ ಜಮೀನುಗಳಲ್ಲಿ ಅನಧಿಕೃತವಾಗಿ ಅರ್ಜಿಗಳನ್ನು ಸಲ್ಲಿಸಿ ಸುಮಾರು ವರ್ಷ ಕಳೆದರೂ ಇಲ್ಲಿಯವರೆಗೂ ಪಟ್ಟಾ ನೀಡಿಲ್ಲ ಎಂದು ದೂರಿದರು.

1000037159

ರಾಜ್ಯದ ಹಲವು ಸಂಘಟನೆಗಳ ಸತತ ಹೋರಾಟದ ಒತ್ತಾಯದ ಪ್ರತಿಫಲವಾಗಿ ಸರಕಾರಿ ಗೋಮಾಳ, ಗೈರಾಣಿ, ಖರೇಜಾ ಖಾತ, ಪರಂಪೋಕ, ‘ಇನಾಮ್ ಹೆಸರಿನಲ್ಲಿರುವ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಾ ಸಕ್ರಮಕ್ಕಾಗಿ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ಕಲ್ಪಿಸಿದ್ದು, ಅದರ ತರುವಾಯ ಭೂಮಿಯ ಹಕ್ಕಿಗಾಗಿ ಹಲವಾರು ಬಾರಿ ಜಿಲ್ಲಾಡಳಿತಕ್ಕೆ ಮತ್ತು ತಾಲೂಕಾಡಳಿತ ಕಛೇರಿಗಳ ಮಾತ್ರ ಅಲೆದಾಟ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲಕಾಲಕ್ಕೆ ಭೂ ಮಂಜೂರಾತಿ ಸಮಿತಿಯು ಸಭೆಗಳನ್ನು ನಡೆಸಲು ಸರ್ಕಾರದ ಆದೇಶವಿದ್ದರೂ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂದು ದೂರಿದರು. ಸರ್ಕಾರ ಸುತ್ತೋಲೆಗಳನ್ನು ಕಟುಬದ್ಧವಾಗಿ ಮತ್ತು ಪ್ರಾಮಾಣಿಕತೆಯಿಂದ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಅನಧಿಕೃತ ಸಾಗುವಳಿದಾರರ ಸಕ್ರಮಕ್ಕೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಕೂಡಲೇ ನವೆಂಬರ್- 25’ರ ಒಳಗೆ ರೈತರ ಜಮೀನುಗಳ ಜಿ.ಪಿ.ಎಸ್ ಫೋಟೋ ಮತ್ತು ಸ್ಥಾನಿಕ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಸಚಿವರು ಹೇಳಿದ್ದಾರೆ. ಅದರ ಹಿನ್ನಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕೂಡಲೇ ರೈತರ ಜಮೀನುಗಳ ಅರ್ಹ ಫಲಾನುಭವಿಗಳ ಪಟ್ಟಿ ಮಾಡುವಂತೆ ಮನವಿ ಮಾಡಿದರು.

ಪ್ರತಿಭಟನೆಯ ಬಳಿಕ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಹಾಗೂ ತಹಶೀಲ್ದಾರ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ಕೊಪ್ಪಳ | ರೈತರ ನಾನಾ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಈ ವೇಳೆ ಕರ್ನಾಟಕ ಜನಶಕ್ತಿ ಮುಖಂಡ ಮಾರೆಪ್ಪ ಹರವಿ, ಭೂಮಿ ವಸತಿ ಜಿಲ್ಲಾ ಮುಖಂಡ ಆಂಜನೇಯ ಕುರುಬದೊಡ್ಡಿ, ಗ್ರಾಮಿಣ ಕೂಲಿಕಾರರ ಸಂಘಟನೆ ಮುಖಂಡ ಬಸವರಾಜ್ ಗಬ್ಬೂರು , ಹನುಮಂತ ಜೋಗಿ , ಶಿವಪ್ಪ ಬಲ್ಲಿದ , ಶಿವರಾಜ್ ರುದ್ರಾಕ್ಷಿ, ಬಸವರಾಜ್ ನಾಯಕ , ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...