ರಾಯಚೂರು | ಪರಿಶಿಷ್ಟ ಜಾತಿ ಸಮುದಾಯದ ಪ್ರತಿನಿಧಿಗಳ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

Date:

ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣ ಜಾರಿಗಾಗಿ ಪರಿಶಿಷ್ಟ ಜಾತಿಯ ತಲಾ ಒಂದು ಸಮುದಾಯದ ಪ್ರತಿನಿಧಿಯನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಹಾಗೂ ಸದಸ್ಯರು ಸೋಮವಾರ ರಾಯಚೂರು ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಸಮುದಾಯದಲ್ಲಿರುವ ಶೈಕ್ಷಣಿಕ ಮತ್ತು ಸರ್ಕಾರಿ ನೌಕರಗಳ ದತ್ತಾಂಶವನ್ನು ಪಡೆಯಲು ನಿವೃತ್ತ ನ್ಯಾಯಾಧೀಶ ಎಚ್.ಎನ್.ನಾಗಮೋಹನ್ ದಾಸ್ ಆಯೋಗವನ್ನು ರಚನೆ ಮಾಡಲಾಗಿದೆ. ಈ ಆಯೋಗಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಪ್ರತಿನಿಧಿಯನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಎಸ್‌ಸಿ ಸಮುದಾಯದ ಶೈಕ್ಷಣಿಕ ಹಾಗೂ ಸರ್ಕಾರಿ ನೌಕರರ ದತ್ತಾಂಶ ಪಡೆಯುವುದು ಅತಿ ಸೂಕ್ಷ್ಮದ ಸಂಗತಿಯಾಗಿದ್ದು, ಒಬಿಸಿ ವರ್ಗಕ್ಕೆ ಸೇರಿದ ನಾಗಮೋಹನ ದಾಸ್ ಅವರ ಆಯೋಗವು ಎಸ್‌ಸಿ ಸಮುದಾಯಕ್ಕೆ ನ್ಯಾಯ ಒದಗಿಸುತ್ತಾರೆ ಎನ್ನುವ ನಂಬಿಕೆ ನಮಗಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಪರಿಶಿಷ್ಟ್ಟ ಜಾತಿಯ ಮಾದಿಗ, ಹೊಲೆಯ, ಲಂಬಾಣಿ, ಭೋವಿ, ಕೊರಚ, ಕೊರಮ ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯದ ತಲಾ ಒಂದು ಪ್ರತಿನಿಧಿಯನ್ನು ನಿಯೋಗಕ್ಕೆ ಸದಸ್ಯರನ್ನಾಗಿ ನೇಮಕ ಮಾಡಬೇಕು. ಈ ನಿಟ್ಟಿನಲ್ಲಿ ಮಾದಿಗ ಸಮುದಾಯದಿಂದ ಹೇಮರಾಜ ಅಸ್ಕಿಹಾಳ ಅವರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೈಜ ಪರಿಶಿಷ್ಟ ಜಾತಿಯವರಿಗೆ ದೊರಕಬೇಕಾದ ಸರ್ಕಾರಿ ನೌಕರಿಗಾಗಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಿ ಸೇವೆಯನ್ನು ಮಾಡುತ್ತಿರುವವರನ್ನು ಗುರುತಿಸುವ ಕಾರ್ಯ ನಡೆಯಬೇಕು, ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ಸುಳ್ಳು ಜಾತಿ ಪ್ರಮಾಣ ಪತ್ರಗಳ ಪ್ರಕರಣಗಳ ಇತ್ಯಾರ್ಥಕ್ಕಾಗಿ ನ್ಯಾಯಾಲಯದಲ್ಲಿ ವಿಶೇಷ ಪೀಠವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಾಜದ ಮುಖಂಡ ನರಸಿಂಹಲು ಪೋತಗಲ್, ಜಗ್ಲಿ ಉರುಕುಂದಪ್ಪ, ನರಸಿಂಹಲು ಮರ್ಚೆಟ್ಹಾಳ್, ಸುಶೀಲ್ ಕುಮಾರ್, ತಾಯಪ್ಪ ಗಧಾರ್, ಪ್ರಭುರಾಜ, ಪಾಂಡು, ಆಕಾಶ ಮಾನ್ವಿ, ಎಂ.ಶರಣಬಸವ, ಮಹೇಂದ್ರಕುಮಾರ ಮಿತ್ರ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...